Home ಕರಾವಳಿ Archive by category ಸುರತ್ಕಲ್

ತೆಂಗಿನಕಾಯಿ ಸಂಗ್ರಹಿಸಲು ನದಿಗೆ ಹೋಗಿದ್ದ ವ್ಯಕ್ತಿ ಸಾವು

ಬಜಪೆ : ನಂದಿನಿ ನದಿಯಲ್ಲಿ ತೆಂಗಿನಕಾಯಿ ಸಂಗ್ರಹಿಸಲು ಹೋಗಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನದಿಗೆ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಕಟೀಲು ಸಮೀಪದ ಕಲ್ಲಕುಮೇರು ಎಂಬಲ್ಲಿ ನಡೆದಿದೆ‌. ಬಂಟ್ವಾಳ ತಾಲೂಕು ಸಜಿಪ ಮುನ್ನೂರು ಗ್ರಾಮದ ನಂದಾವರ ಕೊಪ್ಪಳ ನಿವಾಸಿ ಅಶೋಕ (54) ಎಂಬವರು ಕೆಲಸದ ನಿಮಿತ್ತ ಕಟೀಲು ಬಳಿಯ ಸಂಬಂಧಿಕರ ಮನೆಯಲ್ಲಿ ವಾಸವಿದ್ದವರು

ಹಳೆಯಂಗಡಿ : ಗಾಳಿಗೆ ರಸ್ತೆಗುರಳಿದ ತೆಂಗಿನ ಮರ, ವಿದ್ಯುತ್ ಕಂಬಗಳು

ಮೂಲ್ಕಿ ತಾಲ್ಲೂಕಿನ ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳುವೈಲು ಪ್ರದೇಶದಲ್ಲಿ ಮಧ್ಯಾಹ್ನ ಬೀಸಿದ ಭಾರೀ ಗಾಳಿಗೆ ರಸ್ತೆ ಪಕ್ಕದಲ್ಲಿದ್ದ ತೆಂಗಿನ ಮರಗಳ ಸಹಿತ, ವಿದ್ಯುತ್ ಕಂಬಗಳು ಧರೆಶಾಹಿಯಾದ ಘಟನೆ ನಡೆದಿದ್ದು ಯಾವುದೇ ರೀತಿಯಲ್ಲಿ ಪ್ರಾಣಹಾನಿ ಸಂಭವಿಸಿಲ್ಲ. ದಕ್ಷಿಣದಿಂದ ಬೀಸಿದ ಬಲವಾದ ಗಾಳಿಗೆ ಮಾರುತಿ ರೈಸ್ ಮಿಲ್ಲಿನ ರಸ್ತೆ ಬದಿಯ ಖಾಸಗಿ ತೋಟದಲ್ಲಿದ್ದ ತೆಂಗಿನ ಮರಗಳು ಏಕಾಏಕಿ ಪಕ್ಕದ ವಿದ್ಯುತ್ ತಂತಗಳ ಮೇಲೆ ಬಿದ್ದುದರಿಂದ ಸುಮಾರು ಐದು ವಿದ್ಯುತ್

ವಿದ್ಯಾರ್ಥಿಗಳು ಶಾಲೆಯ ಪ್ರಮುಖ ಆಸ್ತಿಯಾಗುತ್ತಾರೆ: ಡಾ. ಹರಿಕೃಷ್ಣ ಪುನರೂರು

ವಿದ್ಯಾರ್ಥಿಗಳು ಶಾಲೆಯ ಪ್ರಮುಖ ಆಸ್ತಿಯಾಗುತ್ತಾರೆ; ಅವರಿಲ್ಲದೆ, ಶಾಲೆಗಳು ಮತ್ತು ಶಿಕ್ಷಕರು ಏನೂ ಅಲ್ಲ. ಶಿಕ್ಷಕರ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಮಾಡುವಲ್ಲಿ ವಿದ್ಯಾರ್ಥಿಗಳು ದೊಡ್ಡ ಪಾತ್ರವನ್ನು ವಹಿಸುತ್ತಾರೆ. ವಿದ್ಯಾರ್ಥಿಯನ್ನು ಸರಿದಾರಿಗೆ ತರುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ಆದಾಗ್ಯೂ, ಸರಿಯಾದ ದಾರಿಯಲ್ಲಿ ಇರಲು ತಮ್ಮ ಶಿಕ್ಷಕರ ಆದೇಶಗಳನ್ನು ಅನುಸರಿಸುವುದು ವಿದ್ಯಾರ್ಥಿಯ ಜವಾಬ್ದಾರಿಯಾಗಿದೆ. ಅವರು ಶಾಲೆಯಲ್ಲಿ ಪರಸ್ಪರ ಸಮಾನವಾಗಿ

