Home Archive by category ರಾಜಕೀಯ (Page 8)

ಪ್ರತ್ಯೇಕತೆ ಕೆರಳಿಸಿದ ಆಯವ್ಯಯ

ಚುನಾವಣಾ ಪೂರ್ವ ಮಧ್ಯಾವಧಿ ಆಯವ್ಯಯ ಮಂಡನೆ ಆಗಿದೆ. ಸಂಸದ ಶಶಿ ತರೂರ್ ಪ್ರಕಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಅಂಕಿ ಅಂಶಗಳಿಗಿಂತ ಹೆಚ್ಚಾಗಿ ಗಿಲೀಟಿನ ಮಾಮೂಲಿ ಶಬ್ದಗಳದ್ದಾಗಿದೆ. ಈ ಮಾತನ್ನು ನಿರ್ಮಲಾರ ಗಂಡ ಪರಕಾಲ ಪ್ರಭಾಕರ್ ಅವರು ಬಿಜೆಪಿ ಸರಕಾರದ ಒಟ್ಟಾರೆ ಶಬ್ದಗಳ ಕಸರತ್ತು ಗಮನಿಸಿ ಹಿಂದೆಯೇ ಟೀಕಿಸಿದ್ದಾರೆ. ಬಜೆಟ್ ಮಂಡನೆ ವೇಳೆ

ದೇಶವಾಸಿಗಳಿಗೆ ನಿರಾಶೆಯ ಬಜೆಟ್ : ಮಂಜುನಾಥ ಭಂಡಾರಿ

ಕೇಂದ್ರ ಸರಕಾರದ ಮಧ್ಯಂತರ ಬಜೆಟ್‌ನಲ್ಲಿ ಬಡವರು, ಮಧ್ಯಮ ವರ್ಗವನ್ನು ಸಂಪೂರ್ಣ ಕಡೆಗಣಿಸಲಾಗಿದೆ. ಆದಾಯ ತೆರಿಗೆದಾರರ ನಿರೀಕ್ಷೆ ಹುಸಿಯಾಗಿದೆ. ವಿತ್ತ ಸಚಿವರು 55 ನಿಮಿಷಗಳ ಕಾಲ ಚುನಾವಣಾ ಭಾಷಣ ಮಾಡಿದರೇ ಹೊರತು ದೇಶದ ಅಭಿವೃದ್ಧಿ ದೃಷ್ಟಿಕೋನದಿಂದ ಯಾವುದೇ ಯೋಜನೆ ಪ್ರಕಟಿಸಿಲ್ಲ. ದೇಶದ ಆದಾಯ ಮೂಲವಾದ ಕೃಷಿ, ಉದ್ಯಮ, ಸೇವಾ ಕ್ಷೇತ್ರವನ್ನು ಕಡೆಗಣಿಸಲಾಗಿದೆ. ಬಹುನಿರೀಕ್ಷೆಯಿಂದ ಬಜೆಟ್‌ನ್ನು ಕಾಯುತ್ತಿದ್ದ ದೇಶವಾಸಿಗಳಿಗೆ ಕೇಂದ್ರ ಸರಕಾರ ನಿರಾಶೆ ಮೂಡಿಸಿದೆ ಎಂದು

ಪ್ರಗತಿ ಹಿನ್ನಡೆಯ ಸಂಕೇತ: ಕೆ. ಹರೀಶ್ ಕುಮಾರ್

ಮಂಗಳೂರು: ದೇಶದ ಬಿಜೆಪಿ ಸರಕಾರ ಹೇಳುತ್ತಿರುವ ದೇಶದ ಅಭಿವೃದ್ಧಿ ಶಕೆ ಕನ್ನಡಿಯೊಳಗಿನ ಗಂಟು ಇದ್ದಂತೆ. ದೇಶದ ಪ್ರಗತಿ ಹಿನ್ನಡೆ ಕಂಡಿರುವ ಈ ಕಾಲಘಟ್ಟದಲ್ಲಿ ನಿರ್ಮಲಾ ಸೀತಾರಾಮನ್ ಅವರು ಈ ರೀತಿಯ ಬಜೆಟ್ ಅಲ್ಲದೆ ಬೇರೇನು ಮಂಡಿಸಲು ಸಾಧ್ಯವಿಲ್ಲö ಎಂದು ವಿಧಾನ ಪರಿಷತ್ ಶಾಸಕರುಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.ಕಾರ್ಪೊರೇಟ್ ಸಂಸ್ಥೆಗಳ ಅಡಿಯಾಳಾಗಿರುವ ಕೇಂದ್ರ ಸರಕಾರ ಈ ಬಜೆಟ್‌ನಲ್ಲಿ ಬಡವರು, ಮಧ್ಯಮ

