Home Archive by category ಕ್ರೈಮ್ (Page 8)

ವಿಟ್ಲ : ಗುಡ್ಡಕ್ಕೆ ಹತ್ತಿದ ಬಸ್‌ : ಬಾಲಕಿ ಕಾಲಿಗೆ ಗಂಭೀರ ಗಾಯ

ವಿಟ್ಲ: ಖಾಸಗಿ ಬಸ್ಸೊಂದು ಗುಡ್ಡಕ್ಕೆ ಹತ್ತಿದ ಘಟನೆ ವಿಟ್ಲ -ಮಂಗಳೂರು ರಸ್ತೆಯ ಕೆಲಿಂಜದ ಮಾಜೋನಿ ಎಂಬಲ್ಲಿ ನಡೆದಿದೆ. ವಿಟ್ಲದಿಂದ ಮಂಗಳೂರಿಗೆ ತೆರಳುವ ಖಾಸಗಿ ಬಸ್‌ ಗುಡ್ಡಕ್ಕೆ ಹತ್ತಿದೆ. ಘಟನೆಯಿಂದ ಚಂದಳಿಕೆಯ ಬಾಲಕಿಗೆ ಕಾಲಿಗೆ ಗಂಭೀರ ಗಾಯವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ಕೆಲ ಪ್ರಯಾಣಿಕರಿಗೆ ಸಣ್ಣ -ಪುಟ್ಟ ಗಾಯಾವಾಗಿದೆ.

ಮಂಗಳೂರು -ಜುವೆಲ್ಯರಿಶಾಪ್ ಕೊಲೆ ಪ್ರಕರಣ, ಶಂಕಿತ ಆರೋಪಿಯ ಸಿಸಿ ಕೆಮರಾ ಚಿತ್ರ ಬಹಿರಂಗ

ಮಂಗಳೂರು: ನಗರದ ಹಂಪನ ಕಟ್ಟೆಯ ಜುವೆಲ್ಯರಿಯೊಂದರಲ್ಲಿ ಕಳೆದ ಶುಕ್ರವಾರ ಹಾಡುಹಗಲೇ ನಡೆದ ಸಿಬ್ಬಂದಿ ಕೊಲೆ, ಅಂಗಡಿ ದರೋಡೆ ಪ್ರಕರಣದ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಇದರ ಬೆನ್ನಲ್ಲೇ ಪ್ರಕರಣದ ಶಂಕಿತ ಆರೋಪಿಯ ಸಿಸಿ ಕೆಮರಾ ಚಿತ್ರವನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ. ಕಪ್ಪು ಬಣ್ಣದ ಜರ್ಕಿನ್, ಜೀನ್ಸ್ ಪ್ಯಾಂಟ್ ಧರಿಸಿ, ಶೂ ಧರಿಸಿದ್ದು, ಹೆಗಲಿನಲ್ಲಿ ಬ್ಯಾಗ್ ಹಾಕಿಕೊಂಡಿದ್ದು, ಗುರುತು ಮರೆಮಾಚಲು ಕ್ಯಾಪ್, ಮಾಸ್ಕ್, ಕೂಲಿಂಗ್

ಮೂಡುಬಿದರೆ : ಧೂಳು ಬರುವ ಹಾಗೆ ವಾಹನ ಚಾಲಾಯಿಸಬೇಡ ಎಂದಾತನ ಕೊಲೆ

ಧೂಳು ಬರುವ ಹಾಗೆ ವಾಹನವನ್ನು ಚಲಾಯಿಸಬೇಡ ನಿಧಾನವಾಗಿ ಹೋಗೆಂದು ಹೇಳಿದ ವ್ಯಕ್ತಿಗೆ ಟಿಪ್ಪರ್ ಚಾಲಕ ರಾಡ್ ನಿಂದ ಹೊಡೆದು, ಟಿಪ್ಪರ್ ಚಲಾಯಿಸಿ ಕೊಲೆ ನಡೆಸಿದ್ದು, ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಟೆಬಾಗಿಲಿನ ನಿವಾಸಿ ಫಯಾಝ್ (61) ಹತ್ಯೆಗೀಡಾದ ವ್ಯಕ್ತಿ. ಪಯಾಜ್ ಶುಕ್ರವಾರ ಕೋಟೆಬಾಗಿಲು ಮಸೀದಿಗೆ ನಮಾಝ್‍ಗೆ ತೆರಳುವ ಸಂಧರ್ಭ ಕೋಟೆಬಾಗಿಲು ನಿವಾಸಿ, ಟಿಪ್ಪರ್ ಚಾಲಕ ಹಾರೀಸ್ ಎಂಬಾತ ಅತೀ ವೇಗದಿಂದ ಟಿಪ್ಪರ್ ಚಲಾಯಿಸಿಕೊಂಡು

