Home Archive by category ಕರಾವಳಿ (Page 31)

ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್: ಕಬಡ್ಡಿ ಚಾಂಪಿಯನ್‌ಶಿಫ್ :ಮಂಗಳೂರು ವಿವಿಗೆ ಚಾಂಪಿಯನ್ಸ್ ಪಟ್ಟ

ಮೂಡುಬಿದಿರೆ: ಅಸ್ಸಾಂನ ಗೌಹಾಟಿಯಲ್ಲಿ ನಡೆಯುತ್ತಿರುವ ಖೇಲೋ ಇಂಡಿಯಾ ಯೂನಿರ್ಸಿಟಿ ಗೇಮ್ಸ್‌ನಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಕಬಡ್ಡಿ ತಂಡವು ಚಿನ್ನದ ಪದಕವನ್ನು ಗಳಿಸಿದೆ. ಅಂತರ್ ವಿಶ್ವಿದ್ಯಾಲಯಗಳ ಕಬಡ್ಡಿ ಚಾಂಪಿಯನ್‌ಶಿಫ್‌ನಲ್ಲಿ ಅಂತಿಮ ಎಂಟರ ಘಟ್ಟಕ್ಕೆ ಆಯ್ಕೆಯಾದ ತಂಡಗಳು ಭಾಗವಹಿಸಿದ್ದವು. ಲೀಗ್ ಹಂತದಲ್ಲಿ ಮಂಗಳೂರು ವಿವಿಯು ದ್ವಿತೀಯ ಸ್ಥಾನವನ್ನು

ದುಬೈ ರಸ್ತೆ ಅಪಘಾತಕ್ಕೆ ತಾ.ಪಂ ಮಾಜಿ ಉಪಾಧ್ಯಕ್ಷೆ ಏಕೈಕ ಪುತ್ರಿ ದಾರುಣ ಸಾವು

ಉಳ್ಳಾಲ : ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಮೃತಪಟ್ಟಿದ್ದಾರೆ. ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿಯಾಗಿರುವ ವಿದಿಶಾ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರುಷ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು. 2019ರಲ್ಲಿ ದುಬಾಯಿಗೆ

ನಾಪತ್ತೆಯಾದ ವಿವಾಹಿತನ ಮೃತದೇಹ ಪತ್ತೆ

ಉಳ್ಳಾಲ: ಕಳೆದ ಸೋಮವಾರದಿಂದ ಮನೆಯಿಂದ ನಾಪತ್ತೆಯಾಗಿದ್ದ ಸೋಮೇಶ್ವರದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಉಳ್ಳಾಲ ತಾಲೂಕಿನ ಸೋಮೇಶ್ವರ ಮೂಡ ಬಡಾವಣೆ ನಿವಾಸಿ ಗೌತಮ್ ಎಮ್(30) ಮೃತ ಯುವಕ. ಫೈನಾನ್ಸ್ ಸೀಸರ್ ಆಗಿದ್ದ ಗೌತಮ್ ಕಳೆದ ಸೋಮವಾರ ಸಂಜೆ ತೊಕ್ಕೊಟ್ಟಿನಲ್ಲಿ ನಡೆದಿದ್ದ ಬಬ್ಬುಸ್ವಾಮಿ ದೈವದ ಪುನರ್ ಪ್ರತಿಷ್ಠೆ , ಕಲಶಾಭಿಷೇಕದ ಹೊರೆಕಾಣಿಕೆಯಲ್ಲಿ ಭಾಗವಹಿಸಿ ಮನೆಗೆ ತೆರಳಿದ್ದ. ರಾತ್ರಿ ವೇಳೆ ಮನೆ ಮಂದಿಯಲ್ಲಿ ಕಿರಿಕ್ ಮಾಡಿದ್ದ ಗೌತಮ್ ಮನೆ

ಮೂಡುಬಿದಿರೆ: ನಿಮೋನಿಯಾಕ್ಕೆ ವಿದ್ಯಾರ್ಥಿನಿ ಬಲಿ

ಮೂಡುಬಿದಿರೆ: ತಾಲೂಕಿನ ಶಿರ್ತಾಡಿ ಮೌಂಟ್ ಕಾರ್ಮೆಲ್ ಶಿಕ್ಷಣ ಸಂಸ್ಥೆಯ ಒಂದನೇ ತರಗತಿಯ ವಿದ್ಯಾರ್ಥಿನಿ ಅಶ್ರಿಜಾ ನಿಮೋನಿಯಾಕ್ಕೆ ತುತ್ತಾಗಿ ಮೃತಪಟ್ಟಿದ್ದಾಳೆ.ಬೆಳ್ತಂಗಡಿ ತಾಲೂಕಿನ ನಿವಾಸಿ ಮರೋಡಿ ನಿವಾಸಿಗಳಾದ ಜಯಾನಂದ ರಾಜಶ್ರೀ ದಂಪತಿಯ ಪುತ್ರಿಯಾಗಿರುವ ಈಕೆ ನಿಮೋನಿಯಾಕ್ಕೆ ತುತ್ತಾಗಿ ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಯ ತುರ್ತುನಿಗಾ ವಿಭಾಗದಲ್ಲಿ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶಲಾಗಿದ್ದಾಳೆ.ವಿದ್ಯಾರ್ಥಿನಿಯ ನಿಧನದ ಸಂತಾಪ ಸೂಚಕವಾಗಿ

ಮಂಗಳೂರು : ಫೆ.24ರಂದು ಕೆ.ಟಿ.ಗಟ್ಟಿ ಅವರಿಗೆ ನುಡಿ ನಮನ

ಮಂಗಳೂರು : ಇತ್ತೀಚೆಗೆ ನಿಧನರಾದ ಖ್ಯಾತ ಕಾದಂಬರಿಕಾರ , ಭಾಷಾ ತಜ್ಞ, ಶಿಕ್ಷಕ ಕೆ.ಟಿ.ಗಟ್ಟಿ ಅವರಿಗೆ ನುಡಿ ನಮನ ಸಲ್ಲಿಸುವ ಕಾರ್ಯಕ್ರಮ ಫೆ.24 ರ ಶನಿವಾರ ಅಪರಾಹ್ನ ಗಂಟೆ 3.30ಕ್ಕೆ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ವೃತ್ತದ ಸಮೀಪ ಇರುವ ಮ್ಯಾಪ್ಸ್ ಕಾಲೇಜಿನಲ್ಲಿ ನಡೆಯಲಿದೆ.‌ಕೆ.ಟಿ.ಗಟ್ಟಿಯವರ ಅಭಿಮಾನಿಗಳು, ಸಾಹಿತ್ಯ, ಸಾಮಾಜಿಕ, ರಾಜಕೀಯ , ಶೈಕ್ಷಣಿಕ ಕ್ಷೇತ್ರದವರೆಲ್ಲರೂ ಜೊತೆಯಾಗಿ ಗೌರವಪೂರ್ಣ ನುಡಿ ನಮನ ಸಲ್ಲಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತುಳು

ಸುಳ್ಯ: ಹರಿಹರ, ಕೊಲ್ಲಮೊಗ್ರು ಗ್ರಾ.ಪಂ. ವ್ಯಾಪ್ತಿಯ ವಿವಿಧ ಬೇಡಿಕೆಗಳ ಬಗ್ಗೆ ಸಿಎಂಗೆ ಮನವಿ

ಸುಳ್ಯ: ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆದಿರುವ ಹರಿಹರ ಕೊಲ್ಲಮೊಗ್ರು ಗ್ರಾಮದ ವಿವಿಧ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ ಗ್ರಾಮಸ್ಥರು ಮನವಿ ಸಲ್ಲಿಸಿದರು.ಕಲ್ಮಕಾರು ಶಾಲಾ ಜಮೀನನ್ನು ಶಾಲಾ ಹೆಸರಿನಲ್ಲಿ ಮಾಡಿ ಕೊಡುವಂತೆ, ಬೆಂಡೋಡಿ ಸರಕಾರಿ ಶಾಲೆಗೆ ಶೌಚಾಲಯ, ರಂಗಮಂದಿರ ಮತ್ತಿತರ ಸೌಲಭ್ಯ ಕಲ್ಪಿಸುವಂತೆ, ಸೇರಿದಂತೆ ಗ್ರಾಮ ವಾಸ್ತವ್ಯ ನಡೆದ ಅವಳಿ ಗ್ರಾಮಕ್ಕೆ ಸಂಬಂಧಿಸಿದಂತೆ ಗ್ರಾಮ ವಾಸ್ತವ್ಯ ದಲ್ಲಿ

ಪುತ್ತೂರಿನಲ್ಲಿ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಮಳಿಗೆ ಶುಭಾರಂಭ

ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಲಕ್ಷಾಂತರ ಜನರ ಅತ್ಯಂತ ವಿಶ್ವಾಸಾರ್ಹ ಆಭರಣ ಬ್ರ್ಯಾಂಡ್ ಆಗಿದ್ದು, ಇದೀಗ ಪುತ್ತೂರಿನಲ್ಲಿ ತನ್ನ 10ನೇ ಆಭರಣ ಶೋರೂಂ ಉದ್ಘಾಟನೆಗೊಂಡಿತು. ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಶೋರೂಂನ್ನು ಖ್ಯಾತ ನಟಿ ಪ್ರಿಯಾಮಣಿ ಅವರು ಉದ್ಘಾಟಿಸಿದರು. ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರು ವೈವಿಧ್ಯಮಯ ವಜ್ರಾಭರಣದ ಸಂಗ್ರಹವನ್ನು ಅನಾವರಣ ಮಾಡಿದರು. ಎಸ್‌ಡಿಪಿಐ ಅಧ್ಯಕ್ಷ ಹಾಜೀ ಇಬ್ರಾಹಿಂ

