Header Ads
Breaking News

ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸಿಎಂ ಕುಮಾರಸ್ವಾಮಿ

ಕುಂದಾಪುರ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಲ್ಲಿನ ಸೌಕೂರಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಗುರುವಾರ ರಾತ್ರಿ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ಉತ್ತರ ಕನ್ನಡ ಜಿಲ್ಲೆಯಿಂದ ಚುನಾವಣಾ ಪ್ರಚಾರ ಕಾರ್ಯವನ್ನು ಮುಗಿಸಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪಕ್ಕೆ ತೆರಳುವ ದಾರಿಯಲ್ಲಿ ಬೆಂಗಳೂರಿನ ಜ್ಯೋತಿಷಿಯೊಬ್ಬರ ಸಲಹೆಯ ಮೇರೆಗೆ ಸೌಕೂರಿನ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಅವರು ಶ್ರೀದೇವಿಯ ದರ್ಶನ ಪಡೆದು ಅರ್ಚಕರ ಮೂಲಕ ವಿಶೇಷ ಪೂಜೆ ಸಲ್ಲಿಸಿದರು.

ಮುಖ್ಯಮಂತ್ರಿಗಳು ಸೌಕೂರು ಕ್ಷೇತ್ರಕ್ಕೆ ಆಗಮಿಸುತ್ತಾರೆ ಎನ್ನುವ ಮಾಹಿತಿಯನ್ನು ಪಡೆದುಕೊಂಡ ಸ್ಥಳೀಯ ಗ್ರಾಮದ ಗ್ರಾಮಸ್ಥರು ದೊಡ್ಡ ಸಂಖ್ಯೆಯಲ್ಲಿ ಹಾಜರಿದ್ದು, ಮುಖ್ಯಮಂತ್ರಿಗಳ ಆಗಮನವಾಗುತ್ತಿದ್ದಂತೆ ಜಯಕಾರಗಳನ್ನು ಹಾಕಿದರು. ನೇರವಾಗಿ ದೇವಸ್ಥಾನದ ಒಳಗೆ ಹೋದ ಮುಖ್ಯಮಂತ್ರಿಗಳನ್ನು ಕಾಣಬೇಕು ಎನ್ನುವ ಸ್ಥಳೀಯರ ಅಭಿಲಾಷೆಗಳಿಗೆ ಸ್ಪಂದನ ನೀಡಿದ ಎಚ್‌ಡಿಕೆ ಪೊಲೀಸರ ರಕ್ಷಣಾ ಬೇಲಿಯ ಬಳಿಗೆ ತೆರಳಿ ನೆರೆದಿದ್ದ ಸಾರ್ವಜನಿಕರಿಗೆ ಹಸ್ತಲಾಘವ ನೀಡುವ ಮೂಲಕ ಅವರನ್ನು ಖುಷಿ ಪಡಿಸಿದರು.

ವಿಧಾನಪರಿಷತ್‌ಸದಸ್ಯ ಎಸ್.ಎಲ್.ಭೋಜೇ ಗೌಡ, ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಜಿಲ್ಲಾ ಎಸ್.ಪಿ ನಿಶಾ ಜೇಮ್ಸ್, ಹೆಚ್ಚುವರಿ ಎಸ್.ಪಿ ಕುಮಾರಚಂದ್ರ, ಡಿವೈಎಸ್‌ಪಿ ಬಿ.ಪಿ.ದಿನೇಶ್‌ಕುಮಾರ, ಸಿಪಿಐ ಮಂಜಪ್ಪ ಡಿ.ಆರ್, ಉಪನಿರೀಕ್ಷಕರುಗಳಾದ ಹರೀಶ್‌ಆರ್‌ನಾಯ್ಕ್, ಶ್ರೀಧರ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *