Header Ads
Breaking News

ಹಳೆಯಂಗಡಿ ಗ್ರಾ.ಪಂ. ಬರ್ಕಾಸ್ತುಗೊಳಿಸುವ ಜಿ.ಪಂ. ನಿರ್ಧಾರ ಸರಿಯಲ್ಲ : ಐವನ್ ಡಿಸೋಜಾ ಹೇಳಿಕೆ

ಹಳೆಯಂಗಡಿ ಗ್ರಾಮ ಪಂಚಾಯತ್ ಬರ್ಕಾಸ್ತುಗೊಳಿಸುವ ಜಿಲ್ಲಾ ಪಂಚಾಯತ್ ಆಡಳಿತದ ನಿರ್ಧಾರ ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ಈ ಪ್ರಕರಣದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಕರ್ತವ್ಯಲೋಪ ಎಸಗಿದ್ದಾರೆ. ಈ ಬಗ್ಗೆ ನ್ಯಾಯಾಂಗ ಹೋರಾಟ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದ್ದಾರೆ.ಬಿಜೆಪಿ ಆಡಳಿತದ ದ.ಕ. ಜಿಲ್ಲಾ ಪಂಚಾಯ್ತಿಯು ಹಳೆಯಂಗಡಿ ಗ್ರಾಮ ಪಂಚಾಯ್ತಿಯನ್ನು ಬರ್ಕಾಸ್ತುಗೊಳಿಸುವ ನಿರ್ಣಯ ಮಾಡಿದ್ದು ರಾಜಕೀಯ ಸೇಡಿನ ನಡೆ. ಒಂದಿಬ್ಬರ ಸ್ವಾರ್ಥಕ್ಕಾಗಿ ಏಕಾಏಕಿ ಕಾನೂನು ಬಾಹಿರವಾಗಿ ಕೈಗೊಂಡಿರುವ ಈ ನಿರ್ಣಯದಿಂದ ತನ್ನ ಅಧಿಕಾರ ದುರುಪಯೋಗಪಡಿಸಿಕೊಂಡಿದೆ. ಆದ್ದರಿಂದ ರಾಜ್ಯ ಸರಕಾರ ಕೂಡಲೆ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.

ಚುನಾಯಿತ ಆಡಳಿತವನ್ನು ಬರ್ಕಾಸ್ತುಗೊಳಿಸಿದ್ದು ರಾಜ್ಯದಲ್ಲೇ ಅಪರೂಪವಾಗಿದ್ದು, ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸಲಾಗಿದೆ. ಈ ಕರಾಳ ನಿರ್ಧಾರವನ್ನು ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಲಿದ್ದೇವೆ. ಅಲ್ಲದೆ, ಮುಂದಿನ ಅಧಿವೇಶನದಲ್ಲಿ ಈ ವಿಚಾರದ ಕುರಿತು ನಿಲುವಳಿ ಮಂಡನೆ ಮಾಡಿ ರಾಜ್ಯದ ಗಮನ ಸೆಳೆಯುವುದಾಗಿ ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಹಳೆಯಂಗಡಿ ಗ್ರಾ.ಪಂ. ಅಧ್ಯಕ್ಷೆ ಜಲಜಾ, ಉಪಾಧ್ಯಕ್ಷೆ ಪದ್ಮಕುಮಾರಿ ಶೆಟ್ಟಿ, ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಯು.ಪಿ. ಇಬ್ರಾಹೀಂ, ಸದಸ್ಯಪರಾದ ಶಾಹುಲ್ ಹಮೀದ್, ಎಂ.ಎಸ್. ಮುಹಮ್ಮದ್, ಪ್ರಮನುಖರಾದ ವಸಂತ್, ಅಶ್ವಿನ್ ಪಿರೇರಾ, ಸವದ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *