Header Ads
Breaking News

ಸ್ಮಾರ್ಟ್‍ಸಿಟಿ ಕಾಮಗಾರಿ ಸ್ಥಗಿತಗೊಂಡ ಹಿನ್ನೆಲೆ : ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ

ಮಂಗಳೂರು ಮಹಾನಗರ ಪಾಲಿಕೆಯ ಆಡಳಿತ ವೈಫಲ್ಯ, ದುರ್ಬಳಕೆ ಮತ್ತು ಸ್ಮಾರ್ಟ್‍ಸಿಟಿ ಕಾಮಗಾರಿ ಸ್ಥಗಿತಗೊಂಡ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಮಂಗಳೂರು ವತಿಯಿಂದ ನಗರದ ಪಾಲಿಕೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನಾ ಸಭೆ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಜೆ.ಆರ್. ಲೋಬೋ ಅವರು, ಮಂಗಳೂರು ನಗರ ಸ್ಮಾರ್ಟ್‍ಸಿಟಿ ಆಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದೇವು. ನಮ್ಮ ನಗರದಲ್ಲಿ ಸ್ಮಾರ್ಟ್ ಸಿಟಿ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ. ಸಿಕ್ಕಿದ್ದಲ್ಲಿ ಅಗೆಯುತ್ತಾರೆ ಹೊರತು ಯಾವುದೇ ಸ್ಮಾರ್ಟ್‍ನೆಸ್ ನಮ್ಮ ನಗರದಲ್ಲಿ ಕಾಣುತ್ತಿಲ್ಲ. ಸಾಲದಕ್ಕೆ ಉಚ್ಚ ನ್ಯಾಯಾಲಯವೂ ಕೂಡ ಸ್ಮಾರ್ಟ್‍ಸಿಟಿ ಕಾಮಗಾರಿಗೆ ತಡೆ ತಂದಿದ್ದಾರೆ. ಉಚ್ಚ ನ್ಯಾಯಾಲಯ ತಡೆಯಾಜ್ಞೆ ತಂದಿದೆಯಾದ್ರೆ ಇದರಲ್ಲಿ ಯಾವ ರೀತಿಯಲ್ಲಿ ಅವ್ಯವಹಾರ ನಡೆದಿದೆ ಎಂಬುದರ ಬಗ್ಗೆ ಇವತ್ತು ಜನತೆಗೆ ಗೊತ್ತಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆನಂತರ ಮಾಜಿ ಸಚಿವ ರಮಾನಾಥ ರೈ ಸ್ಮಾರ್ಟ್ ಸಿಟಿ ಯೋಜನೆ ಮಂಗಳೂರಿಗೆ ಬರಲು ಕಾಂಗ್ರೆಸ್‍ನ ಪರಿಶ್ರಮವಿತ್ತು. ಆದರೆ ಬಿಜೆಪಿ ಆಡಳಿತ ಯೋಜನೆಯನ್ನು ಸಮರ್ಪಕವಾಗಿ ಕಾರ್ಯಗತಗೊಳಿಸಲು ವಿಫಲವಾಗಿದೆ ಎಂದರು.

ದ.ಕ. ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಮಾತನಾಡಿ, ಇದು ಮೊದಲ ಹಂತದ ಪ್ರತಿಭಟನೆ. ಅಧಿಕಾರಿಗಳು, ಶಾಸಕರಿಗೆ ಈ ಮೂಲಕ ಎಚ್ಚರಿಕೆ ಗಂಟೆ ನೀಡುತ್ತಿದ್ದೇವೆ. ನಮ್ಮದು ಅಧಿಕಾರಕ್ಕಾಗಿ ಹೋರಾಟ ಅಲ್ಲ. ಅನ್ಯಾಯ, ಅವ್ಯವಹಾರದ ವಿರುದ್ಧ ಅಷ್ಟೇ ಎಂದರು.


ಈ ಸಂದರ್ಭ ವಿಧಾನ ಪರಿಷತ್ ಸದಸ್ಯ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕ ಜೆ.ಆರ್.ಲೋಬೋ, ಮುಡಾ ಮಾಜಿ ಅಧ್ಯಕ್ಷ ಸುರೇಶ್ ಬಲ್ಲಾಳ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜೆ.ಸಲೀಂ, ವಿಶ್ವಾಸ್ ಕುಮಾರ್ ದಾಸ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೊ, ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *