Home ಕರಾವಳಿ Archive by category ಸುಳ್ಯ (Page 2)

ಬೆಳ್ಳಾರೆ: ಎನ್‌ಐಎ ಅಧಿಕಾರಿಗಳಿಂದ ಮನೆಯೊಂದಕ್ಕೆ ದಾಳಿ

ಬೆಳ್ಳಾರೆ: ಎನ್‌ಐಎ ಅಧಿಕಾರಿಗಳ ತಂಡವೊಂದು ದಾಳಿ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಣೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದಿದೆ.ಎನ್‌ಐಎ ಅಧಿಕಾರಿಗಳ ತಂಡವು ಮನೆಯೊಂದಕ್ಕೆ ದಿಢೀರ್ ದಾಳಿ ಮಾಡಿದ್ದು, ಮಾಹಿತಿ ಕಲೆ ಹಾಕಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ನಡೆದ ದಾಳಿ ಇದಾಗಿದೆ ಎನ್ನಲಾಗಿದೆ.

ಕಡಬ: ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ

ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸರಕಾರೀ ಪ್ರಥಮ ದರ್ಜೆ ಕಾಲೇಜು ಬಳಿ ಮಾಸ್ಕ್ ಮತ್ತು ಹ್ಯಾಟ್ ದರಿಸಿದ್ದ ದಾಳಿಕೋರನೊಬ್ಬನು ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಕಾಲೇಜು ಆವರಣದಲ್ಲಿ ನಿಂತಿದ್ದಾಗ ಆಮ್ಲ ದಾಳಿ ಆಗಿದೆ. ಮುಖಕ್ಕೆ ಗಂಭಿರ ಗಾಯಗಳಾಗಿರುವುದಾಗಿ ಹೇಳಲಾಗಿದೆ. ಸಂತ್ರಸ್ತ ಯುವತಿಯರನ್ನು ಕಡಬ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರಂಭಿಕ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ಕರೆ

ಸುಳ್ಯ: ಹರಿಹರ, ಕೊಲ್ಲಮೊಗ್ರು ಗ್ರಾ.ಪಂ. ವ್ಯಾಪ್ತಿಯ ವಿವಿಧ ಬೇಡಿಕೆಗಳ ಬಗ್ಗೆ ಸಿಎಂಗೆ ಮನವಿ

ಸುಳ್ಯ: ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆದಿರುವ ಹರಿಹರ ಕೊಲ್ಲಮೊಗ್ರು ಗ್ರಾಮದ ವಿವಿಧ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ ಗ್ರಾಮಸ್ಥರು ಮನವಿ ಸಲ್ಲಿಸಿದರು.ಕಲ್ಮಕಾರು ಶಾಲಾ ಜಮೀನನ್ನು ಶಾಲಾ ಹೆಸರಿನಲ್ಲಿ ಮಾಡಿ ಕೊಡುವಂತೆ, ಬೆಂಡೋಡಿ ಸರಕಾರಿ ಶಾಲೆಗೆ ಶೌಚಾಲಯ, ರಂಗಮಂದಿರ ಮತ್ತಿತರ ಸೌಲಭ್ಯ ಕಲ್ಪಿಸುವಂತೆ, ಸೇರಿದಂತೆ ಗ್ರಾಮ ವಾಸ್ತವ್ಯ ನಡೆದ ಅವಳಿ ಗ್ರಾಮಕ್ಕೆ ಸಂಬಂಧಿಸಿದಂತೆ ಗ್ರಾಮ ವಾಸ್ತವ್ಯ ದಲ್ಲಿ

ಬೈಕ್ ಮತ್ತು ಬಸ್ ನಡುವೆ ಅಪಘಾತ: ಬೈಕ್ ಸವಾರ ಸಾವು

ಕಡಬ, ಬೈಕ್ ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ಸೋಮವಾರದಂದು ನಡೆದಿದೆ. ಮೃತ ಬೈಕ್ ಸವಾರನನ್ನು ಕೊಂಬಾರು ಮಣಿಭಾಂಡ ತೇರೆಬೀದಿ ನಿವಾಸಿ ನೆಟ್ಟಣದಲ್ಲಿ ಮೆಕ್ಯಾನಿಕ್ ಆಗಿದ್ದ ವಾಸುದೇವ ಗೌಡ ಎಂದು ಗುರುತಿಸಲಾಗಿದೆ. ಕೆಎಸ್ಸಾರ್ಟಿಸಿ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಎದುರುನಿಂದ ಬಂದ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ

ಅಧಿಕಾರಿಗಳು ಒಂದೇ ವೇದಿಕೆ ಕುಳಿತು ಜನರ ಸಮಸ್ಯೆಗಳಿಗೆ ಪರಿಹಾರ ನೀಡಲು ಪತ್ರಕರ್ತರ ಗ್ರಾಮ ವಾಸ್ತವ್ಯ ಮುನ್ನುಡಿ : ಶಾಸಕಿ ಭಾಗೀರಥಿ ಮುರುಳ್ಯ

ಗ್ರಾಮದ ಜನರಿಗೆ ಸರಕಾರಿ ಕಚೇರಿಗಳಿಗೆ ಹೋಗಿ ತಮ್ಮ ಕೆಲಸ ಕಾರ್ಯವನ್ನು ಮಾಡಲು ಕಷ್ಟವಾಗುವ ಇಂತ ದಿನದಲ್ಲಿ ಗ್ರಾಮದ ಒಂದೇ ವೇದಿಕೆಯಲ್ಲಿ ಎಲ್ಲ ಅಧಿಕಾರಿಗಳು ಕುರಿತು ಸಮಸ್ಯೆ ಪರಿಹರಿಸುವಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಮುನ್ನುಡಿ‌ ಬರೆದಿರುವುದು ಶ್ಲಾಘನೀಯ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.  ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಂಟೀ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಕೊಲ್ಲಮೊಗ್ರದಲ್ಲಿ ನಡೆದ ಪತ್ರಕರ್ತರ  ಗ್ರಾಮ ವಾಸ್ತವ್ಯ ಕಾರ್ಯಕ್ರಮ

