Home Archive by category ಕರಾವಳಿ (Page 119)

ನರೇಂದ್ರ ಮೋದಿ ಸರಕಾರವನ್ನು ಕಿತ್ತೊಗೆಯಲು ಕಾರ್ಮಿಕ ವರ್ಗದ ದೃಢ ನಿರ್ಧಾರ – ಜೆ. ಬಾಲಕೃಷ್ಣ ಶೆಟ್ಟಿ

ಒಳ್ಳೆಯ ದಿನಗಳು ಬರಲಿದೆ ಎಂದು ದೇಶದ ಜನತೆಗೆ ಮಂಕುಬೂದಿ ಎರಚಿ ಅಧಿಕಾರಕ್ಕೇರಿದ ನರೇಂದ್ರ ಮೋದಿ ಸರಕಾರ ಕಳೆದ 9 ವರ್ಷಗಳಲ್ಲಿ ನಿರಂತರವಾಗಿ ಕಾರ್ಪೊರೇಟ್ ಕಂಪೆನಿಗಳ ಹಿತ ಕಾಯುವ ಮೂಲಕ ಜನಸಾಮಾನ್ಯರ ಬದುಕನ್ನು ಸರ್ವನಾಶಗೊಳಿಸಿದೆ. ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಯವರ ಕೈಗೊಪ್ಪಿಸಿ ದೇಶದ ಆರ್ಥಿಕತೆಯನ್ನು ದಿವಾಳಿ ಮಾಡಿದೆ.ಇಂತಹ ಜನದ್ರೋಹಿ ಸರಕಾರ ಮತ್ತೆ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ದೇವೇಗೌಡ ದಂಪತಿ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ಭಾರತ ಸರ್ಕಾರದ ಮಾಜಿ ಪ್ರಧಾನ ಮಂತ್ರಿ ಹಾಗೂ ರಾಜ್ಯ ಸಭಾ ಸಂಸತ್ ಸದಸ್ಯರಾದ ಹೆಚ್.ಡಿ. ದೇವೇಗೌಡ ಹಾಗೂ ಪತ್ನಿ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ವಿಶೇಷ ಪೂಜೆಗಳನ್ನು ಸಲ್ಲಿಸಿದರು. ದೇವೇಗೌಡ ದಂಪತಿಗಳು ನಿನ್ನೆ ಮಧ್ಯಾಹ್ನ ಬೆಂಗಳೂರು ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ನಿರೀಕ್ಷೆ ಇತ್ತು. ಆದರೆ ಸಕಲೇಶಪುರ, ಸುಬ್ರಹ್ಮಣ್ಯ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇದ್ದ

ಮಂಗಳೂರು: ಶೌರ್ಯ ಜಾಗರಣ ರಥಯಾತ್ರೆಗೆ ಭವ್ಯ ಸ್ವಾಗತ

ವಿಶ್ವ ಹಿಂದೂ ಪರಿಷತ್‍ನ 60ನೇ ವರ್ಷದ ಪ್ರಯುಕ್ತ ಬಜರಂಗದಳ ನೇತೃತ್ವದಲ್ಲಿ ನಡೆಯುತ್ತಿರುವ ಶೌರ್ಯ ಜಾಗರಣ ರಥಯಾತ್ರೆ ಇಂದು ಬೆಳಗ್ಗೆ ಮಂಗಳೂರು ಪ್ರವೇಶಿಸಿದ್ದು ಅಡ್ಯಾರ್‍ನಲ್ಲಿ ಭವ್ಯ ಸ್ವಾಗತ ಕೋರಲಾಯಿತು. ಈ ವೇಳೆ ವಿಎಚ್ ಪಿಯ ಶರಣ್ ಪಂಪ್ ವೆಲ್, ಪುರುಷೋತ್ತಮ್, ಎಂ.ಬಿ ಪುರಾಣಿಕ್ ಮೊದಲಾದವರು ಉಪಸ್ಥಿತರಿದ್ದರು. ಅಪರಾಹ್ನ 2.30ಕ್ಕೆ ಅಂಬೇಡ್ಕರ್ ವೃತ್ತದಿಂದ ಕದ್ರಿ ಮೈದಾನದ ವರೆಗೆ ಭವ್ಯವಾದ ಶೋಭಾಯಾತ್ರೆ ನಡೆಯಲಿದ್ದು, ವಿವಿಧ ಟ್ಯಾಬ್ಲೋಗಳು

