Header Ads
Header Ads
Header Ads
Breaking News

ಹರೇಕಳದಲ್ಲಿ ಸ್ಕೌಟ್ಸ್-ಗೈಡ್ಸ್ ಮೇಳ, ಕಬ್ ಬುಲ್ ಬುಲ್ ಉತ್ಸವ ಉದ್ಘಾಟನೆ

ಎಳವೆಯಲ್ಲೇ ನಾಯಕತ್ವ ಗುಣ ಬೆಳೆಸಿ, ಮನೆ, ಕುಟುಂಬ ಸಮಾಜದಲ್ಲಿ ಸತ್ಪ್ರಜೆಯಾಗಿ ಬೆಳೆಯುವ ಅವಕಾಶ ಸ್ಕೌಟ್ಸ್-ಗೈಡ್ಸ್ ನಲ್ಲಿದ್ದು ಇದರಲ್ಲಿ ಭಾಗವಹಿಸುವ ಮೂಲಕ ದೇಶಕ್ಕೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ಸಲ್ಲಿಸಬೇಕು ಎಂದು ನಿಟ್ಟೆ ನರ್ಸಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಸುನಂದ ಬಿ. ಅಭಿಪ್ರಾಯಪಟ್ಟರು.

ಭಾರತ್ ಸ್ಕೌಟ್ಸ್-ಗೈಡ್ಸ್ ಉಳ್ಳಾಲ ಸ್ಥಳೀಯ ಸಂಸ್ಥೆ ಹಾಗೂ ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಜಂಟಿ ಆಶ್ರಯದಲ್ಲಿ ಹರೇಕಳ ಶಾಲೆಯಲ್ಲಿ ಎರಡು ದಿನ ನಡೆಯಲಿರುವ ಸ್ಕೌಟ್ಸ್-ಗೈಡ್ಸ್ ಮೇಳ, ಕಬ್ ಬುಲ್‍ಬುಲ್ ಉತ್ಸವ-2019ರ ಶುಕ್ರವಾರ ನಡೆದ ಸಭಾ ಕಾರ್ಯಕ್ರಮ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಶಾಲಾ ಜೀವನದಲ್ಲಿ ಅವಕಾಶ ಸಿಕ್ಕಾಗ ಅದನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವ ಉದ್ದೇಶ ಮಕ್ಕಳಲ್ಲಿ ಇರಬೇಕು, ಇಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗಿಯಾದರೆ ಮುಂದಿನ ಜೀವನಕ್ಕೆ ದಾರಿದೀಪವಾಗುತ್ತದೆ ಎಂದು ತಿಳಿಸಿದರು.

ಸಮಾಜ ಸೇವಕ ಅಬ್ದುಲ್ ಮಜೀದ್ ರಾಜ್ ಕಮಲ್, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸ್ಕೌಟ್ಸ್-ಗೈಡ್ಸ್ ಆಯುಕ್ತ ಎನ್.ಜಿ.ಮೋಹನ್, ಸ್ಕೌಟ್ಸ್-ಗೈಡ್ಸ್ ಸ್ಥಳೀಯ ಸಂಸ್ಥೆ ಆಯುಕ್ತ ರಾಮಶೇಷ ಶೆಟ್ಟಿ, ಕಾರ್ಯದರ್ಶಿ ಎಂ.ಜಿ.ಕಜೆ, ನಿವೃತ್ತ ಮುಖ್ಯ ಶಿಕ್ಷಕ ರವೀಂದ್ರ ರೈ ಕಲ್ಲಿಮಾರ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಮುಹಮ್ಮದ್ ಮುಸ್ತಫಾ ಮಲಾರ್ ಉಪಸ್ಥಿತರಿದ್ದರು.

 

Related posts

Leave a Reply

Your email address will not be published. Required fields are marked *