Home Archive by category ಕರಾವಳಿ (Page 45)

ಮುಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅರ್ಧ ವಾರ್ಷಿಕ ಪ್ರಾದೇಶಿಕ ಮಹಾಸಭೆ

ರಾಷ್ಟ್ರೀಯ ಬಿಲ್ಲವರ ಮಹಾಮಂಡಲ (ರಿ.) ಮುಲ್ಕಿ ಇದರ ಅರ್ಧ ವಾರ್ಷಿಕ ಪ್ರಾದೇಶಿಕ ಮಹಾಸಭೆಯು ಮೂಡಬಿದ್ರೆ ತಾಲೂಕಿನ ಇರುವೈಲಿನ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಇರುವೈಲು ಸಂಘದ ಅಧ್ಯಕ್ಷರಾದ ಕುಮಾರ್ ಪೂಜಾರಿ,ಕರ್ನಾಟಕ ಉಚ್ಚ

ಮೂಡುಬಿದಿರೆ: ಆಳ್ವಾಸ್ ವಿದ್ಯಾರ್ಥಿಯ ಸಂಶೋಧನಾ ಯೋಜನೆ ಆಯ್ಕೆ

ಮೂಡುಬಿದಿರೆ: ಆಳ್ವಾಸ್ ಸೆಂಟ್ರಲ್ ಸ್ಕೂಲ್‌ನ 9ನೇ ತರಗತಿಯ ವಿದ್ಯಾರ್ಥಿ ಅಮೋಘ್ ಎ.ಹೆಬ್ಬಾರ್ ಮಾರ್ಚ್ ತಿಂಗಳಲ್ಲಿ ಉತ್ತರ ಆಫ್ರಿಕಾದ ಟ್ಯುನೀಶಿಯಾದಲ್ಲಿ ನಡೆಯುವ ಅಂತರರಾಷ್ಟ್ರೀಯ ವಾರ್ಷಿಕ ಮೆಗಾ ಸೈನ್ಸ್ ಫೆಸ್ಟಿವಲ್, `ಕೀಟ ಮತ್ತು ಕಳೆಗಳನ್ನು ನಿಯಂತ್ರಿಸಲು ನೈಸರ್ಗಿಕ ವಿಧಾನ’ ಶೀರ್ಷಿಕೆಯ ಸಂಶೋಧನಾ ಯೋಜನೆಯನ್ನು ಪ್ರಸ್ತುತಪಡಿಸಲು ಅರ್ಹತೆ ಪಡೆದಿದ್ದಾರೆ.ಗುಜರಾತ್‌ನ ರಾಜಕೋಟ್‌ನಲ್ಲಿ ನಡೆದ ರಾಷ್ಟೀಯ ಮಟ್ಟದ ಭಾರತೀಯ ವಿಜ್ಞಾನ ಮತ್ತು ಇಂಜಿನಿಯರಿಂಗ್

ಉಳ್ಳಾಲ : ಪಿಕಪ್- ಗೂಡ್ಸ್ ಲಾರಿ ನಡುವೆ ಅಪ್ಪಚ್ಚಿಯಾದ ಕಾರು

ಉಳ್ಳಾಲ : ಪಿಕಪ್ ವಾಹನವೊಂದು ಹಠಾತ್ ಬ್ರೇಕ್ ಹಾಕಿದ ಪರಿಣಾಮ ಅದರ ಹಿಂಬದಿಗೆ ಗುದ್ದಿದ ಸ್ಬಿಫ್ಟ್ ಕಾರಿಗೆ ಅದರ ಹಿಂದುಗಡೆಯಿದ್ದ ಗೂಡ್ಸ್ ಲಾರಿ ಢಿಕ್ಕಿ ಹೊಡೆದು ಎರಡು ವಾಹನಗಳ ನಡುವೆ ಸಿಲುಕಿದ ಕಾರು ಅಪ್ಪಚ್ಚಿಯಾದ ಘಟನೆ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಸಂಭವಿಸಿದೆ. ದೇರಳಕಟ್ಟೆ ಕಡೆಯಿಂದ ಕೆಲಸ ಮುಗಿಸಿ ಮಂಗಳೂರಿನತ್ತ ಮೂವರು ಯುವತಿಯರಿದ್ದ ಕಾರು ತೆರಳುವಾಗ , ಜನದಟ್ಟಣೆ ತೊಕ್ಕೊಟ್ಟು ರಿಕ್ಷಾ ಪಾಕ್೯ ಸಮೀಪದಲ್ಲೇ ಎದುರುಗಡೆಯಿದ್ದ ಪಿಕಪ್ ವಾಹನದ ಚಾಲಕ ಹಠಾತ್

