Header Ads
Breaking News

67ನೇ ಅಖಿಲ ಭಾರತ ಸಹಕಾರ ಸಪ್ತಾಹ-2020-ಮಂಗಳೂರಿನಲ್ಲಿ ರಾಜ್ಯ ಮಟ್ಟದ ಸಹಕಾರ ಸಪ್ತಾಹ

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ 67ನೆ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಮಂಗಳೂರಿನಲ್ಲಿ ನ. 15ರಂದು ರಾಜ್ಯ ಮಟ್ಟದ ಸಹಾರ ಸಪ್ತಾಹವನ್ನು ಆಯೋಜಿಸಲಾಗಿದೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.

ಅವರು ಮಂಗಳೂರಿನ ಎಸ್‌ಸಿಡಿಸಿಸಿ ಬ್ಯಾಂಕ್‌ನ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ನಗರದ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ನವೆಂಬರ್ 15ರಂದು ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ ಎಂದರು. ಪ್ರಸಕ್ತ ಸಾಲಿನ ಸಹಕಾರ ಸಪ್ತಾಹ ಕಾರ್ಯಕ್ರಮ ನ. 14ರಿಂದ 20ರವರೆಗೆ ಪ್ರಸಕ್ತ ಸಾಲಿನ ಸಪ್ತಾಹವನ್ನು ಕೊರೊನೋತ್ತರ ಸಹಕಾರ ಸಂಘ ಗಳ ಜವಾಬ್ಧಾರಿ ಮತ್ತು ಪಾತ್ರ ಎಂಬ ಧ್ಯೇಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಳು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮ ಬೆಂಗಳೂರಿನಲ್ಲಿ ಹಾಗೂ ಸಮಾರೋಪ ಕಾರ್ಯಕ್ರಮವನ್ನು ಬಿಜಾಪುರದಲ್ಲಿ ನಡೆಸಲಾಗುವುದು ಎಂದರು.

ಮಂಗಳೂರಿನ ರಾಜ್ಯ ಮಟ್ಟದ ವಿಶೇಷ ಕಾರ್ಯಕ್ರಮವನ್ನು ಸಹಕಾರ ಸಚಿವ ಎಸ್‌ಟಿ. ಸೋಮಶೇಖರ್ ಉದ್ಘಾಟಿಸುವರು. ದೇಶದಲ್ಲಿಯೇ ಮೊದಲ ಬಾರಿಗೆ ಜನರಿಕ್ ಔಷಧಗಳನ್ನು ಸಹಕಾರ ಕ್ಷೇತ್ರದ ಮೂಲಕ ವಿತರಿಸಲು ರಜ್ಯಾ ಸಹಕಾರ ಮಾರಾಟ ಮಹಾ ಮಂಡಲಕ್ಕೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ. ಈ ಯೋಜನೆಗೆ ಈಗಾಗಲೇ ಚಾಲನೆ ದೊರಕಿದ್ದು, ಸಹಕಾರ ಸಪ್ತಾಹ ಸಮಾರಂಭದಲ್ಲಿ ಅವಿಭಜಿತ ದ.ಕ. ಜಿಲ್ಲೆಯಲ್ಲಿ ಸಾಂಕೇತಿಕವಾಗಿ ಐದು ಪ್ರಾಥಮಿಕ ಸಹಕಾರಿ ಮತ್ತು ಕ್ರೆಡಿಟ್ ಸೊಸೈಟಿಗಳಿಗೆ ಔಷಧಿಗಳ ಮಾರಾಟ ಮಳಿಗೆ ತೆರೆಯಲು ಅನುಪತಿ ಪತ್ರವನ್ನು ವಿತರಿಸಲಾಗುವುದು. ಇದೇ ವೇಳೆ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯನಡೆಯಲಿದೆ. ಉದ್ಘಾಟನಾ ಸಮಾರಂಭಕ್ಕೂ ಮೊದಲು ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಕಾರ್ಯಕ್ರಮ ನಡೆಯಲಿರುವ ಸಭಾಂಗಣದವರೆಗೆ ಸಹಕಾರ ಜಾಥಾ ನಡೆಯಲಿದೆ.

ಕಾರ್ಯಕ್ರಮದಲ್ಲಿ ಸಹಕಾರ ಪತ್ರಿಕೆಯ ವಿಶೇಷ ಸಂಚಿಕೆ ಬಿಡುಗಡೆ, ಉತ್ತಮ ನವೋದಯ ಸ್ವ ಸಹಾಯ ಸಂಘಗಳಿಗೆ ಪುರಸ್ಕಾರ, ಸಹಕಾರ ಮಳಿಗೆ ಉದ್ಘಾಟನೆ ನಡೆಯಲಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ವಿವಿವಿಧ ಸಹಕಾರಿ ಸಂಸ್ಥೆಗಳ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಜಯಕರ ಶೆಟ್ಟಿ ಇಂದ್ರಾಳಿ, ಸಹಕಾರ ಸಂಘಗಳ ಉಪ ನಿಬಂಧಕ ಪ್ರವೀಣ್ ಬಿ. ನಾಯಕ್, ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾದ ವಿನಯ ಕುಮಾರ್ ಸೊರಕೆ, ದೇವಿ ಪ್ರಸಾದ್ ಶೆಟ್ಟಿ, ಅಶೋಕ್‌ಶೆಟ್ಟಿ, ಜಯರಾಂ, ಸದಾಶಿವ ಉಳ್ಳಾಲ್, ಜಯರಾಜ್, ವಾದಿರಾಜ್ ಶೆಟ್ಟಿ, ಹರೀಶ್ ಆ?ರ್ಯ ಇನ್ನಿತರರು ಉಪಸ್ಥಿತರಿದ್ದರು.

ವರದಿ: ಶರತ್ ಮಂಗಳೂರು

Related posts

Leave a Reply

Your email address will not be published. Required fields are marked *