Header Ads
Header Ads
Breaking News

15 ತಿಂಗಳಲ್ಲಿ 2ನೇ ಬಾರಿ ಮುಖ್ಯಮಂತ್ರಿಯಾಗಿ ಬಿಎಸ್‍ವೈ : ಬಿಎಸ್‍ವೈ ನಿವಾಸದಲ್ಲಿ ಬಿರುಸಿನ ಚಟುವಟಿಕೆ

ತಾಳ್ಮೆ, ದೃಢ ನಿರ್ಧಾರದಿಂದಾಗಿ ಬಿಜೆಪಿ ರಾಜ್ಯಾಧ್ಯಕ್ಷ, ಬಿ.ಎಸ್ ಯಡಿಯೂರಪ್ಪ ಅವರು ತಮ್ಮ 7ನೇ ಪ್ರಯತ್ನದಲ್ಲಿ ಸಮ್ಮಿಶ್ರ ಸರ್ಕಾರವನ್ನು ಪತನ ಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ 15 ತಿಂಗಳಲ್ಲಿ ಲಿಂಗಾಯತ ಪ್ರಬಲ ನಾಯಕನಾಗಿರುವ ಯಡಿಯೂರಪ್ಪ 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಮೊದಲು ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಲಿದ್ದು, ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದ ಬಳಿಕವಷ್ಟೇ ಶಾಸಕರು ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಸಭೆಯಲ್ಲಿ ರಾಜ್ಯ ಉಸ್ತುವಾರಿ ಮುರಳೀಧರ ರಾವ್ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಪಕ್ಷೇತರ ಶಾಸಕರಿಬ್ಬರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

ಅತೃಪ್ತ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮುಖ್ಯಮಂತ್ರಿ ವಿಧಾನಸಭೆಯಲ್ಲಿ ಮಂಡಿಸಿದ ವಿಶ್ವಾಸ ಗೊತ್ತುವಳಿ ಬಗ್ಗೆ ನಾಲ್ಕು ದಿನಗಳ ಕಾಲ ಸುದೀರ್ಘ ಚರ್ಚೆ ನಡೆದ ಬಳಿಕ ನಿನ್ನೆ ಸಂಜೆ ಸ್ಪೀಕರ್ ರಮೇಶ್ ಕುಮಾರ್ ಮತಕ್ಕೆ ಹಾಕಿದಾಗ ಅದು ಬಿದ್ದು ಹೋಗಿದೆ. ಇದರೊಂದಿಗೆ ಸರ್ಕಾರ ಪತನಗೊಂಡಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸರ್ಕಾರ ಅಧಿಕಾರಕ್ಕೆ ಬರುವವರೆಗೆ ಅವರು ಉಸ್ತುವಾರಿ ಮುಖ್ಯಮಂತ್ರಿಯಾಗಿ ಕೆಲಸ ಮಾಡಲಿದ್ದಾರೆ.
ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಿನ್ನೆ ಸಂಜೆಯಿಂದ ಎರಡು ದಿನಗಳ ಕಾಲ 144 ಸೆಕ್ಷನ್‍ನಡಿ ನಿಷೇಧಾಜ್ಞೆ ವಿಧಿಸಲಾಗಿದೆ.

Related posts

Leave a Reply

Your email address will not be published. Required fields are marked *