Header Ads
Breaking News

ಹತ್ರಾಸ್ ಅತ್ಯಾಚಾರ ಪ್ರಕರಣ ಖಂಡಿಸಿ ಮಂಜೇಶ್ವರದಲ್ಲಿ ಯೂತ್ ಕಾಂಗ್ರೆಸ್‍ನಿಂದ ಪ್ರತಿಭಟನೆ

ಮಂಜೇಶ್ವರ: ಉತ್ತರಪ್ರದೇಶದ ಹತ್ರಾಸ್ ಗ್ರಾಮದಲ್ಲಿ ದಲಿತ ಯುವತಿ ಅತ್ಯಾಚಾರ ನಡೆಸಿ ಕೊಲೆಗೈದ ಆರೋಪಿಗಳನ್ನು ಸಂರಕ್ಷಿಸುವ ನರೇಂದ್ರ ಮೋದಿ ಹಾಗೂ ಯೋಗಿ ಆದಿತ್ಯನಾಥ ಸರಕಾರದ ವಿರುದ್ಧ ಯೂತ್ ಕಾಂಗ್ರೆಸ್ ಮಂಜೇಶ್ವರ ಅಸೆಂಬ್ಲಿ ಸಮಿತಿಯ ನೇತೃತ್ವದಲ್ಲಿ ಹೊಸಂಗಡಿ ಪೇಟೆಯಲ್ಲಿ ಮೊಂಬತ್ತಿ ಬೆಳಗಿಸಿ ಪ್ರತಿಭಟನೆ ನಡೆಸಲಾಯಿತು. ಕಾಸರಗೋಡು ಜಿಲ್ಲಾ ಪಂಚಾಯತು ಸ್ಥಾಯೀ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ ಮಾತನಾಡಿ, ದೇಶದಲ್ಲಿನ ಅತ್ಯಾಚಾರಿಗಳಿಗೆ ಬಿಜೆಪಿ ಸರಕಾರವೇ ಶ್ರೀರಕ್ಷೆಯಾಗಿದೆ ಎಂದು ಅವರು ಆರೋಪಿಸಿದರು.

ಈ ಸಂದರ್ಭ ಯೂತ್ ಕಾಂಗ್ರೆಸ್ ಮಂಜೇಶ್ವರ ಅಸೆಂಬ್ಲಿ ಸಮಿತಿ ಅದ್ಯಕ್ಷ ಇರ್ಷಾದ್ ಮಂಜೇಶ್ವರ ಅಧ್ಯಕ್ಷತೆ ವಹಿಸಿದ್ದು, ಶರೀಫ್ ಪಿ.ಕೆ.ನಗರ್, ನೇತಾರರಾದ ನಾಗೇಶ್ ಮಂಜೇಶ್ವರ, ಇಕ್ಬಾಲ್ ಕಳಿಯೂರು ಮತ್ತಿತರರು ಭಾಗವಹಿಸಿದ್ದರು.

Related posts

Leave a Reply

Your email address will not be published. Required fields are marked *