ಮೂಡುಬಿದಿರೆ : ಆಳ್ವಾಸ್ ಪ್ರಗತಿ: 1,871 ಮಂದಿಗೆ ಉದ್ಯೋಗ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಎರಡು ದಿನಗಳು ನಡೆದ  ಬೃಹತ್ ಉದ್ಯೋಗ ಮೇಳ ಆಳ್ವಾಸ್ ಪ್ರಗತಿಯ 13ನೇ ಆವೃತಿಯಲ್ಲಿ  1,871 ಉದ್ಯೋಗಾಕಾಂಕ್ಷಿಗಳು ಸ್ಥಳದಲ್ಲಿಯೇ ನೇಮಕಗೊಂಡಿದ್ದಾರೆ. ಭಾಗವಹಿಸಿದ ಒಟ್ಟು 198 ಕಂಪನಿಗಳ ಪೈಕಿ 174 ಕಂಪನಿಗಳು, 3,259 ಜನರನ್ನು ಮುಂದಿನ ಹಂತಕ್ಕೆ ಆಯ್ಕೆ ಮಾಡಿವೆ. ಉದ್ಯೋಗ ಮೇಳದ ಎರಡನೇ ದಿನ 2,284 ಉದ್ಯೋಗಾಕಾಂಕ್ಷಿಗಳು ಪಾಲ್ಗೊಂಡಿದ್ದು, ಒಟ್ಟು ಎರಡು ದಿನಗಳ ಉದ್ಯೋಗ ಮೇಳದಲ್ಲಿ 10,252 ಅಭ್ಯರ್ಥಿಗಳು ಭಾಗವಹಿಸಿದರು.

ಮಂಜೇಶ್ವರ: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಕಾರು ಢಿಕ್ಕಿ, ರಸ್ತೆಯಲ್ಲಿ ವಿದ್ಯಾರ್ಥಿ ಶವವಿಟ್ಟು ನಾಗರಿಕರಿಂದ ಪ್ರತಿಭಟನೆ

ಮಂಜೇಶ್ವರದ ಉದ್ಯಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಕಾರೊಂದು ಢಿಕ್ಕಿಯಾಗಿ ವಿದ್ಯಾರ್ಥಿ ದಾರುಣವಾಗಿ ಮೃತಪಟ್ಟಿದ್ದು, ಘಟನೆಯನ್ನು ಖಂಡಿಸಿ ಇಂದು ನಾಗರಿಕರು ವಿದ್ಯಾರ್ಥಿ ಸುಮಂತ್‌ನ ಮೃತದೇಹವಿಟ್ಟು ಪ್ರತಿಭಟನೆ ನಡೆಸಿದರು. ಉದ್ಯಾವರ ಮಾಡ ಕ್ಷೇತ್ರ ಸಮೀಪದ ರಘುನಾಥ ಆಳ್ವ ಎಂಬವರ ಪುತ್ರ ಮಂಗಳೂರು ಖಾಸಗಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸುಮಂತ್ (17) ಸಾವನ್ನಪ್ಪಿದ ವಿದ್ಯಾರ್ಥಿಯಾಗಿದ್ದಾನೆ.  ಸುಮಂತ್‌ನ ತಲೆಗೆ

