Home ಕರಾವಳಿ Archive by category ಸುಳ್ಯ

ಸುಳ್ಯ : ಪೇರಡ್ಕ ಜುಮ್ಮ ಮಸೀದಿಯಲ್ಲಿ ಈದ್ ಆಚರಣೆ

ಸುಳ್ಯ: ಪೇರಡ್ಕ ಮೋಹಿಯದ್ದಿನ್ ಜುಮಾ ಮಸ್ಜಿದ್ ನಲ್ಲಿ ನಡೆದ ಈದ್ ಪ್ರಾರ್ಥನೆಯಲ್ಲಿ ಖತೀಬ್ ಶಾಫಿ ಧಾರಿಮಿ ರಂಜಾನ್ ಪಾವಿತ್ರತೆ ಬಗ್ಗೆ ತಿಳಿ ಹೇಳಿ ದಾನ,ಧರ್ಮ,ಕುಟುಂಬ ಸಂಬಂಧ, ಸಹೋದರತೆ ಮಹತ್ವ ಬಗ್ಗೆ ತಿಳಿಸಿ ಅದಕ್ಕೆ ಹೆಚ್ಚು ಒತ್ತು ಕೊಡಬೇಕೆಂದು ಹೇಳಿ ಈದ್ ಹಬ್ಬದ ಶುಭಾಶಯ ತಿಳಿಸಿದರು. ಜಮಾತ್ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ಉಪಾಧ್ಯಕ್ಷರು ಟಿ ಬಿ

ಪಿಯುಸಿ ಫಲಿತಾಂಶ: ದ.ಕ. ಪ್ರಥಮ, ಉಡುಪಿ ದ್ವಿತೀಯ

ಕರ್ನಾಟಕ 2023-24ರ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಯುಥಾಪ್ರಕಾರ ಹೆಣ್ಣುಮಕ್ಕಳು ಮೇಲುಗಯ್ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯು ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿದೆ.ಗದಗ ಜಿಲ್ಲೆಯು ಫಲಿತಾಂಶದಲ್ಲಿ ಕೊನೆಯ ಸ್ಥಾನದಲ್ಲಿದೆ. ಬೆಂಗಳೂರಿನ ಮೇಧಾ ಡಿ. ಅವರು ಕಲಾ ವಿಭಾಗದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ; ಅಲ್ಲದೆ ವಿಜಯಪುರದ ವೇದಾಂತ್ ಮತ್ತು ಕವಿತಾ ಕೂಡ ಟಾಪರ್‌ಗಳಲ್ಲಿ ಇದ್ದಾರೆ. ವಿಜ್ಞಾನ ವಿಭಾಗದಲ್ಲಿ 598 ಅಂಕ ಪಡೆದ ವಿದ್ಯಾಲಕ್ಷ್ಮಿ ಮೊದಲ

ಮಾನವೀಯತೆ ಮೆರೆದ ಬೆಳ್ಳಾರೆ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸತೀಶ್

ಸುಳ್ಯ: ಬೆಳ್ಳಾರೆ ದಿನಾಂಕ 08-04-2024 ರಂದು ಬೆಳ್ಳಾರೆ ಪೋಲಿಸ್ ( ಹೆಡ್ ಕಾನ್ಸ್ಟೇಬಲ್ ) ಸತೀಶ್ ಪುತ್ತೂರು- ಸ್ಟೇಟ್ ಬ್ಯಾಂಕ್ ಬಸ್ಸಿನಲ್ಲಿ ಬಿದ್ದು ಸಿಕ್ಕಿದ 10.000/ ನಗದು ಹಾಗೂ ದಾಖಲೆಗಳನ್ನು ಒಳಗೊಂಡ ಪ್ಲಾಸ್ಟಿಕ್ ಲಕೋಟೆಯನ್ನು ಅದರ ವಾರಾಸುದಾರ ರುಕ್ಮಯ್ಯ ಗೌಡ ಪೈಚಾರುರವರ ಮೊಬೈಲ್ ನಂ. ಸಂಗ್ರಹಿಸಿ ಠಾಣೆಗೆ ಕರೆಸಿ ಈ ದಿನ ಹಸ್ತಾಂತರಿಸಿ ಮಾನವೀಯತೆ ಮೆರೆದಿದ್ದಾರೆ. ಇವರ ಈ ಕಾರ್ಯಕ್ಕೆ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದ್ದಾರೆ.

