
ಹರೇಕಳ ಫರೀದ್ ನಗರ ಎಂಬಲ್ಲಿ ಡಿವೈಎಫ್ಐ ಕಾರ್ಯಕರ್ತ, ಮೊನ್ನೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯ ಅಭ್ಯರ್ಥಿ ಮಹಮ್ಮದ್ ಇಕ್ಬಾಲ್ ಎಂಬುವವರ ಮೇಲೆ ರಾಜಕೀಯ ಕಾರಣ ಮುಂದಿಟ್ಟು ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತ ಮುನೀರ್ ಎಂಬಾತನ ಮೇಲೆ ಕಠಿಣ ಕಾನೂನು ಕ್ತಮ ಕೈಗೊಳ್ಳುವಂತೆ ಒತ್ತಾಯಿಸಿ ಡಿವೈಎಫ್ಐ ಉಳ್ಳಾಲ ವಲಯ ಸಮಿತಿಯ ನಿಯೋಗ ಕೊಣಾಜೆ ಠಾಣೆಯ ಪೊಲೀಸ್ಅ ಧಿಕಾರಿಗಳನ್ನು ಭೇಟಿ ಮಾಡಿ ಒತ್ತಾಯಿಸಿತು.ಈ ವೇಳೆ ಡಿವೈಎಫ್ಐ ಉಳ್ಳಾಲ ವಲಯ ಸಮಿತಿಯ ಅಧ್ಯಕ್ಷ ಅಶ್ರಫ್ ಕೆಸಿ ರೋಡ್, ಕಾರ್ಯದರ್ಶಿ ಸುನಿಲ್ ತೇವುಲ, ಉಪಾಧ್ಯಕ್ಷ ಜೀವನ್ ರಾಜ್ ಕುತ್ತಾರ್, ಮತ್ತಿತರರು ಉಪಸ್ಥಿತರಿದ್ದರು.