ನೆಕ್ಸಾ ಮಾಂಡವಿ ಮೋಟಾರ್‍ಸ್‌ ನಲ್ಲಿ 100ಕ್ಕಿಂತಲೂ ಅಧಿಕ ಕಾರುಗಳು ಮಾರಾಟ

ಮಂಗಳೂರಿನ ಮೆರಿಹಿಲ್‌ನಲ್ಲಿರುವ ನೆಕ್ಸಾ ಮಾಂಡವಿ ಮೋಟಾರ್‍ಸ್‌ನಲ್ಲಿ ಸೆಪ್ಟಂಬರ್ ತಿಂಗಳಿನಲ್ಲಿ 100ಕ್ಕಿಂತಲೂ ಅಧಿಕ ಕಾರುಗಳು ಮಾರಾಟವಾಗಿದೆ. ಗ್ರಾಹಕರ ಅಚ್ಚುಮೆಚ್ಚಿನ ಕಾರುಗಳಾದ ಎಕ್ಸ್‌ಎಲ್ ೬, ಫೋನ್ಕ್ಸ್, ಬಲೆನೋ, ಗ್ರಾಂಡ್ ವಿಟಾರ, ಜಿಮ್ನಿ, ಇಗ್ನೀಸ್, ಇನ್ವಿಕ್ಟೋ, ಕಿಯಾಜ್ ಕಾರುಗಳು ಮಾರಾಟವಾಗಿದೆ. ಕಾರು ಮಾರಾಟ ಕ್ಷೇತ್ರದಲ್ಲಿ ಹೆಸರು ಪಡೆದುಕೊಂಡಿರುವ ನೆಕ್ಸಾ ಕಾರು ಶೋರೂಂ ದಾಖಲೆ ಮಟ್ಟದಲ್ಲಿ ಕಾರುಗಳನ್ನು ಮಾರಾಟ ಮಾಡುವಲ್ಲಿ ಯಶಸ್ವಿಯಾಗಿರುವ

ಕಡಿಮೆ ಅಂಕ ನೀಡಿದಕ್ಕಾಗಿ, ಶಿಕ್ಷಕಿಯ ವಾಟರ್ ಬಾಟಲ್‍ಗೆ ಮಾತ್ರೆ ಹಾಕಿದ ವಿದ್ಯಾರ್ಥಿನಿಯರು…!!

ಸಾಂದರ್ಭಿಕ ಚಿತ್ರ ಉಳ್ಳಾಲ : ಶಾಲಾ ಪರೀಕ್ಷೆಯ ಗಣಿತ ವಿಷಯದಲ್ಲಿ ಕಡಿಮೆ ಅಂಕ ಹಾಗೂ ಒಂದು ಮಾರ್ಕ್ ಕಡಿಮೆ ನೀಡಿದರೆಂಬ ದ್ವೇಷಕ್ಕೆ ಆರನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಗಣಿತ ಶಿಕ್ಷಕಿಯ ವಾಟರ್ ಬಾಟಲಿಗೆ ಎಕ್ಸ್ಪೈರಿ ಆದ ಮಾತ್ರೆ ಹಾಕಿದ ಪರಿಣಾಮ ಇಬ್ಬರು ಶಿಕ್ಷಕಿಯರು ಅಸ್ವಸ್ಥಗೊಂಡ ಘಟನೆ ಇಲ್ಲಿನ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ. ಘಟನೆ ಸಂಬಂಧ ಇಂದು ಶಾಲೆಯಲ್ಲಿ ತುರ್ತು ಎಸ್‍ಡಿಎಂಸಿ ಸಭೆ ನಡೆಸಿ ವಿದ್ಯಾರ್ಥಿನಿಯರಿಬ್ಬರಿಗೆ ಟಿ.ಸಿ ನೀಡಲು ಶಾಲಾ

