Home ಕರಾವಳಿ Archive by category ಬಂಟ್ವಾಳ (Page 7)

ಬಂಟ್ವಾಳ: 2ನೇ ವರ್ಷದ ಚಿಣ್ಣರೋತ್ಸವಕ್ಕೆ ಸಿದ್ಧಗೊಂಡಿದೆ ದಡ್ಡಲಕಾಡು ಸರಕಾರಿ ಆಂಗ್ಲಮಾಧ್ಯಮ ಪ್ರೌಢಶಾಲೆ

ಬಂಟ್ವಾಳ: ಶಾಲಾ ವಿದ್ಯಾರ್ಥಿಗಳ ಸಾಂಸ್ಕೃತಿಕ, ಹಾಗೂ ಕ್ರೀಡಾ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯೊದಗಿಸುವ ನಿಟ್ಟಿನಲ್ಲಿ ಎರಡನೇ ವರ್ಷದ ದಡ್ಡಲಕಾಡು ಚಿಣ್ಣರೋತ್ಸವಕ್ಕೆ ಬಂಟ್ವಾಳ ತಾಲೂಕಿನ ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸಿದ್ದಗೊಳ್ಳುತ್ತಿದೆ. ಕಳೆದ ವರ್ಷದ ಅತ್ಯದ್ಭುತ ಯಶಸ್ಸಿನಿಂದ ಪ್ರೇರಣೆ ಪಡೆದು ಈ ವರ್ಷವೂ ಹಲವಾರು ವಿಶಿಷ್ಠ, ವಿನೂತನ

ಬಂಟ್ವಾಳ:ಪಣೋಲಿಬೈಲಿನಲ್ಲಿ ವರ್ಷಾವಧಿ ಕೋಲ ಸಂಪನ್ನ

ಬಂಟ್ವಾಳ: ತುಳುನಾಡಿನ ಕಾರಣಿಕ ಪ್ರಸಿದ್ದ ದೈವಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಶುಕ್ರವಾರ ರಾತ್ರಿ ವರ್ಷಾವಧಿ ಕೋಲ ನಡೆಯಿತು. ಬೆಳಿಗ್ಗೆ ಸಜೀಪ ಮಾಗಣೆಯ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಅವರ ಪೌರೋಹಿತ್ಯದಲ್ಲಿ ಪುಣ್ಯಾಹ, ಪಂಚಗವ್ಯ ದ್ವಾದಶ ನಾಳಿಕೇರ ಗಣಯಾಗ, ನಾಗತಂಬಿಲ, ಫಲಪಂಚಾಮೃತ ಅಭಿಷೇಕ, ಆಶ್ಲೇಷ ಬಲಿ ಪೂಜೆ, ಪಲ್ಲಪೂಜೆ ನಡೆಯಿತು. ಶಾಸಕ ರಾಜೇಶ್ ನಾಯ್ಕ್, ಮಾಜಿ ಸಚಿವ ಬಿ. ರಮನಾಥ ರೈ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಚಂದ್ರಪ್ರಕಾಶ್

ಲೋಕಸಭಾ ಅಭ್ಯರ್ಥಿ ಯಾರೇ ಆದರೂ ನನ್ನ ಬೆಂಬಲವಿದೆ : ಸಂಸದ ನಳಿನ್ ಕುಮಾರ್ ಕಟೀಲ್

ಬಂಟ್ವಾಳ: ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ರಾಜ್ಯ ಬಿಜೆಪಿ ನಿಕಟಪೂರ್ವ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಅವರಿಗೆ ಅಭಿನಂದನೆ ಸಮಾರಂಭ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಿತು. ಅಭಿನಂದನೆ ಸ್ವೀಕರಿಸಿ ನಳಿನ್ ಕುಮಾರ್ ಕಟೀಲು ಮಾತನಾಡಿ ನಾನು ಸಾಧನೆ ಮಾಡಿದೆನೆಂದು ಹೇಳುವುದಿಲ್ಲ. ರಾಜಕೀಯಕ್ಕೆ ಇಚ್ಚೆಯಿಂದ ಬಂದವನಲ್ಲ. ಸಂಘದ ಹಿರಿಯ ಸೂಚನೆಯಂತೆ ಸಂಸದನಾಗಿ ಜನಸೇವೆ ಮಾಡಿದ್ದೇನೆ. ಸಂಘದ ವಿಚಾರಧಾರೆಯನ್ನು ಒಪ್ಪಿಕೊಂಡು ರಾಷ್ಟ್ರದ

ಬಂಟ್ವಾಳ : ಇಂಡೋನೇಷ್ಯಾ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ಬಂಟ್ವಾಳದ ಯುವಕ