ಇಂಡಿಯನ್ ನ್ಯಾಷನಲ್ ರ್‍ಯಾಲಿ ಚಾಂಪಿಯನ್ಸ್ ಆಗಿ ಹೊರಹೊಮ್ಮಿದ ಮಂಗಳೂರಿನ ಯುವಕರು

ಮಂಗಳೂರಿನ ಆರೂರು ಅರ್ಜುನ್ ರಾವ್ ಮತ್ತು ಸಹ-ಚಾಲಕ ಸತೀಶ್ ರಾಜಗೋಪಾಲ್ ಅವರು ಇಂಡಿಯನ್ ನ್ಯಾಷನಲ್ ರ್‍ಯಾಲಿ ಚಾಂಪಿಯನ್ಸ್- 2023 ಆಗಿ ಹೊರಹೊಮ್ಮಿದರು. ಮಂಗಳೂರಿನ ಆರೂರು ಅರ್ಜುನ್ ರಾವ್ ಮತ್ತು ಸಹ-ಚಾಲಕ ಸತೀಶ್ ರಾಜಗೋಪಾಲ್ ಅವರು ಫೆಡರೇಶನ್ ಆಫ್ ಮೋಟಾರ್ ಸ್ಪೋರ್ಟ್ಸ್ ಕ್ಲಬ್ಸ್ ಆಫ್ ಇಂಡಿಯಾದಿಂದ ಇಂಡಿಯನ್ ನ್ಯಾಷನಲ್ ರ್‍ಯಾಲಿ ಚಾಂಪಿಯನ್ಸ್ – 2023 ಕಿರೀಟವನ್ನು ಪಡೆದರು.ಈ ಮಟ್ಟದ ಮೋಟಾರ್‌ಸ್ಪೋರ್ಟ್‌ನಲ್ಲಿ ಮಂಗಳೂರಿನ ಯುವಕನೊಬ್ಬ ಚಾಲಕರ ವಿಭಾಗದಲ್ಲಿ

ಜಸ್ಟ್ ಪಾಸ್ ಪಾಸ್‌ಪೋರ್ಟ್

ಜಾಗತಿಕ ಪಾಸ್‌ಪೋರ್ಟ್ ಪ್ರಭಾವ ಹೇಳುವ ಹೆನ್ಲಿ ಪಾಸ್‌ಪೋರ್ಟ್ ಸೂಚ್ಯಂಕ 2024ರದು ಹೊರಬಿದ್ದಿದೆ. ಪೋರ್ಬ್ಸ್ ಅದನ್ನು ಅಧಿಕೃತವಾಗಿ ಪ್ರಕಟಿಸಿದೆ. ಭಾರತದ ಪಾಸ್‌ಪೋರ್ಟ್ ಪ್ರಭಾವವು ಮತ್ತೆ 5 ಸ್ಥಾನ ಕೆಳಕ್ಕೆ ಇಳಿದು 85ನೇ ರಿಯಾಂಕಿಗೆ ಹೋಗಿದೆ. ಕಳೆದ ಬಾರಿ 80ರಲ್ಲಿತ್ತು. ಭಾರತದ ಪಾಸ್‌ಪೋರ್ಟ್ ಇದ್ದರೆ 58 ದೇಶಗಳಿಗೆ ವೀಸಾ ಇಲ್ಲದೆಯೇ ಪ್ರಯಾಣ ಮಾಡಬಹುದಿತ್ತು. ಈಗ 62 ದೇಶಗಳಿಗೆ ಪ್ರಯಾಣ ಮಾಡಬಹುದು. ಪಾಸ್‌ಪೋರ್ಟ್ಎಂದರೆ ಏನು? ಪಾಸ್ ಎಂದರೆ ಹಾದು ಹೋಗುವುದು.

“ಪ್ರಶ್ನೆಯಾದ ಜಯಲಲಿತಾ ವಜ್ರಾಭರಣ”

ತಮಿಳುನಾಡು ಮುಖ್ಯಮಂತ್ರಿ ಆಗಿದ್ದಾಗ ಮಾಡಿದ್ದ ಭ್ರಷ್ಟಾಚಾರ ಸಂಬಂಧ ಆರೋಪ ಸಾಬೀತಾಗಿದ್ದ ದಿವಂಗತ ಜಯಲಲಿತಾ ಅವರ ಚಿನ್ನಾಭರಣ ಒಯ್ಯಲು ಬೆಂಗಳೂರಿನ 36ನೇ ಸಿಟಿ ಸಿವಿಲ್ ಮತ್ತು ಸೆಶನ್ಸ್ ನ್ಯಾಯಾಲಯವು ಮಾರ್ಚ್ 6 ಮತ್ತು 7ನೇ ದಿನಾಂಕಗಳನ್ನು ನೀಡಿದೆ. ಜಯಲಲಿತಾರ ಭ್ರಷ್ಟಾಚಾರ ಪ್ರಕರಣ ಬೆಂಗಳೂರಿನಲ್ಲಿ ವಿಚಾರಣೆ ಆಗಿದ್ದು ಅವರು ಮತ್ತು ಅವರ ಮೂವರು ಸಹಚರರಿಗೆ ತಲಾ 4 ವರುಷ ಜೈಲು ಶಿಕ್ಷೆ ಮತ್ತು ಒಂದು ಕೋಟಿ ರೂಪಾಯಿ ದಂಡ ವಿಧಿಸಲಾಗಿತ್ತು. ಆಗ ಜಯಲಲಿತಾರಿಂದ