Header Ads
Header Ads
Breaking News

ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತನ ಬರ್ಬರ ಹತ್ಯೆ : ಪುತ್ತೂರು ಸಂಪ್ಯ ಪೊಲೀಸ್ ಠಾಣೆ ಎದುರಲ್ಲೇ ಘಟನೆ

ಪುತ್ತೂರು: ಪುತ್ತೂರು ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣೆಯಾದ ಸಂಪ್ಯ ಪೊಲೀಸ್ ಠಾಣೆಯ ಎದುರಿನ ಗಣೇಶೋತ್ಸವ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದಲ್ಲಿ ಬರ್ಬರ ಹತ್ಯೆ ನಡೆದಿದೆ. ಕೊಲೆಯಾದವರನ್ನು ಪುತ್ತೂರು ಹಿಂದೂ ಜಾಗರಣ ವೇದಿಕೆ ತಾಲೂಕು ಕಾರ್ಯದರ್ಶಿಯಾಗಿದ್ದ ಕಾರ್ತಿಕ್ ಸುವರ್ಣ ಎಂದು ಗುರುತಿಸಲಾಗಿದೆ. ಸೆ.3 ರಂದು ಮಧ್ಯರಾತ್ರಿ ಅಂದಾಜು 12ಗಂಟೆಯ ಸುಮಾರಿಗೆ ಗಣೇಶೋತ್ಸವ ಕಾರ್ಯಕ್ರಮ ನಡೆಯುತ್ತಿದ್ದಲ್ಲಿಗೆ ನುಗ್ಗಿದ ದುಷ್ಕರ್ಮಿಗಳು ಕಾರ್ತಿಕ್‌ನ ಎದೆಗೆ ಚೂರಿ ಹಾಕಿದ್ದಾರೆ. ಕೊಲೆಗೆ ಈ ಹಿಂದಿನ ವೈಷಮ್ಯವೇ ಕಾರಣ ಎಂದು ತಿಳಿದುಬಂದಿದೆ. ಆರೋಪಿಗಳಲ್ಲಿ ಒಬ್ಬನನ್ನು ಬಂದಿಸಿದ್ದು, ಪೋಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಎಸ್ಪಿ ಲಕ್ಷ್ಮೀ ಪ್ರಸಾದ್ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Reply

Your email address will not be published. Required fields are marked *