ಬಂಟ್ವಾಳ: ಮೂಲತಃ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕನೋರ್ವ ಇಂಡೋನೇಷಿಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾನೆ. ತಾಲೂಕಿನ ಕುಕ್ಕಿಪ್ಪಾಡಿ ಹುಣಸೆ ಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಎಂಬವರ ಪುತ್ರ ಧನೇಶ್ ಶೆಟ್ಟಿ ಇಂಡೋನೇಷಿಯಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದವರು. ವಿವಾಹಿತರಾಗಿರುವ ಧನೇಶ್ ಅವರು ತನ್ನ ಪತ್ನಿಯೊಂದಿಗೆ ಇಂಡೋನೇಷಿಯದ್ದಲ್ಲಿದ್ದು ಆರೋಗ್ಯ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಉತ್ತಮ ಕ್ರೀಡಾಪಟು ಆಗಿರುವ ಅವರಿಗೆ

ಬಂಟ್ವಾಳ: ಬೀದಿಯಲ್ಲಿದ್ದ ಮಾನಸಿಕ ಅಸ್ವಸ್ಥ ವ್ಯಕ್ತಿಯನ್ನು ಆಸ್ಪತ್ರೆ ದಾಖಲಿಸಿದ ಸೇವಾಂಜಲಿ!

ಬಂಟ್ವಾಳ: ಕಳೆದ ಮೂರು ದಿನಗಳಿಂದ ಫರಂಗಿಪೇಟೆ ಬೀದಿಯಲ್ಲಿದ್ದ ಮಾನಸಿಕ ಅಸ್ವಸ್ಥ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಮೂಲಕ ಫರಂಗಿಪೇಟೆಯ ಸೇವಾಂಜಲಿ ಸಂಸ್ಥೆ ಮಾನವೀಯತೆ ಮೆರೆದಿದೆ. ಬುಧವಾರ ಬೆಳಿಗ್ಗೆ ಫರಂಗಿಪೇಟೆಯ ಶ್ರೀರಾಮ ವಿದ್ಯಾಕೇಂದ್ರದ ಆವರಣದ ಬಳಿ ಹಳೆ ಬಟ್ಟೆ ಧರಿಸಿಕೊಂಡು ಮರಳಿನಲ್ಲಿ ಹೊರಳಾಡುತ್ತಿದ್ದ ವ್ಯಕ್ತಿಯನ್ನು ಗಮನಿಸಿದ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ ಅವರು ವಿಚಾರಿಸಿದಾಗ ಆತ ಮಾನಸಿಕ

ಬಂಟ್ವಾಳ: ಕಲ್ಲಡ್ಕದಲ್ಲಿದೆ ಅಪರೂಪದ ಅಪೂರ್ವ ಸಂಗ್ರಹದ ಮ್ಯೂಸಿಯಂ…!!!

ಬಂಟ್ವಾಳ: ರಾಜರ ಕಾಲದಿಂದ ಆರಂಭಗೊಂಡು ಹಿರಿಯರು ಬಳಸಿದಂತಹ ಅಪರೂಪದ ವಸ್ತುಗಳ ಅಪೂರ್ವ ಸಂಗ್ರಹವನ್ನು ನೋಡಬೇಕಾದರೆ ಒಮ್ಮೆ ಕಲ್ಲಡ್ಕದ ಮ್ಯೂಸಿಯಂಗೆ ಭೇಟಿ ನೀಡಬೇಕು. ಒಂದಾಣೆ, ಎರಡಾಣೆ ನಾಣ್ಯಗಳಿಗಿಂತಲೂ ಹಿಂದಿನ ಕಾಲದಲ್ಲಿ ಬಳಕೆಯಲ್ಲಿದ್ದ ನಾಣ್ಯ, ದೇಶ ವಿದೇಶಗಳ ಕರೆನ್ಸಿಗಳ ಅಪಾರವಾದ ಸಂಗ್ರಹ ಇಲ್ಲಿದ್ದು ಕಣ್ತುಂಬಿಕೊಳ್ಳುವ ಅವಕಾಶವನ್ನು ಈ ಮ್ಯೂಸಿಯಂ ಒದಗಿಸುತ್ತದೆ. ಮಹಮ್ಮದ್ ಯಾಸೀರ್ ಎನ್ನುವ ಯುವ ಉದ್ಯಮಿಯ ಹವ್ಯಾಸವಾಗಿ ಆರಂಭಗೊಂಡ ಹಳೆ ಪರಕರಗಳು ಹಾಗೂ

ಜೀರ್ಣೋದ್ಧಾರ ಹಂತದಲ್ಲಿರುವ ತುಂಬೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರ

ಬಂಟ್ವಾಳದ ತುಂಬೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರವು ಜೀರ್ಣೋದ್ಧಾರ ಹಂತದಲ್ಲಿದ್ದು, ಶ್ರೀ ಮಹಾಲಿಂಗೇಶ್ವರನ ದಿವ್ಯ ಸಾನಿಧ್ಯದಲ್ಲಿ ಪ್ರತಿಷ್ಠಾಪನೆಗೊಳ್ಳಲಿರಯವ ನೂತನ ಧ್ವಜ ಸ್ತಂಭದ ತೈಲಾಧಿವಾಸ ಕಾರ್ಯಕ್ರಮವು ಜರುಗಿತು. ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ಧ್ವಜ ಸ್ತಂಭದ ಪ್ರತಿಷ್ಠಾಪನೆಯು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು. ಶ್ರೀ ಕ್ಷೇತ್ರ ಶ್ರೀ ಧಾಮ ಮಾಣಿಲ, ಶ್ರೀ ಮಹಾಲಕ್ಷ್ಮೀ ಸೇವಾ ಪ್ರತಿಷ್ಠಾನದ