ಕೇಂದ್ರ ಬಜೆಟ್ ನಿರಾಶಾದಾಯಕ : ಬಿ.ರಮನಾಥ ರೈ

ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್-2024 ನಿರಾಶಾದಾಯಕವಾಗಿದೆ. ವಿತ್ತ ಸಚಿವರು ಕೇವಲ ಭರವಸೆ ಕೊಡುವ ಚುನಾವಣಾ ಭಾಷಣ ಮಾಡಿದರೋ ಅಥವಾ ಆಯವ್ಯಯ ಪತ್ರ ಮಂಡಿಸಿದರೋ ಎಂಬ ಸಂಶಯ ಬರುತ್ತಿದೆ. ಪ್ರಗತಿ, ಬೆಳವಣಿಗೆ, ಧ್ಯೇಯ, ಆಧ್ಯತೆ, ಗಮನ, ಸಹಾಯ, ಬೆಂಬಲ, ಸಹಕಾರ, ಕ್ರಮ, ಕಾರ್ಯಕ್ರಮ, ಮಂತ್ರ ಎಂಬ ಪದಗಳನ್ನು ಹೇಳಿದ್ದರೆ ಹೊರತು ನಿರ್ದಿಷ್ಟವಾಗಿ ಅನುದಾನ ಹಂಚಿಕೆ ಮಾಡಿಲ್ಲ. ಈ ಬಜೆಟ್ ಪ್ರಾದೇಶಿಕತೆಯನ್ನು ಮರೆತಿದೆ. ವಲಯಗಳನ್ನು ಕಡೆಗಣಿಸಿದೆ. ವರ್ಗಗಳನ್ನು ನಿರ್ಲಕ್ಷ್ಯ

ಕೇಂದ್ರ ಬಜೆಟ್ : 2047ಕ್ಕೆ ಅರಳಲಿದೆ ವಿಕಸಿತ್ ಭಾರತ್ ಆಶ್ವಾಸನೆ

ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮಂತ್ರದ ಮೂಲಕ ಬಿಜೆಪಿ ಒಕ್ಕೂಟ ಸರಕಾರದ ಜನಪರ ಯೋಜನೆಗಳು ದೇಶದ ಮೂಲೆ ಮೂಲೆಗೆ ತಲುಪಿದೆ ಎಂದು ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಹೇಳುವುದರ ಮೂಲಕ ಚುನಾವಣಾ ಪೂರ್ವ ತಾತ್ಕಾಲಿಕ ಬಜೆಟ್ ಮಂಡಿಸಿದರು. 2047ಕ್ಕೆ ವಿಕಸಿತ ಭಾರತ್ ಅರಳಲು ತಮ್ಮ ಬಜೆಟ್ ಸಹಾಯಕ ಎಂದು ಅವರು ಹೇಳಿದರು.ತಾತ್ಕಾಲಿಕ ಬಜೆಟ್ಟಿನ ಕೆಲವು ಮುಖ್ಯಾಂಶಗಳು ಮುಂದಿನಂತಿವೆ. ದೇಶದ ಜನರು ನಮಗೆ ಬಹುಮತ ನೀಡಿ ಗೆಲ್ಲಿಸಿದ್ದಾರೆ. ಕಳೆದ ಹತ್ತು ವರುಷಗಳಿಂದ ಭಾರತದ

ನಿತೀಶ್ ಕುಮಾರ್ ಇಂಡಿಯಾ ಮೈತ್ರಿಕೂಟ ಬಿಡುತ್ತಿರುವ ಬಗ್ಗೆ ಮೊದಲೇ ಸುಳಿವು ಸಿಕ್ಕಿತ್ತು: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಬಿಹಾರ ಮುಖ್ಯಮಂತ್ರಿ ಬಿಜೆಪಿಯೊಂದಿಗೆ ಕೈಜೋಡಿಸುವ ವಿಚಾರದ ಬಗ್ಗೆ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಹಾಗೂ ಅವರ ಮಗ ತೇಜಸ್ವಿ ಯಾದವ್ ಅವರು ಐದು ದಿನಗಳ ಹಿಂದೆಯೇ ನನಗೆ ಮಾಹಿತಿ ನೀಡಿದ್ದರು. ಅದು ಈಗ ನಿಜವಾಗಿದೆ. ಅವರು ಹೋಗುವುದಾದರೆ ಹೋಗಲಿ ಎಂದು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಿತೀಶ್ ಕುಮಾರ್ ಅವರು ಇಂಡಿಯಾ ಮೈತ್ರಿಕೂಟ ಬಿಡುತ್ತಿರುವ ಬಗ್ಗೆ ಮುಂಚೆಯೇ ಸುಳಿವು

ಪಾಟ್ನಾ: ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ

ಬಿಹಾರ ರಾಜಕೀಯ ಭಾರಿ ಕುತೂಹಲ ಕೆರಳಿಸಿದ್ದು, ನಿತೀಶ್‌ ಕುಮಾರ್‌ ಬಿಹಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಹಾರ ರಾಜ್ಯಪಾಲರನ್ನು ಭೇಟಿ ಮಾಡಿದ ನಿತೀಶ್‌ ಕುಮಾರ್‌ ಅಧಿಕೃತವಾಗಿ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಆರ್‌ಜೆಡಿ, ಕಾಂಗ್ರೆಸ್‌, ಎಡರಂಗ ಹಾಗೂ ಜೆಡಿಯು ಮೈತ್ರಿ ಸರ್ಕಾರ ಪತನಗೊಂಡಿದೆ. ಇನ್ನೊಂದೆಡೆ, ಬಿಜೆಪಿ ಜತೆಗೆ ಸೇರಿ ಇಂದು ಸಂಜೆ ಮತ್ತೆ ಜೆಡಿಯು – ಬಿಜೆಪಿ ಸರ್ಕಾರ ರಚನೆಯಾಗೋದು ಸಹ ಬಹುತೇಕ ಖಚಿತವಾಗಿದೆ. ಭಾನುವಾರ