ಫೆ.2ರಂದು ಕರಾವಳಿಯಲ್ಲಿ ಕ್ಲಾಂತ ಸಿನಿಮಾ ಬಿಡುಗಡೆ

ಸಸ್ಪೆನ್ಸ್, ಥ್ರಿಲ್ಲರ್, ಆಕ್ಷನ್ ಬೇಸ್ಡ್ ಸಿನಿಮಾ `ಕ್ಲಾಂತ ಕರಾವಳಿಯ ಸಿನಿಮಾ ಮಂದಿರದಲ್ಲಿ ಫೆ.2ರಂದು ಬಿಡುಗಡೆ ಕಾಣಲಿದೆ. ಚಿತ್ರದ ಬಹುತೇಕ ಭಾಗ ಕರಾವಳಿಯಲ್ಲಿಯೇ ಚಿತ್ರೀಸಲಾಗಿದೆ ಎಂದು ಚಿತ್ರದ ನಿರ್ದೇಶಕ ವೈಭವ್ ಪ್ರಶಾಂತ್ ಹೇಳಿದರು.ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಳುನಾಡಿನ ಮಣ್ಣಿನ ಮಹಿಮೆ, ಆಚಾರ ವಿಚಾರ, ಸಂಸ್ಕೃತಿಯ ಜತೆಯಲ್ಲಿ ಕೊರಗಜ್ಜ ದೈವದ ಪವಾಡ ಸಾರುವ ವಿಚಾರಗಳು ಚಿತ್ರದಲ್ಲಿ ನೀಡಲಾಗಿದೆ.

ಮೂಡುಬಿದಿರೆ: ರಾಷ್ಟ್ರೀಯ ಫ್ಲೋರ್ ಬಾಲ್ ಚಾಂಪಿಯನ್ ಶಿಫ್ : ಎಡಪದವು ವಿವೇಕಾನಂದ ಪ.ಪೂ ಕಾಲೇಜಿನ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನ

ಮೂಡುಬಿದಿರೆ: ಇಂಟರ್‌ನ್ಯಾಷನಲ್ ಫ್ಲೋರ್ ಬಾಲ್ ಫೆಡರೇಶನ್ ಹಾಗೂ ಫ್ಲೋರ್ ಬಾಲ್ ಅಸೋಸಿಯೇಷನ್ ತಮಿಳುನಾಡು ಮತ್ತು ಫಿಟ್ ಇಂಡಿಯಾ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಜ.25-28 ವರೆಗೆ ನಡೆದ 17ನೇ ರಾಷ್ಟ್ರೀಯ ಫ್ಲೋರ್ ಬಾಲ್ ಚಾಂಪಿಯನ್ ಶಿಫ್ 2023-24ರಲ್ಲಿ ಕರ್ನಾಟಕ ತಂಡವು ಜಯಗಳಿಸಿದ್ದು, ಈ ತಂಡದಲ್ಲಿ ಎಡಪದವು ಸ್ವಾಮಿ ವಿವೇಕಾನಂದ ಪ.ಪೂ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಆಟವಾಡಿದ್ದು ಅವರನ್ನು ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಿ

ಪಟಾಕಿ ಟುಸ್ ಮಾಡುವ ಹೊತ್ತಲ್ಲಿ

ದಕ್ಷಿಣ ಕನ್ನಡ ಜಿಲ್ಲಾಡಳಿತವು ಜಿಲ್ಲೆಯ ಎಲ್ಲ ಸುಡುಮದ್ದು ತಯಾರಿಕಾ ಘಟಕಗಳನ್ನು ಮುಂದಿನ ಆದೇಶದವರೆಗೆ ಅಮಾನತಿನಲ್ಲಿ ಇಟ್ಟಿದೆ. ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಕುಡ್ತ್ಯಾರುನಲ್ಲಿ ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಸಾವು ನೋವು ಸಂಭವಿಸಿರುವುದು ಇದಕ್ಕೆ ಕಾರಣ. 2008ರ ಸ್ಫೋಟಕ ಕಾಯ್ದೆಯ ನಿಯಮಾವಳಿ ಪ್ರಕಾರ ಈ ತಾತ್ಕಾಲಿಕ ಸುಡುಮದ್ದು ತಯಾರಿಕೆ ನಿಲುಗಡೆಯ ಆದೇಶ ನೀಡಲಾಗಿದೆ. ಈಗ ಉತ್ಸವಗಳ ಕಾಲ. ಉತ್ಸವಗಳಲ್ಲಿ ಮುಸ್ಲಿಮರು ತಯಾರಿಸುವ ದುಡುಮ್

ಮೂಡುಬಿದಿರೆ: ರಾಷ್ಟ್ರೀಯ ಜ್ಯೂನಿಯರ್ ಅಥ್ಲೆಟಿಕ್ಸ್ ಗೆ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ರಕ್ಷಿತಾ ಆಯ್ಕೆ

ಮೂಡುಬಿದಿರೆ: ಗುಜರಾತಿನ ಆಲಹಾಬಾದ್ ನಲ್ಲಿ ಫೆ. 16-18 ರಿಂದ ನಡೆಯುವ ರಾಷ್ಟ್ರೀಯ ಜ್ಯೂನಿಯರ್ ಅಥ್ಲೆಟಿಕ್ಸ್ ಗೆ ಎಡಪದವು ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿ ರಕ್ಷಿತಾ ಆಯ್ಕೆಯಾಗಿದ್ದಾರೆ.2023-24 ನೇ ಸಾಲಿನಲ್ಲಿ ಪುತ್ತೂರಿನಲ್ಲಿ ನಡೆದ ರಾಜ್ಯಮಟ್ಟದ 17ವರ್ಷ ವಯೋಮಿತಿ ಶಾಲಾ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಎತ್ತರ ಜಿಗಿತದಲ್ಲಿ ಬೆಳ್ಳಿ ಪದಕ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಅವರು ಆಯ್ಕೆಯಾಗಿದ್ದಾರೆ.ರಕ್ಷಿತಾ ಅವರು 2022-23

ಜ್ವರಗಳ ರಾಜ ಮೆದುಳು ಜ್ವರ – ಜಪಾನೀಸ್ ಎನ್‍ಸೆಫಲೈಟಿಸ್

ಜಪಾನೀಸ್ ಎನ್‍ಸೆಫಲೈಟಿಸ್ ವೈರಸ್ ಎಂಬ ವೈರಾಣುವಿನಿಂದ ಈ ರೋಗ ಹರಡುತ್ತದೆ. ಮೊದಲ ಬಾರಿ ಈ ರೋಗ ಜಪಾನಿನಲ್ಲಿ 1871ರಲ್ಲಿ ಕಂಡು ಬಂದ ಕಾರಣ ಈ ಜ್ವರಕ್ಕೆ ಜಪಾನೀಸ್ ಎನ್‍ಸೆಫಲೈಟಿಸ್ ಎಂದು ನಾಮಕರಣ ಮಾಡಲಾಯಿತು. ಸಾಮಾನ್ಯವಾಗಿ ಹಂದಿಗಳಲ್ಲಿ ಕಂಡು ಬರುವ (ಕೆಲವೊಂದು ಪ್ರಬೇಧದ ಹಕ್ಕಿಗಳಲ್ಲಿಯೂ ಕಂಡು ಬರುತ್ತದೆ) ಈ ವೈರಾಣು, ಹಂದಿಗಳಿಗೆ ಯಾವುದೇ ತೊಂದರೆ ಮಾಡುವುದಿಲ್ಲ. ಈ ರೋಗಾಣು ಇರುವ ಹಂದಿಗಳನ್ನು ಕಡಿದ ಕ್ಯೂಲೆಕ್ಸ್ ಸೊಳ್ಳೆಗಳು ಮನುಷ್ಯರನ್ನು

