

ಮುರಾದಾಬಾದ್: ರೈತ ವಿರೋಧಿ ಕಾನೂನುಗಳನ್ನು ಸರ್ಕಾರ ಹಿಂಪಡೆಯಲೇಬೇಕು ಎಂದು ಮುರಾದಾಬಾದ್ನಲ್ಲಿ ನಡೆದ ಕಿಸಾನ್ ಮಹಾಪಂಚಾಯತ್ನಲ್ಲಿ ರೈತರು ಆಗ್ರಹಿಸಿದರು.
ಶುಕ್ರವಾರ ನಡೆದ ಮಹಾಪಂಚಾಯತ್ನಲ್ಲಿ ಭಾರತೀಯ ಕಿಸಾನ್ ಯೂನಿಯನ್ನ ರಾಕೇಶ್ ಟಿಕಾಯತ್ ಸೇರಿದಂತೆ ವಿವಿಧ ಮುಖಂಡರು ಭಾಗವಹಿಸಿದ್ದರು. ಉತ್ತರ ಪ್ರದೇಶದ ಆರು ಜಿಲ್ಲೆಗಳ ಬಿಕೆಯು ಸಂಘಟನೆಯ ಜಿಲ್ಲಾ ಹಾಗೂ ಮಂಡಲ್ ಮಟ್ಟದ ಪದಾಧಿಕಾರಿಗಳು ಹಾಗೂ ಅಸಂಖ್ಯಾ ರೈತರು ಭಾಗವಹಿಸಿದ್ದರು.
ಮಹಾಪಂಚಾಯತ್ನಲ್ಲಿ ಭಾಗವಹಿಸಿರುವ ಎಲ್ಲಾ ರೈತರಿಗೆ ಅಗತ್ಯವಿರುವ ಮೂಲಭೂತ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಪೊಲೀಸರು ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿಡಲು ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಹರಿಯಾಣದಲ್ಲಿ ನಡೆದ ಅಹಿತಕರ ಘಟನೆ ಇಲ್ಲಿ ಮರುಕಳಿಸದಂತೆ ಎಚ್ಚರ ವಹಿಸಲಾಗಿದೆ.’ ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದರು.