Home ಕರಾವಳಿ Archive by category ಬಂಟ್ವಾಳ (Page 12)

Bantwala : ವಾಣಿಜ್ಯ ಸಂಕೀರ್ಣದಿಂದ ಕೆಳಗೆ ಚಿಮ್ಮುತ್ತಿರುವ ಮಳೆ ನೀರು – ಪಾದಚಾರಿಗಳಿಗೆ ಸಮಸ್ಯೆ

ಬಂಟ್ವಾಳ: ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿರುವ ಪುರಸಭೆಯ ವಾಣಿಜ್ಯ ಸಂಕೀರ್ಣದ ಮುಂಭಾಗ ಖಾಸಗಿ ಬಸ್ಸುಗಳು ತಂಗುತ್ತವೆ. ಪ್ರಯಾಣಿಕರು ವಾಣಿಜ್ಯ ಕೇಂದ್ರದ ಅಂಗಡಿಗಳ ಮುಂಭಾಗದ ಪ್ಯಾಸೇಜ್ ನಲ್ಲಿ ನಿಲ್ಲುತ್ತಾರೆ. ಖಾಲಿ ಬಿಟ್ಟ ಕೋಣೆಯಲ್ಲಿ ಸೊಳ್ಳೆಗಳ ಸಾಮ್ರಾಜ್ಯ. ಅದು ಒಂದು ಭಾಗವಾದರೆ, ಇನ್ನೊಂದು ಸಮಸ್ಯೆ ಈ ಸಂಕೀರ್ಣದ ಹಿಂದೆ ಮತ್ತೊಂದು ವಾಣಿಜ್ಯ ಸಂಕೀರ್ಣವಿದೆ.

ಅಮರನಾಥ ಯಾತ್ರೆ ಕೈಗೊಂಡಿದ್ದ ದ.ಕ. ಜಿಲ್ಲೆಯ ಯಾತ್ರಾರ್ಥಿಗಳು ಸುರಕ್ಷಿತ

ಬಂಟ್ವಾಳ: ಜಮ್ಮು ಕಾಶ್ಮೀರದ ಪವಿತ್ರ ಅಮರನಾಥ ಯಾತ್ರೆ ಕೈಗೊಂಡಿದ್ದ ದ.ಕ.ಜಿಲ್ಲೆಯ ವಿವಿಧ ತಾಲೂಕಿನ ಒಟ್ಟು ೨೦ ಮಂದಿ ಯಾತ್ರಾರ್ಥಿಗಳು ಸುರಕ್ಷಿತವಾಗಿ ಸಿ.ಆರ್.ಪಿ.ಎಫ್ ನ ಕ್ಯಾಂಪ್‌ನಲ್ಲಿ ಇರುವುದಾಗಿ ತಿಳಿದು ಬಂದಿದೆ. ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಸಂತೋಷ್ ಎಂಬವರ ಜೊತೆ  ಕಳೆದ ಜಿಲೈ 4 ರಂದು 20 ಮಂದಿ ಯಾತ್ರಾರ್ಥಿಗಳು ಯಾತ್ರೆ ಕೈಗೊಂಡಿದ್ದರು. ಅತಿಯಾದ ಮಳೆಗೆ ಭೂಕುಸಿತ  ಉಂಟಾದ ಹಿನ್ನಲೆಯಲ್ಲಿ ಜು.7 ರಿಂದ  ಯಾತ್ರೆಯನ್ನು

