Header Ads
Breaking News

ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ದಂಧೆ ಆರೋಪ : ಮಂಗಳೂರಿನಲ್ಲಿ ಎಬಿವಿಪಿಯಿಂದ ಪ್ರತಿಭಟನೆ

ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ದಂಧೆಯ ಆರೋಪ ಕೇಳಿ ಬರುತ್ತಿದೆ. ಡ್ರಗ್ಸ್ ದಂಧೆಯಲ್ಲಿ ತೊಡಗಿಸಿಕೊಂಡಿದ್ದವರನ್ನು ದೇಶದ್ರೋಹಿ ಪ್ರಕರಣದಲ್ಲಿ ದಾಖಲಿಸಿ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ.ಮಂಗಳೂರಿನ ಮಿನಿ ವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಸಡಿಸಿದ್ದಾರೆ. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಬಿವಿಪಿ ಮಂಗಳೂರು ನಗರ ಕಾರ್ಯದರ್ಶಿ ಮಣಿಕಂಠ ಅವರು, ಸ್ಯಾಂಡಲ್‍ವುಡ್‍ನೊಂದಿಗೆ ನಂಟಿರುವ ಬೃಹತ್ ಡ್ರಗ್ಸ್ ಜಾಲವನ್ನು ಎನ್‍ಸಿಬಿ ಅಧಿಕಾರಿಗಳು ಬೇದಿಸಿರುವ ಬಗ್ಗೆ ಮತ್ತು ಡ್ರಗ್ಸ್ ಜಾಲದ ಹಿಂದೆ ಸಮಾಜದಲ್ಲಿ ಇರುವಂತಹ ಪ್ರತಿಷ್ಠಿತ ಪ್ರಭಾವಿ ಶ್ರೀಮಂತ ಕುಟುಂಬಗಳ ವ್ಯಕ್ತಿಗಳು, ಸಿನಿಮಾ ನಟ, ನಟನಿಯರು, ರಾಜಕಾರಣಿಗಳ ಮಕ್ಕಳು ಇರುವ ಮಾಹಿತಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಸಮಾಜಕ್ಕೆ ಮಾದರಿ ಆಗಬೇಕಾಗಿದವರೆಲ್ಲಾ ಇಂತಹ ಚಟಗಳಿಗೆ ಅಂಟಿಕೊಂಡಿರುವುದು ಬೇಸರದ ಸಂಗತಿಯಾಗಿದೆ ಎಂದರು.ಪ್ರತಿಭಟನೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ನ ಸದಸ್ಯರುಗಳು ಭಾಗವಹಿಸಿದ್ದರು.

Related posts

Leave a Reply

Your email address will not be published. Required fields are marked *