ಜನವರಿ 29,ಭಾರತೀಯ ವೃತ್ತಪತ್ರಿಕೆ ದಿನ

ಕೆಲವರ ದಿನ ಆರಂಭವಾಗುವುದೇ ದಿನ ಪತ್ರಿಕೆಯನ್ನು ಓದುವ ಮೂಲಕ. ಕೈಯಲ್ಲಿ ಒಂದು ಕಪ್ ಕಾಫಿ ಅಥವಾ ಟೀ ಜೊತೆಗೆ ದಿನಪತ್ರಿಕೆಯಿದ್ದರೆ ಸುದ್ದಿಯನ್ನು ಓದುತ್ತಾ ಓದುಗರು ತಮ್ಮ ದಿನವನ್ನು ಆರಂಭಿಸುತ್ತಾರೆ. ರಾಜ್ಯ, ದೇಶ, ವಿದೇಶಗಳಲ್ಲಿ ನಡೆಯುವ ಸುದ್ದಿಗಳನ್ನು ಜನರಿಗೆ ತಲುಪಿಸುವ ದಿನ ಪತ್ರಿಕೆಗಳು ಇವತ್ತಿಗೂ ನಂಬಿಕೆಗೆ ಅರ್ಹವಾಗಿದೆ. ಹೀಗಾಗಿ ಪ್ರತಿ ವರ್ಷ ಜ. 29ರಂದು ಭಾರತೀಯ ವೃತ್ತಪತ್ರಿಕೆ ದಿನವನ್ನು ಆಚರಿಸಲಾಗುತ್ತದೆ.ಡಿಜಿಟಲ್‌ ಯುಗದಲ್ಲಿರುವ ನಾವಿಂದು

ಭಾರತದ ಡಬಲ್ಸ್ ಟೆನ್ನಿಸಿಗರು

ಆಸ್ಟ್ರೇಲಿಯಾ ಓಪನ್ ಟೆನ್ನಿಸ್‍ನಲ್ಲಿ 43ರ ಪ್ರಾಯದಲ್ಲಿ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್ ಜೊತೆಗೆ ಪುರುಷರ ಡಬಲ್ಸ್ ಗೆದ್ದು ರೋಹನ್ ಬೋಪಣ್ಣ ಸಾಧನೆ ಮಾಡಿದರು. ಅತಿ ಹಿರಿಯ ಗ್ರಾನ್‍ಸ್ಲಾಮ್ ವಿನ್ನರ್, ಅತಿ ಹಿರಿಯ ಟೆನ್ನಿಸ್ ಡಬಲ್ಸ್ ಒನ್ ಇತ್ಯಾದಿ ಸಾಧನೆ ಕರ್ನಾಟಕದ ಕೊಡವ ರೋಹನ್ ಬೋಪಣ್ಣ ಅವರದಾಯಿತು. ಭಾರತದ ಜಾಗತಿಕ ಗ್ರಾನ್‍ಸ್ಲಾಮ್ ಸಾಧಕರಾದ ಸಾನಿಯಾ ಮಿರ್ಜಾ, ಲಿಯಾಂಡರ್ ಪಯಸ್, ಮಹೇಶ್ ಭೂಪತಿ ಮೊದಲಾದವರ ಸಾಲಿಗೆ ಬೋಪಣ್ಣ