ಬಂಟ್ವಾಳದ ನಂದಾವರ ಎಂಬಲ್ಲಿ ಗುಡ್ಡ ಕುಸಿತ : ಮಹಿಳೆ ಮೃತ್ಯು

ಬಂಟ್ವಾಳ ತಾಲೂಕಿನ ನಂದಾವರ ಎಂಬಲ್ಲಿ ಗುಡ್ಡ ಕುಸಿತವಾಗಿದ್ದು, ಅದು ಮನೆಯೊಂದರ ಮೇಲೆ ಬಿದ್ದು ಮಹಿಳೆ ಮೃತಪಟ್ಟ ಘಟನೆ ನಡೆದಿದೆ. ಮಹಮ್ಮದ್ ಎಂಬವರ ಮನೆಯ ಮೇಲೆ ಇಂದು ಬೆಳಿಗ್ಗೆ ಗುಡ್ಡ ಕುಸಿದು ಬಿದ್ದಿದೆ. ಝರೀನಾ ಮತ್ತು ಸಫಾ ಎಂಬವರು ಸಿಲುಕಿಕೊಂಡಿದ್ದು ಸಫಾ ಅವರನ್ನು ರಕ್ಷಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಝರೀನಾ ಮನೆಯೊಳಗೆ ಅಸುನೀಗಿದ್ದಾರೆ. ಸ್ಥಳಕ್ಕೆ ಎನ್.ಡಿ.ಆರ್.ಎಫ್, ಅಗ್ನಿಶಾಮಕ ಸಿಬಂದಿ ಸ್ಥಳೀಯರೊಂದಿಗೆ ಸುರಿಯುವ ಮಳೆಯಲ್ಲೂ ರಕ್ಷಣಾ

ಕರಾವಳಿ : ಮುಂದಿನ ಕೆಲವು ಗಂಟೆಗಳ ಕಾಲ ಧಾರಕಾರ ಮಳೆ – ರೆಡ್ ಅಲರ್ಟ್ ಘೋಷಣೆ

ಕರಾವಳಿ ಭಾಗದಲ್ಲಿ ಮುಂದಿನ ಕೆಲವು ಗಂಟೆಗಳ ಕಾಲ ಧಾರಕಾರವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜು.4 ರ ಇಂದು ಮಧ್ಯಾಹ್ನದಿಂದ ಜು.5 ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.4ರ ಮಧ್ಯಾಹ್ನ ಬಳಿಕ ಮುಂದಿನ ಕೆಲವು ಗಂಟೆಗಳ ಕಾಲ ಬಲವಾದ ಮೇಲ್ಮೈ ಮಾರುತಗಳು ಬೀಸಲಿದ್ದು, ಗುಡುಗು ಮತ್ತು ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿರುವುದರಿಂದ ರೆಡ್ ಅಲರ್ಟ್

ಮನೋಜ್ ಕನಪಾಡಿ ಕೈಚಳಕದಲ್ಲಿ ಮೂಡಿಬಂದ ಫೈಬರ್ ಆರ್ಟ್

ಬಂಟ್ವಾಳದ ಖ್ಯಾತ ಫೈಬರ್ ಆರ್ಟ್ ಕಲಾವಿದ ಮನೋಜ್ ಕನಪಾಡಿ ಅವರ ಕೈ ಚಳಕದಲ್ಲಿ ಕುರುಕ್ಷೇತ್ರ ಯುದ್ಧದಲ್ಲಿ ಶಸ್ತ್ರ ತ್ಯಾಗ ಮಾಡಿದ ಅರ್ಜುನನಿಗೆ ಗೀತೆಯನ್ನು ಭೋಧಿಸುವ ಶ್ರೀ ಕೃಷ್ಣನ ಬೃಹತ್ ಕಲಾಕೃತಿಯೊಂದು ರಚನೆಗೊಂಡಿದೆ. ಈ ಕಲಾಕೃತಿಯನ್ನು ಮಂಗಳೂರು ಹೊರ ವಲಯದ ಕಿನ್ನಿಗೋಳಿಯ ಎಳತ್ತೂರಿನಲ್ಲಿರುವ ಶ್ರೀ ಶಕ್ತಿ ದರ್ಶನ ಯೋಗಾಶ್ರಮದ ನೂತನ ಮುರಳೀವನದಲ್ಲಿ ಸ್ಥಾಪಿಸಲಾಗಿದೆ. 10 ಅಡಿ ಎತ್ತರದ ನಿಂತ ಭಂಗಿಯಲ್ಲಿರುವ ಶ್ರೀ ಕೃಷ್ಣನ ವಿಗ್ರಹ, 6 ಅಡಿ ಎತ್ತರದ

bantwala : ಗುಡಿಸಲಲ್ಲಿ ವಾಸವಾಗಿದ್ದ ಬಡ ಕುಟುಂಬಕ್ಕೆ ಕಾಂಗ್ರೆಸ್ ನೇತೃತ್ವದಲ್ಲಿ ಮನೆ ನಿರ್ಮಾಣ