ಮಂಗಳೂರಿನಲ್ಲಿ ಜುವೆಲ್ಲರಿ ಶಾಪ್ ಗೆ ನುಗ್ಗಿ ವ್ಯಕ್ತಿಯ ಕೊಲೆ

ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ ಘಟನೆ ನಗರದ ಬಲ್ಮಠದಲ್ಲಿ ನಡೆದಿದೆ. ನಗರದಲ್ಲಿರುವ ಮಂಗಳೂರು ಜುವೆಲ್ಲರಿಗೆ ನುಗ್ಗಿದ ಮುಸುಕುಧಾರಿ ವ್ಯಕ್ತಿಯೊಬ್ಬ ಅಲ್ಲಿನ ಸಿಬ್ಬಂದಿಯನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿದ್ದಾನೆ. ಜುವೆಲ್ಲರಿ ಉದ್ಯೋಗಿ, ಅತ್ತಾವರ ನಿವಾಸಿ ರಾಘವ (52) ಕೊಲೆಯಾದ ವ್ಯಕ್ತಿ. ಮಧ್ಯಾಹ್ನ ಮುಸುಕು ಹಾಕಿಕೊಂಡು ಬಂದಿದ್ದ ವ್ಯಕ್ತಿ ಕೃತ್ಯ ಎಸಗಿದ್ದಾನೆ. ಜುವೆಲ್ಲರಿ ಮಾಲಕ ಊಟಕ್ಕೆಂದು ತೆರಳಿದ್ದಾಗ ಆಗಂತುಕ ಒಳಗೆ ಬಂದಿದ್ದ.

ಕೊಲ್ಯ : ಯುವತಿ ಸಂಶಯಾಸ್ಪದ ರೀತಿಯಲ್ಲಿ ಸಾವು

ಉಳ್ಳಾಲ: ಯುವತಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯಲ್ಲಿ ನಡೆದಿದ್ದು, ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದರೂ ಬಾಯಿಗೆ ಬಟ್ಟೆಯನ್ನು ಗಟ್ಟಿಯಾಗಿ ಕಟ್ಟಿರುವುದು ಕೊಲೆ ಸಂಶಯ ವ್ಯಕ್ತಪಡಿಸಿದೆ. ಛತ್ತೀಸಗಢ ಮೂಲದ ಸರಿತಾ ವರ್ಮ(23) ನಿಗೂಢ ರೀತಿಯಲ್ಲಿ ಸಾವನ್ನಪ್ಪಿದಾಕೆ. ಇಬ್ಬರು ಸಹೋದರರು ಹಾಗೂ ಅತ್ತಿಗೆ ಜೊತೆ ಸರಿತಾ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಜ.30 ರಂದು

ಕಲ್ಲಾಪು : ನೇತ್ರಾವತಿ ನದಿಯ ತಂತ್ರಿ ರಸ್ತೆ ಬಳಿ ಅಪರಿಚಿತ ಮೃತದೇಹ ಪತ್ತೆ

ಕಲ್ಲಾಪು ಸನಿಹ ನೇತ್ರಾವತಿ ನದಿಯ ತಂತ್ರಿ ರಸ್ತೆ ಬಳಿ ಅಪರಿಚಿತ ಮೃತದೇಹ ಪತ್ತೆಯಾದ ಘಟನೆ ಜ.30ರ ಸೋಮವಾರ ಬೆಳಗ್ಗೆ ನಡೆದಿದೆ.ಮೂರು ದಿನಗಳ ಹಿಂದೆ ನದಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಲುಂಗಿ, ಟೀಶರ್ಟ್ ಧರಿಸಿದ್ದು ಕೈಯಲ್ಲಿ ವಾಚ್, ಕೂಡ ಪತ್ತೆಯಾಗಿದೆ.ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು,ಉಳ್ಳಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.ಬಜಾಲ್ ಅಥವಾ ಬಂಟ್ವಾಳ ಭಾಗದಲ್ಲಿ ನದಿಗೆ ಬಿದ್ದಿರುವ ಶಂಕೆ

