

ಹಾಸನ ಜಿಲ್ಲೆಯ ಆಲೂರು ತಾಲೂಕಿನಾದ್ಯಂತ ಬೀದಿ ನಾಯಿಗಳ ಹಾವಳಿಯಿಂದಾಗಿ ಬೈರಾಪುರ ಪಂಚಾಯಿತಿ ವ್ಯಾಪ್ತಿಗೆ ಬರುವ ಮಣಿಪುರ ಗ್ರಾಮದಲ್ಲಿ ಕರುವನ್ನು ಬಲಿ ತೆಗೆದುಕೊಂಡಿರುವ ಘಟನೆ ನಡೆದಿದೆ.
ಬೀದಿ ನಾಯಿಗಳ ಉಪಟಳದಿಂದ ಬೀದಿಯಲ್ಲಿ ಜನರು ಓಡಾಡುವಂತಿಲ್ಲ. ನಾಯಿಗಳು ಹಿಂಬದಿಯಿಂದ ಬಂದು ದಾಳಿ ಮಾಡುತ್ತವೆ. ಅಲ್ಲದೆ ಮಕ್ಕಳು ರಸ್ತೆಯಲ್ಲಿ ಓಡಾಡುವಂತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಬೀದಿನಾಯಿಗಳನ್ನು ಹಿಡಿದು ಸಾರ್ವಜನಿಕರ ನೆಮ್ಮದಿಯಿಂದ ಇರಲು ಗ್ರಾಮ ಪಂಚಾಯಿತಿ ಗ್ರಾಮ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.