ಬಂಟ್ವಾಳ: ಹಲವು ವರ್ಷಗಳಿಂದ ಸ್ವಂತ ಸೂರಿಲ್ಲದೆ ಗುಡಿಸಲಿನಲ್ಲಿ ವಾಸವಾಗಿದ್ದ ಪರಿಶಿಷ್ಠ ಜಾತಿ ಸಮುದಾಯದ ಬಡ ಕುಟುಂಬಕ್ಕೆ ಸಜೀಪಮೂಡ ವಲಯ ಕಾಂಗ್ರೆಸ್ ನೇತೃತ್ವದಲ್ಲಿ ಸುಜ್ಜಿತವಾದ ಮನೆಯೊಂದು ನಿರ್ಮಾಣಗೊಳ್ಳುತ್ತಿದೆ. ಸ್ಥಳೀಯ ಯುವ ಸಿವಿಲ್ ಇಂಜಿನಿಯರ್ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ ಮಾನವೀಯ ನೆಲೆಯಲ್ಲಿ ಮನೆ ನಿರ್ಮಿಸಿ ಕೊಡುತ್ತಿದ್ದಾರೆ. ಸಜೀಪಮೂಡ ಗ್ರಾಮದ ಕುಚ್ಚಿಗುಡ್ಡೆ ಎಂಬಲ್ಲಿ ಪರಿಶಿಷ್ಠ ಜಾತಿ ಸಮುದಾಯಕ್ಕೆ ಸೇರಿದ ಬಾಡ ಹಾಗೂ ನೊಕ್ಕೆ ದಂಪತಿ ಕುಟುಂಬ

ಸಜೀಪಮೂಡ : ಇಂದಿರಾ ಸೇವಾ ಕೇಂದ್ರದ ಉದ್ಘಾಟನೆ

ಸಜೀಪಮೂಡ ಗ್ರಾಮದ ಬೊಳ್ಳಾಯಿ ಜಂಕ್ಷನ್ ಹಾಗೂ ಸುಭಾಶ್‍ನಗರದ ಬ್ರಹ್ಮಶ್ರೀ ನಾರಾಯಣ ಗುರು ಸಭಾಂಗಣದ ಆವರಣದಲ್ಲಿ ಸಜೀಪಮೂಡ ವಲಯ ಕಾಂಗ್ರೆಸ್ ವತಿಯಿಂದ ನಿರ್ವಹಿಸಲ್ಪಡುವ ಇಂದಿರಾ ಸೇವಾ ಕೇಂದ್ರವನ್ನು ಮಾಜಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಸರ್ಕಾರದ ಎಲ್ಲಾ ಸೌಲಭ್ಯಗಳು ಜನರಿಗೆ ಸುಲಭವಾಗಿ ದೊರಕುವಂತಾಗಲೂ ಪಕ್ಷದ ವತಿಯಿಂದ ಇಂದಿರಾ ಸೇವಾ ಕೇಂದ್ರಗಳನ್ನು ಆರಂಭಿಸಲಾಗಿದ್ದು ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳುವಂತೆ

Bantwala : ನಾಗರಹಾವಿನ ಹೊಟ್ಟೆಗೆ ಸೇರಿದ್ದ ಸುಣ್ಣದ ಪ್ಲಾಸ್ಟಿಕ್ ಡಬ್ಬ – ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದ ವೈದ್ಯರು