ಬಂಟ್ವಾಳ:ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ: ಗಂಡನ ಮನೆಯಲ್ಲಿನ ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದಿದ್ದ ನವ ವಿವಾಹಿತೆಯೋರ್ವಳು ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು,‌ ತಡವಾಗಿ ಬೆಳಕಿಗೆ ಬಂದಿದೆ. ಬಂಟ್ವಾಳ ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ನೌಸೀನ್ (22) ಮೃತಪಟ್ಟ ಮಹಿಳೆಯಾಗಿದ್ದಾಳೆ. ನೌಸೀನ್ ಅವರು ಉಳ್ಳಾಲದ ಆಜ್ಮಾನ್ ಜೊತೆ ಮೂರು ತಿಂಗಳ ಹಿಂದೆ ಪ್ರೇಮ ವಿವಾಹ ವಾಗಿದ್ದರು. ಪ್ರೇಮವಿವಾಹ ಆದರೂ ಕೂಡ ವಿವಾಹ ಸಂದರ್ಭದಲ್ಲಿ 18 ಪವನ್

ಸಜೀಪಮುನ್ನೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಯಿಂದ ಅಧಿಕಾರ ದುರುಪಯೋಗ: ಕಾನೂನು ಕ್ರಮಕ್ಕೆ ಎಸ್‌ಡಿಪಿಐ ಬೆಂಬಲಿತ ಸದಸ್ಯರ ಆಗ್ರಹ

ಬಂಟ್ವಾಳ: ಸಜೀಪಮುನ್ನೂರು ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿಯು ಅಧಿಕಾರ ದುರುಪಯೋಗ ಪಡಿಸುತ್ತಿದ್ದು ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ ಕರ್ತವ್ಯದಿಂದ ವಜಾಗೊಳಿಸುವಂತೆ ಸಜೀಪಮುನ್ನೂರು ಗ್ರಾ.ಪಂ.ನ ಎಸ್‌ಡಿಪಿಐ ಬೆಂಬಲಿತ ಸದಸ್ಯರು ಆಗ್ರಹಿಸಿದ್ದಾರೆ. ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಸ್ಥಳೀಯ ನಾಯಕ ಮುಬಾರಕ್ ಕಾರಾಜೆ ಮಾತನಾಡಿ ಎಸ್‌ಡಿಪಿಐ ಬೆಂಬಲಿತ ೮ ಮಂದಿ ಸದಸ್ಯರನ್ನು ಪಂಚಾಯತಿ ಕಾರ್ಯ ಚಟುವಟಿಕೆಯಲ್ಲಿ  ಯಾವುದೇ

ಬಂಟ್ವಾಳ: ಗೂಡ್ಸ್ ಟೆಂಪೋ ಡಿಕ್ಕಿ, ಒಂದೇ ದಿನದಲ್ಲಿ ಕಿತ್ತು ಹೋಯಿತು ಸೇತುವೆ ತಡೆಬೇಲಿ!

ಬಂಟ್ವಾಳ: ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡು ಶತಮಾನ ಪೂರೈಸಿರುವ ಪಾಣೆಮಂಗಳೂರಿನ ಹಳೆ ಉಕ್ಕಿನ ಸೇತುವೆಯಲ್ಲಿ ಘನವಾಹನಗಳ ಸಂಚಾರ ನಿಷೇಧಿಸುವ ಉದ್ದೇಶದಿಂದ ಮೇಲ್ಭಾಗಕ್ಕೆ ಹಾಕಿರುವ ತಡೆಬೇಲಿ ಒಂದೇ ದಿನದಲ್ಲಿ ಕಿತ್ತು ಬಿದ್ದಿದೆ. ಶುಕ್ರವಾರ ಸೇತುವೆಯ ಎರಡೂ ಬದಿಗಳಲ್ಲೂ ಕಬ್ಬಿಣದ ತಡೆಬೇಲಿ ಅಳವಾಡಿಸಲಾಗಿತ್ತು. ಸರಕು ಸಾಗಿಸುವ ಗೂಡ್ಸ್ ಟೆಂಪೋವೊಂದು ತಡೆಬೇಲಿಯ ಅರಿವಿಲ್ಲದೆ ಸಂಚರಿಸಿದ ಕಾರಣ ಒಂದು ಪಾರ್ಶ್ವದ ಕಬ್ಬಿಣದ ಬೀಮ್ ಕೆಳಕ್ಕುರುಳಿದೆ. ಕಳೆದ ಕೆಲ ದಿನಗಳ