Header Ads
Breaking News

ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ. ಶ್ಯಾಮರಾವ್ ನಿಧನ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ.ಶ್ಯಾಮರಾವ್ (97) ಮಂಗಳವಾರ ಬೆಳಿಗ್ಗೆ ಶಿವಮೊಗ್ಗದ ಮೆಟ್ರೋ ಆಸ್ಪತ್ರೆಯಲ್ಲಿ ನಿಧನರಾದರು. ಮೂಲತಃ ಬಿ.ಸಿ.ರೋಡಿನವರಾದ ಇವರ ಕಳೆದ ಕೆಲವು ಸಮಯಗಳಿಂದ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ಶಿವಮೊಗ್ಗದ ಮಗನ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು.

ತಮ್ಮ ಜೀವಿತದ ಬಹು ವರ್ಷಗಳನ್ನು ಶಿವಮೊಗ್ಗದಲ್ಲಿ ಕಳೆದಿದ್ದರೂ, ಇವರು ಮೂಲತಃಬಂಟ್ವಾಳ ತಾಲೂಕಿನ ಬಿಸಿರೋಡಿನವರು. ಕಲಿತದ್ದು 7ನೇ ತರಗತಿವರೆಗೆ. ಆದರೆ ಕನ್ನಡ,
ತಮಿಳು, ಹಿಂದಿ, ಇಂಗ್ಲಿಷ್, ತೆಲುಗು… ಹೀಗೆ ಪಂಚಭಾಷೆ ಬಲ್ಲವರು.ವಿದ್ಯಾರ್ಥಿ ದೆಸೆಯಿಂದಲೇ ಬಾವುಟ ಹಿಡಿಯುವುದು, ಜೈಕಾರ ಕೂಗುವುದು, ಕರಪತ್ರಹಂಚುವುದು ಮೊದಲಾದ ಹುಡುಗಾಟಿಕೆಗಳಿಂದ ಕ್ರಾಂತಿಕಾರಿಯೆಂದು ಗುರುತಿಸಿಕೊಂಡಿದ್ದ ಇವರು1942ರ ಬಳಿಕ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು. 1923 ರಲ್ಲಿ ಬಂಟ್ವಾಳ ತಾಲೂಕಿನ ಬಿ ಮೂಡ ಗ್ರಾಮದಲ್ಲಿ ಜನಿಸಿದ ಶ್ಯಾಮರಾಯ ಆಚಾರ್ಯರು ಎಂ.ಡಿ.ಶ್ಯಾಮರಾವ್ ಎಂದೇ ಪ್ರಸಿದ್ಧರು. ಬಂಟ್ವಾಳ ಮಂಗಳೂರು ಮುಖ್ಯ ರಸ್ತೆಯ ಪಕ್ಕದಲ್ಲಿ ಇದ್ದ ಇವರ ಮನೆಯ ಮುಂದೆ ಹಾದು ಹೋಗುತ್ತಿದ್ದ ಸ್ವಾತಂತ್ರ್ಯ ಚಳುವಳಿಗಾರರ ಸಾಲುಸಾಲು ಹಾಗೂ ಪೊಲೀಸ್ರ ಮಾರ್ಚ್ ಫಾಸ್ಟ್ ಸಣ್ಣ ವಯಸ್ಸಿನ ಶ್ರೀ ಶಾಮರಾಯರಿಗೆ ಪ್ರೇರಣೆಯಾದವು. ತಮ್ಮ ಆರು ಜನ ಮಕ್ಕಳೊಂದಿಗೆ, ಅಣ್ಣನ ಹಾಗೂ ಇತರ ದೂರದ ಊರಿನ ಅನೇಕ ವಿಶ್ವಕರ್ಮ ಜನಾಂಗದ ಮಕ್ಕಳಿಗೆ ಆಶ್ರಯದಾತರಾಗಿ ಮಾದರಿ ಬದುಕನ್ನು ಕಟ್ಟಿಕೊಂಡವರು.ಎಂತೆಂಥಾ ಕಷ್ಟದ ಸನ್ನಿವೇಶಗಳ ನಡುವೆಯೂ ಸ್ವಾಭಿಮಾನಿಯಾಗಿ ಮಾದರಿ ಜೀವನ ನಡೆಸಿ ಇಂದು ಇಹಲೋಕ ಅಗಲಿದ್ದಾರೆ. ಮೃತರು ಪತ್ನಿ ರಾಜೀವಿ, ಪುತ್ರ ಸತೀಶ್ ಹಾಗೂ ಐದುಮಂದಿ ಹೆಣ್ಣುಮಕ್ಕಳ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Related posts

Leave a Reply

Your email address will not be published. Required fields are marked *