ನಾಗರಹಾವಿನ ಹೊಟ್ಟೆ ಸೇರಿದ್ದ ಸುಣ್ಣದ ಪ್ಲಾಸ್ಟಿಕ್ ಡಬ್ಬವನ್ನು ಶಸ್ತ್ರಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರತೆಗೆದು 15 ದಿನಗಳ ಆರೈಕೆಯ ಬಳಿಕ ಯಶಸ್ವಿಯಾಗಿ ಅರಣ್ಯ ಬಿಡಲಾಗಿದೆ. ಉರಗ ತಜ್ಞ ಸ್ನೇಕ್ ಕಿರಣ್ ಹಾಗೂ ಪಶುವೈದ್ಯ ಡಾ. ಯಶಸ್ವಿ ನಾರಾವಿ ಹಾಗೂ ಅರಣ್ಯ ಇಲಾಖೆಯ ಸಕಾಲಿಕ ಕಾರ್ಯಚರಣೆಯಿಂದ ಪಾಣ ಸಂಕಟದಲ್ಲಿ ನರಳುತ್ತಿದ್ದ ನಾಗರ ಹಾವು ಬದುಕುಳಿದಿದೆ. ಕಾವಳಪಡೂರು ಗ್ರಾ.ಪಂ. ವ್ಯಾಪ್ತಿಯ ವಗ್ಗದಲ್ಲಿರುವ ಸಾಲು ಮರ ತಿಮ್ಮಕ್ಕ ಉದ್ಯಾನವನ ಸಮೀಪದಲ್ಲಿರುವ

ಬಲತ್ಕಾರದ ಮತಾಂತರಕ್ಕೆ ನನ್ನ ವಿರೋಧವಿದೆ : ಡಾ. ಪ್ರಭಾಕರ ಭಟ್ ಕಲ್ಲಡ್ಕ

ಬಂಟ್ವಾಳ: ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಕೈ ಬಿಡುವ ನಿರ್ಧಾರಕ್ಕೆ ನನ್ನ ವಿರೋಧವಿದೆ ಎಂದು ಆರ್‍ಎಸ್‍ಎಸ್ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ಅವರು ಬಂಟ್ವಾಳ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರಗಳು ಬದಲಾದಾಗ ಹಿಂದಿನ ಸರ್ಕಾರದ ತಪ್ಪುಗಳನ್ನು ಸರಿಪಡಿಸಿ, ಒಳ್ಳೆಯದನ್ನು ಮುಂದುವರೆಸುವ ಕೆಲಸ ಆಗಬೇಕು. ಆದರೆ ಈಗ ಬಂದಿರುವ ಸರ್ಕಾರ ಹಿಂದಿನವರು ಮಾಡಿದ್ದೆಲ್ಲವನ್ನು ತಪ್ಪು ಎನ್ನುವ

ಜೂನ್ 20ರಂದು ರಾಷ್ಟ್ರೀಯ ವಿಚಾರ ಸಂಕಿರಣ : ಡಾ. ಪ್ರಭಾಕರ್ ಭಟ್ ಕಲ್ಲಡ್ಕ

ಬಂಟ್ವಾಳ: ಕಲ್ಲಡ್ಕ ಶ್ರೀ ರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಸ್ವತ್ವದ ಆಧಾರದ ಮೇಲೆ ಪುನರುತ್ಥಾನ ಎನ್ನುವ ರಾಷ್ಟ್ರೀಯ ವಿಚಾರ ಸಂಕಿರಣ ಜೂ.20 ರಂದು ಮಂಗಳವಾರ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ತಿಳಿಸಿದರು. ಅವರು ಬಿ.ಸಿ.ರೋಡು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಅಂದು ಬೆಳಿಗ್ಗೆ 10 ಗಂಟೆಗೆ ಪತ್ರಕರ್ತ ಅಜಿತ್ ಹನುಮಕ್ಕನವರ್ ವಿಚಾರ ಸಂಕಿರಣ