ಗುಡ್ಡೆ ಹೋಟೆಲಿನ ಅಯ್ಯಪ್ಪ ಸ್ವಾಮಿ ಭಕ್ತವೃಂದದವರಿಂದ ಹೆಮ್ಮುಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿಗಾಗಿ ನೆರವು

ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ,ಎಸ್.ಎಮ್. ಡಿ .ಸಿ.ಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಊರಿನ ಜನತೆ ತಮ್ಮ

ಸುಬ್ರಹ್ಮಣ್ಯ ಶ್ರೀ ಗಳ ಭೇಟಿ ಮಾಡಿದ ಅರಣ್ಯ ಸಚಿವರು

ಸುಬ್ರಹ್ಮಣ್ಯ: ರಾಜ್ಯ ಸರಕಾರದ ಪರಿಸರ,ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಆರಂಭದಲ್ಲಿ ಸಚಿವರು ಶ್ರೀಗಳಿಗೆ ಶಾಲು ಹಾಕಿ ಫಲ ಕಾಣಿಕೆ ನೀಡಿ ಹರಸಿದರು.ಬಳಿಕ ಶ್ರೀಗಳು ಸಚಿವರಿಗೆ ಶಾಲು ಹೊದಿಸಿ ಫಲ ಮಂತ್ರಾಕ್ಷತೆ ನೀಡಿ ಹರಸಿದರು. ಪ್ರಮುಖರಾದ ಕೃಷ್ಣಪ್ಪ, ರಕ್ಷಿತ್ ಶಿವರಾಂ, ಸುಧೀರ್ ಶೆಟ್ಟಿ, ಅಶೋಕ್ ನೆಕ್ರಾಜೆ, ನಿತ್ಯಾನಂದ ಮುಂಡೋಡಿ,ಭರತ್

ಸುಳ್ಯ: 5.6 ಕೋಟಿ ಸಸಿಗಳ ನಾಟಿ; ಈಶ್ವರ ಖಂಡ್ರೆ

ನಾನು ಸಚಿವನಾದ ಬಳಿಕ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ 5 ಕೋಟಿ 6 ಲಕ್ಷ ಸಸಿಗಳನ್ನು ನಾಟಿ ಮಾಡಿದ್ದೇವೆ. ಈ ಮೂಲಕ ಹರಿಸು ವ್ಯಾಪ್ತಿ ಹೆಚ್ಚಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದು ಪರಿಸರ, ಅರಣ್ಯ ಮತ್ತು ಜೀವಶಾಸ್ತ್ರ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಅವರು ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಗೆ ಭೇಟಿ ನೀಡಿದ ಸಂದರ್ಶನದಲ್ಲಿ ಪತ್ರಕರ್ತರ ಜೊತೆ ಮಾತನಾಡಿದರು. ಸಸಿ ನಾಟಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಗೊಂದಗಳು ಉಂಟಾಗದಂತೆ ಅದಕ್ಕೆ

ಸುಬ್ರಹ್ಮಣ್ಯ: ಕುಕ್ಕೆ ದೇವಳಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ

ಸುಬ್ರಹ್ಮಣ್ಯ: ರಾಜ್ಯ ಸರಕಾರದ ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಕ್ಕೆ ಭೇಟಿ ನೀಡಿದರು.ಶ್ರೀ ದೇವರ ದರುಶನ ಮಾಡಿದ ಸಚಿವರಿಗೆ ದೇವಳದ ಅರ್ಚಕ ರಮೇಶ ನೂರಿತ್ತಾಯರು ಶಾಲು ಹೊದಿಸಿ ಮಹಾಪ್ರಸಾದ ಸ್ವೀಕರಿಸಿದರು.ನಂತರ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.ಬಳಿಕ ಶ್ರೀ ದೇವಳದಲ್ಲಿ ಪ್ರಸಾದ ಬೋಜನ ಸ್ವೀಕರಿಸಿದರು.ಬಳಿಕ ಆಡಳಿತ ಕಚೇರಿಗೆ ಭೇಟಿ ನೀಡಿದ ಸಚಿವರನ್ನು ಸನ್ಮಾನಿಸಿ

ತೆಕ್ಕಿಲ್ ಶಾಲಾ ವತಿಯಿಂದ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಅವರಿಗೆ ಸನ್ಮಾನ

ಸುಳ್ಯದ ತೆಕ್ಕಿಲ್ ಮಾದರಿ ಆಂಗ್ಲ ಮಾಧ್ಯಮ ಶಾಲೆ, ಗೂನಡ್ಕ ವತಿಯಿಂದ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜಿಮ್ ರವರನ್ನು ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ಇವರು ಮೈಸೂರು ಪೇಟ ತೊಡಿಸಿ ಶಾಲು, ಹಾರ ಮತ್ತು ಸ್ಮರಣಿಕೆ, ತೆಕ್ಕಿಲ್ ದಶದೀವಿಕೆ ಹಾಗು ಬೆಳಕಿನೆಡೆಗೆ 10 ಮುಸ್ಲಿಂ ಕತೆಗಳ ಪುಸ್ತಕ ನೀಡಿ ಸ್ವಾಗತಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸಂಪತ್ ಜೆ ಡಿ ಇವರು ಶಾಲೆಯ ಶಿಕ್ಷಕ