ಕಾಪಿಕಾಡ್‍ : ಪತ್ನಿಯನ್ನು ಕೊಲೆಗೈದು ಪತಿ ಆತ್ಮಹತ್ಯೆ

ನಗರದ ಬಿಜೈ ಸಮೀಪದ ಕಾಪಿಕಾಡ್ ನಾಲ್ಕನೇ ಕ್ರಾಸ್‍ನ ಅಪಾರ್ಟ್‍ಮೆಂಟ್‍ವೊಂದರಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದು ಬಳಿಕ ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶೈಲಜಾ ರಾವ್ (64) ಎಂಬವರನ್ನು ಅವರ ಪತಿ ದಿನೇಶ್ ರಾವ್ (65) ಎಂಬವರು ಉಸಿರುಗಟ್ಟಿಸಿ, ಕೊಲೆಗೈದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡನೆಂದು ಪೆÇಲೀಸ್ ಮೂಲಗಳು ತಿಳಿಸಿವೆ. ದಿನೇಶ್ ರಾವ್ ನಿವೃತ್ತ ಕೆನರಾ ಬ್ಯಾಂಕ್ ಉದ್ಯೋಗಿಯಾಗಿದ್ದರು ಎಂದು

ವಿಟ್ಲ: ಕೋಡಪದವು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಕಳ್ಳತನಕ್ಕೆ ಯತ್ನ: ಓರ್ವ ಆರೋಪಿ ಪೊಲೀಸರ ವಶಕ್ಕೆ

ವಿಟ್ಲ: ಪಡ್ನೂರು ಗ್ರಾಮದ ಕೋಡಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ಕಟ್ಟಡದ ಶೆಟರ್ ಅನ್ನು ಗ್ಯಾಸ್ ಕಟ್ಟರ್ ಬಳಸಿ ಮುರಿಯಲು ಪ್ರಯತ್ನಿಸಿ ರಾತ್ರಿ ಕಳವು ಮಾಡಲು ಪ್ರಯತ್ನಿಸಿದ ಆರೋಪಿಗಳ ಪೈಕಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಟಿ.ಕೆ ಅಬ್ದುಲ್ (37) ಎಂದು. ಗುರುತಿಸಲಾಗಿದೆ. ವಿಟ್ಲ ಪೊಲೀಸ್ ಠಾಣಾ ನಿರೀಕ್ಷಕರಾದ ನಾಗರಾಜ ಹೆಚ್ .ಇ. ರವರ ಮಾರ್ಗದರ್ಶನದಂತೆ, ವಿಟ್ಲ ಪೊಲೀಸ್ ಠಾಣಾ ಅಧಿಕಾರಿ ಹಾಗೂ ಸಿಬ್ಬಂದಿಗಳು ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ

ಮದುವೆ ನಿಶ್ಚಯವಾಗಿದ್ದ ಯುವಕ ಆತ್ಮಹತ್ಯೆ

ಮೂಡುಬಿದಿರೆ: ಮದುವೆ ನಿಶ್ಚಯವಾಗಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಜೆ ಇರುವೈಲಿನಲ್ಲಿ ನಡೆದಿದೆ.ಇರುವೈಲು ಗುಂಡಾಲ ಮನೆಯ ಸದಾನಂದ ಶೆಟ್ಟಿ ಅವರ ಪುತ್ರ ಪ್ರತಾಪ್ ಶೆಟ್ಟಿ( 30)ಆತ್ಮಹತ್ಯೆ ಮಾಡಿಕೊಂಡ ಯುವಕ. ಕೃಷಿಕನಾಗಿದ್ದ ಈತ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡಿದ್ದಾನೆ. ಜ.22ರಂದು ಮದುವೆ ನಿಶ್ಚಯವಾಗಿತ್ತು. ಸಾಧು ಸ್ವಭಾವದ ಯುವಕನಾಗಿದ್ದ ಈತನಿಗೆ ಆರ್ಥಿಕವಾಗಿ ತೊಂದರೆ ಇರಲಿಲ್ಲ.ಆದರೆ ವಿಡಿಯೋ

ಖೋಟಾ ನೋಟು ಚಲಾವಣೆ ಆರೋಪ : ಇಬ್ಬರು ಆರೋಪಿಗಳ ಬಂಧನ

ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇರೆಗೆ ಕದ್ರಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಮಂಗಳವಾರ ತನ್ನ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಂಧಿತರನ್ನು ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ನಿವಾಸಿ ನಿಜಾಮುದ್ದೀನ್ ಅಲಿಯಾಸ್ ನಿಜಾಂ ( 32 ), ಜೆಪ್ಪು ಮಂಗಳೂರು ನಿವಾಸಿ ರಜೀಮ್ ಅಲಿಯಾಸ್ ರಾಫಿ ( 31) ಎಂದು ಗುರುತಿಸಲಾಗಿದೆ. ಜ. 2ರಂದು ಮಂಗಳೂರು ನಗರದ