ಕೊಲ್ಲೂರು : ರಾಷ್ಟ್ರೀಯ ಕ್ರೀಡಾಪಟು ಮಂಜುನಾಥ್ ಮರಾಠಿ ಅವರಿಗೆ ಸನ್ಮಾನ

ಬೈಂದೂರು : ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ಹಾಗೂ ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಕೊಲ್ಲೂರು ಇವರ ಸಹಯೋಗದಲ್ಲಿ ಬೈಂದೂರು ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಎರಡು ದಿನಗಳ ಕ್ರೀಡಾಕೂಟದಲ್ಲಿ ರಾಷ್ಟ್ರೀಯ ಕ್ರೀಡಾಪಟು ಹಾಗೂ ಕೊಲ್ಲೂರು ಮೂಕಾಂಬಿಕಾ ದೇವಳದ ಪ್ರೌಢಶಾಲೆಯ ಹಳೆ ವಿದ್ಯಾರ್ಥಿ ಮಂಜುನಾಥ್ ಮರಾಠಿ ಅವರ ಸಾಧನೆ ಗುರುತಿಸಿ, ಸನ್ಮಾನಿಸಿ ಗೌರವಿಸಲಾಯಿತು. ರಾಷ್ಟ್ರೀಯ ಕ್ರೀಡಾಪಟು ಮಂಜುನಾಥ

ಬೈಂದೂರು: ಬಾಲಭವನ ಉದ್ಘಾಟನಾ ಕಾರ್ಯಕ್ರಮ

ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಮೊವಾಡಿ ಶಾಲೆಯಲ್ಲಿ ಕೆನರಾ ಬ್ಯಾಂಕ್ ನೇತೃತ್ವದಲ್ಲಿ ಸುಮಾರು 3.5 ಲಕ್ಷ.ರೂ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸುಸಜ್ಜಿತವಾದ ನೂತನ ಬಾಲ ಭವನದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕೆನರಾ ಬ್ಯಾಂಕ್ ಮಣಿಪಾಲ ಸರ್ಕಲ್ ಡಿಜಿಎಂ ಶ್ರೀಜೀತ್ ಬಾಲವನ್ನು ಉದ್ಘಾಟಿಸಿ ಮಾತನಾಡಿ, ಶಾಲಾ ಮಕ್ಕಳ ಕಲಿಕಾ ಚಟುವಟಿಕೆಗೆ ಬಾಲ ಭವನ ಬಹಳಷ್ಟು ಸಹಕಾರಿ ಆಗಲಿದೆ ಎಂದು ಶುಭಹಾರೈಸಿದರು. ನಿವೃತ್ತ ಡಿಜಿಎಂ ಶಶಿಧರ ಐತಾಳ್ ಮಾತನಾಡಿ,

ಪುತ್ತೂರು: ಕರುವನ್ನು ಕೊಂದು ರಬ್ಬರ್ ಮರದ ಕೊಂಬೆಯಲ್ಲಿ ನೇತು ಹಾಕಿದ ಚಿರತೆ…!

ಒಂದೆರಡು ವರ್ಷಗಳಿಂದ ಪುತ್ತೂರು ಮತ್ತು ಆಸುಪಾಸಿನ ನಾನಾ ಕಡೆ ಚಿರತೆ ಓಡಾಟದ ಹೆಜ್ಜೆಗುರುತುಗಳು ಗೋಚರವಾದ ನಡುವೆಯೇ, ಇದೇ ಮೊದಲ ಬಾರಿಗೆ ಚಿರತೆಯು ತನ್ನ ಬೇಟೆಯನ್ನು ಮರದ ಮೇಲಿಟ್ಟು ನಾಪತ್ತೆಯಾದ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಕೆಯ್ಯೂರು ಮತ್ತು ಕೊಳ್ತಿಗೆ ಗ್ರಾಮ ವ್ಯಾಪ್ತಿಯ ಕಣಿಯಾರುಮಲೆ ರಕ್ಷಿತಾರಣ್ಯದ ಅರ್ತಿಯಡ್ಕ ಎಂಬಲ್ಲಿ ರಬ್ಬರ್ ಮರವೊಂದರ ಕೊಂಬೆಯಲ್ಲಿ ಸತ್ತ ದನದ ಕರುವಿನ ಕಳೇಬರ ಪತ್ತೆಯಾಗಿದ್ದು, ಇದು ಚಿರತೆಯದ್ದೇ ಕೆಲಸ ಎಂದು ಅರಣ್ಯ ಇಲಾಖೆ