ಬೆಳ್ಳಾರೆ ಚರ್ಚ್‌ಗೆ ಮಂಗಳೂರು ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನಾ ಭೇಟಿ

ಕ್ರೈಸ್ತರ ಕಪ್ಪು ದಿನ ಆಚರಣೆಯ ಸಮಯದಲ್ಲಿ ಪವಿತ್ರ ವಾರದ ಗುರುವಾರದಂದು ಯೇಸು ಕ್ರಿಸ್ತ ತನ್ನ 12 ಶಿಷ್ಯರ ಪಾದ ತೊಳೆಯುವ ಮೂಲಕ ಸರಳತೆಯನ್ನು ಮೆರೆದರು ಎನ್ನುವ ವಿಚಾರದಲ್ಲಿ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನಾ ಅವರು ಸುಳ್ಯ ತಾಲೂಕಿನ ಬೆಳ್ಳಾರೆಯ ಹೋಲಿಕ್ರಾಸ್ ಚರ್ಚ್‌ನಲ್ಲಿ ಪವಿತ್ರ ಗುರುವಾರ ಆಚರಣೆಗಳಿಗೆ ಚಾಲನೆ ನೀಡಿದರು. ಯೇಸು ಸ್ವಾಮಿ ತನ್ನ ಶಿಷ್ಯರ ಪಾದಗಳನ್ನು ತೊಳೆಯುವ ಮೂಲಕ ಲೋಕಕ್ಕೆ ಪ್ರೀತಿ, ಮಾನವೀಯತೆ,

ಕಡಬ ತಾ.ಪಂ.ಗೆ ಲೋಕಾಯುಕ್ತ ಪೊಲೀಸ್ ದಾಳಿ

ಕಡಬ ತಾಲೂಕು ಪಂಚಾಯತ್‌ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಕಡಬ ತಾಲೂಕು ಪಂಚಾಯತ್ ನ ನೂತನ ಕಾರ್ಯ ನಿರ್ವಾಹಕ ಅಧಿಕಾರಿ ಬಿ. ವಿ. ಜಯಣ್ಣ ಅವರು ಈ ಹಿಂದೆ ಸೋಮವಾರಪೇಟೆ ತಾಲೂಕು ಪಂಚಾಯತ್‌ನಲ್ಲಿ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದು, ಅಲ್ಲಿಗೆ ಸಂಬಂಧಿಸಿದ ಅಕ್ರಮ ಅಸ್ತಿ ಪ್ರಕರಣದ ಹಿನ್ನೆಲೆ ಲೋಕಾಯುಕ್ತ ಪೊಲೀಸರು ತನಿಖೆಗಾಗಿ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ. ಸೋಮವಾರಪೇಟೆಯಲ್ಲಿ ಜಯಣ್ಣ ಅವರಿಗೆ ಸೇರಿದ ಮನೆಯ ಮೇಲೆಯೂ ದಾಳಿ ನಡೆದಿದೆ. ಜಯಣ್ಣ

ಅಡಿಕೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು

ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಕುಳ್ಳಂಪ್ಪಾಡಿ ಹಿರಿಯಣ್ಣ ಎಂಬವರ ಕೊಟ್ಟಿಗೆಯಲ್ಲಿ ಸುಲಿದು ದಾಸ್ತಾನು ಇರಿಸಿದ ಅಡಿಕೆ ಗೋಣಿ ಚೀಲಗಳ ಪೈಕಿ 5 ಗೋಣಿ ಚೀಲ ಅಡಿಕೆಯನ್ನು ದಿನಾಂಕ 14.03.2024 ರಂದು ಸಂಜೆ 7:00 ಗಂಟೆಯಿಂದ ದಿನಾಂಕ 15.03.2024 ರಂದು ಬಳಿಗ್ಗೆ 6:00 ಗಂಟೆಯ ಮಧ್ಯೆ ಅವಧಿಯಲ್ಲಿ ಯಾರೋ ಕಳ್ಳರು ಕಳವು ಮಾಡಿದ ಬಗ್ಗೆ ಬೆಳ್ಳಾರೆ ಪೊಲೀಸ್‌ ಠಾಣಾ ಅ.ಕ್ರ 30-2024 ಕಲಂ 380 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ

ಸುಳ್ಯ : ಅಭಿವೃದ್ಧಿ ಕಾಣದ ರಸ್ತೆ: ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಸುಳ್ಯ ತಾಲೂಕಿನ ಕಳಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ 1ನೇ ವಾರ್ಡ್‌ನ ಗ್ರಾಮಸ್ಥರು ಚುನಾವಣೆಯನ್ನು ಬಹಿಷ್ಕಾರಿಸುವುದಾಗಿ ಎಚ್ಚರಿಕಾ ಬ್ಯಾನರನ್ನು ಸಾರ್ವಜನಿಕ ಸ್ಥಳದಲ್ಲಿ ಅಳವಡಿಸುವ ಮೂಲಕ ರಾಜಕಾರಣಿಗಳನ್ನು, ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ. ಕಳಂಜ ಗ್ರಾ.ಪಂ. ವ್ಯಾಪ್ತಿಯ ಒಂದನೇ ವಾರ್ಡ್ ಪಂಜಿಗಾರ್ ಮಣಿಮಜಲು ಸಂಪರ್ಕ ರಸ್ತೆ ಹಾಗೂ ಪೂರಕ ದಾರಿದೀಪಗಳಿಲ್ಲದೆ ಗ್ರಾಮಸ್ಥರಾದ ನಾವು ಸಂಕಷ್ಟ ಅನುಭವಿಸುತ್ತಿದ್ದು, ಈ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೂ ಸಹಿತ ಕಳಂಜ

ಮಂಗಳೂರು : ಕರಾವಳಿಯಲ್ಲಿ ಮೂರು ದಿನಗಳ ಕಾಲ ಮಳೆ

ಕರ್ನಾಟಕದ ಕರಾವಳಿ ಮತ್ತು ಮಲೆನಾಡು, ತೆಂಕಣ ಒಳನಾಡಿನಲ್ಲಿ ಮಾರ್ಚ್ 21ರಿಂದ ಮೂರು ದಿನಗಳ ಕಾಲ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಕರಾವಳಿಯಲ್ಲಿ ಮೋಡ ಮುಚ್ಚಿದ ವಾತಾವರಣ ಮುಂದುವರಿಯಲಿದೆ. ಗಾಳಿ ಕೂಡ ಬಲವಾಗಿ ಬೀಸಲಿದೆ ಎನ್ನಲಾಗಿದೆ. ಕರ್ನಾಟಕದ ಬಡಗಣ ಭಾಗದಲ್ಲಿ ಒಣ ಹವೆ ಮುಂದುವರಿಯಲಿದೆ. ಕೊಪ್ಪಳದಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಅದು ಆ ಸುತ್ತ ಕೆಲ ದಿನಗಳ ಕಾಲ ‌ಮುಂದುವರಿಯುತ್ತದೆ ಎಂದೂ ತಿಳಿಸಲಾಗಿದೆ.

ಸುಳ್ಯ: ಬೆಳ್ಳಾರೆ ಕನ್ಸ್ಟ್ರಕ್ಷನ್ ನ ಮಾಲಕ ಇಂಜಿನಿಯರ್ ಮೊಹಮ್ಮದ್ ನಿಧನ

ಬೆಳ್ಳಾರೆ ನಿವಾಸಿ ಇಂಜಿನಿಯರ್ ಮುಹಮ್ಮದ್ ರವರು ಅಲ್ಪದಿನದ ಅನಾರೋಗ್ಯದಿಂದ ರಾತ್ರಿ ಪುತ್ತೂರಿನ ದರ್ಬೆಯ ಆಸ್ಪತ್ರೆಯಲ್ಲಿ ನಿಧನರಾದರು. ಸುಳ್ಯ ತಾಲೂಕಿನಲ್ಲಿ ಇಂಜಿನಿಯರ್ ಮೊಹಮ್ಮದ್ ಎಂದು ಚಿರಪರಿಚಿತರಾಗಿರುವ ಇವರು ಸರ್ವಧರ್ಮದವರೊಂದಿಗೆ ಉತ್ತಮ ಬಾಂಧವ್ಯವನ್ನುಹೊಂದಿದ್ದರು.ಬೆಳ್ಳಾರೆಯ ಕೇಂದ್ರ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಬೆಳ್ಳಾರೆ ನಿವಾಸಿಯಾಗಿರುವ ಆಶ್ರಫ್ ಮತ್ತು ಆರೀಫ್ ರವರ ತಂದೆ ಇಂದು ಬೆಳ್ಳಾರೆ ಕೇಂದ್ರ ಜುಮ್ಮ ಮಸೀದಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಮಂಡೆಕೋಲು: ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸುಳ್ಯ: ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿ ಅವರು ಸೋಮವಾರ ಬಿಡುಗಡೆಗೊಳಿಸಿದರು. ದೇವರ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ವಿಧಿ ವಿಧಾನಗಳು ಎಪ್ರಿಲ್ 26 ರಿಂದ ಮೊದಲ್ಗೊಂಡು ಮೇ 4 ರವರೆಗೆ ನಡೆಯಲಿದ್ದು, ಈ ಕುರಿತ ಸರ್ವ ಕಾರ್ಯಗಳಿಗೆ ತಂತ್ರಿಗಳು ಶುಭ ಹಾರೈಸಿದರು. ಅಲ್ಲದೆ ಕೋಟಿ ಲೇಖನ