ಕೋಲಿಗೆ ಕಟ್ಟಿದ ಗಜ್ಜರಿ ನಿಗಮ ಮಂಡಳಿ

ಕರ್ನಾಟಕದಲ್ಲಿ 34 ಶಾಸಕರನ್ನು ನಿಗಮ ಮಂಡಳಿಗಳಿಗೆ ನೇಮಿಸಿ ಆದೇಶ ಹೊರಡಿಸಲಾಗಿದೆ. ಅವರಿಗೆಲ್ಲ ಮಂತ್ರಿ ಸ್ಥಾನಮಾನ ನೀಡಲಾಗಿದೆ. ಮಂತ್ರಿ ಮಂಡಲದಲ್ಲಿ 34 ಮಂದಿ ಇದ್ದಾರೆ. ಕಾರ್ಯದರ್ಶಿಗಳನ್ನೂ ಸೇರಿ ರಾಜ್ಯದಲ್ಲಿ ಮಂತ್ರಿ ಸ್ಥಾನಮಾನ ಪಡೆದವರ ಸಂಖ್ಯೆ 74ಕ್ಕೆ ಏರಿತು. ಎಲ್ಲ 4ರ ಮಹಿಮೆ. 4ನೇ ತಿಂಗಳಿನಲ್ಲಿ ಲೋಕ ಸಭೆ ಚುನಾವಣೆಯ ಬಿರುಸು. ಅದಕ್ಕೆ ಮೊದಲು ಅಸಮಾಧಾನ ಮರೆಸಿ ತಯಾರಾಗುವುದು ಗುರಿ. ಅದೇ ರಾಜಕೀಯದ ಕಿರಿಕಿರಿ. ರಾಜನಾದವನ ಕುತ್ತಿಗೆಯ ಮೇಲೆ ಸದಾ

ಇಂಡಿಯ ಮೈತ್ರಿಗೆ ಮುತ್ತಡೆ

ಇಂಡಿಯಾ ಮೈತ್ರಿ ಕೂಟದ ಕ್ಷೇತ್ರ ಹಂಚಿಕೆಯು ಪಡುವಣ ಬಂಗಾಳ ಮತ್ತು ಪಂಜಾಬಗಳಲ್ಲಿ ಒಂದು ಸಮಸ್ಯೆ ಆಗಿದೆ. ತೃಣಮೂಲ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಪಶ್ಚಿಮ ಬಂಗಾಳದ 42 ಮತ್ತು ಪಂಜಾಬಿನ 13 ತಮ್ಮ ಆಸ್ತಿ ಎಂದು ನಂಬಿವೆ. ಬಹು ಕಾಲ ಸಿಪಿಎಂ ಮತ್ತು ಕಾಂಗ್ರೆಸ್ ಪಕ್ಷಗಳು ಬಂಗಾಳದ್ದು ಮತ್ತು ಪಂಜಾಬಿನದು ತಮ್ಮ ಆಸ್ತಿ ಎಂದು ತಿಳಿದಿದ್ದವು. ಆ ಕಾಲವೆಲ್ಲ ಬದಲಾಗಿರುವುದು ಚರಿತ್ರೆ. ಮಮತಾ ಬ್ಯಾನರ್ಜಿಯವರು ರಾಜೀವ್ ಗಾಂಧಿಯವರ ಮೂಲಕ ಕಾಂಗ್ರೆಸ್ ಹೊಕ್ಕು ಆಮೇಲೆ

ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ

ಎಂಟು ತಿಂಗಳ ಹಿಂದೆ ವಿಧಾನ ಸಭಾ ಚುನಾವಣೆಯ ಕಾಲದಲ್ಲಿ ಟಿಕೆಟ್ ಸಿಗಲಿಲ್ಲ ಎಂದು ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಸೇರಿದ್ದಾರೆ, ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಕಾಂಗ್ರೆಸ್ಸಿನಿಂದ ಟಿಕೆಟ್ ಕೊಡುತ್ತಾರೆ ಎಂದು ವಿಧಾನ ಪರಿಷತ್ ಚುನಾವಣೆಯ ಕಾಲದಲ್ಲಿ ಕಾಂಗ್ರೆಸ್ ಸೇರಿದ್ದರು. ಆದರೆ ಚುನಾವಣೆಯಲ್ಲಿ ಸೋತರು. ಆದ್ದರಿಂದ ಅವರನ್ನು ಅನಂತರ ಮೇಲ್ಮನೆಗೆ ಕಳುಹಿಸಿತು.ಬಿಜೆಪಿಯಲ್ಲಿ ಶಾಸಕ, ಮಂತ್ರಿ,