ಶಿಬರೂರು: “ಬಾಲೆಗ್ ಒಲಿಯಿನ ಭ್ರಾಮರಿ” ತುಳು ನಾಟಕಕ್ಕೆ ಮುಹೂರ್ತ

ಶ್ರೀ ಕೊಡಮಣಿತ್ತಾಯ ಕ್ಷೇತ್ರ ಶಿಬರೂರು ದೇಲಂತಬೆಟ್ಟು ಇಲ್ಲಿ ಎಪ್ರಿಲ್ ತಿಂಗಳಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಪರಮಾನಂದ ಸಾಲ್ಯಾನ್ ರಚಿಸಿ ನಿರ್ದೇಶಿಸಿರುವ “ಬಾಲೆಗ್ ಒಲಿಯಿನ ಭ್ರಾಮರಿ” ತುಳು ಭಕ್ತಿಪ್ರಧಾನ ನಾಟಕದ ಮುಹೂರ್ತ ಸಮಾರಂಭವು ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತದಲ್ಲಿ ನಡೆಯಿತು.ಶುಭಮುಹೂರ್ತಕ್ಕೆ ಶಿಬರೂರು ಗುತ್ತು ಉಮೇಶ್ ಎನ್ ಶೆಟ್ಟಿ ಚಾಲನೆ ನೀಡಿದರು. ಬ್ರಹ್ಮಕಲಶೋತ್ಸವದ

ಸುರತ್ಕಲ್: ಫೆ.18 ರಂದು ಸುರತ್ಕಲ್ ನಲ್ಲಿ ಆಯುಷ್ಮಾನ್ ಮತ್ತು ಇ ಶ್ರಮ ಕಾಡ್೯ ವಿತರಣೆ

ಸುರತ್ಕಲ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ ಭಾರತ ಸರ್ಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕರ್ನಾಟಕ ಸರ್ಕಾರ ಬಂಟರ ಸಂಘ (ರಿ) ಸುರತ್ಕಲ್ ಇದರ ಸಹಯೋಗದಲ್ಲಿ ಸಾರ್ವಜನಿಕರಿಗೆ ಅಯುಷ್ಮಾನ್ ಭಾರತ ಕಾರ್ಡ್ ಮತ್ತು ಇ ಶ್ರಮ ಕಾರ್ಡ್ ವಿತರಣಾ ಕಾರ್ಯ ಕ್ರಮ ಸಮಾರಂಭ ಫೆಬ್ರವರಿ 18 ರಂದು ಆದಿತ್ಯವಾರ ಬೆಳಿಗ್ಗೆ 9-30 ಕ್ಕೆ ಬಂಟರ ಭವನ ಸುರತ್ಕಲ್ ಇಲ್ಲಿ ಆಯೋಜಿಸಲಾಗಿದೆ.ಅಧ್ಯಕ್ಷತೆಯನ್ನು ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು

ಸುರತ್ಕಲ್: ಯುವ ಜನತೆ ಕೃಷಿಯತ್ತ ಒಲವು ತೋರಿಸುವ ಅಗತ್ಯ ಇದೆ: ಅಬ್ದುಲ್ ಬಶೀರ್

ಸುರತ್ಕಲ್: ಭಾರತವು ಕೃಷಿ ಪ್ರಧಾನವಾದ ದೇಶವಾಗಿದ್ದು ಇಂದಿನ ಯುವ ಜನತೆ ಕೃಷಿಯತ್ತ ಒಲವು ತೋರಿಸುವ ಅಗತ್ಯ ವಿದೆ ಎಂದು ನಿವೃತ್ತ ಸುರತ್ಕಲ್ ಕೃಷಿ ಅಧಿಕಾರಿ ಅಬ್ದುಲ್ ಬಸೀರ್ ನುಡಿದರು ಅವರು ಬಂಟರ ಸಂಘ ಸುರತ್ಕಲ್, ಲಯನ್ಸ್ ಕ್ಲಬ್ ಸುರತ್ಕಲ್ ಮತ್ತು ಜೆಸಿಐ ಸುರತ್ಕಲ್ ಸಹಯೋಗ ದಲ್ಲಿ ಬಂಟರ ಭವನ ಸುರತ್ಕಲ್ ನಲ್ಲಿ ನಡೆದ ಸಾವಯವ ಕೃಷಿಕರ ಮತ್ತು ಗ್ರಾಹಕರ ಮುಖಾಮುಖಿ ಕಾರ್ಯ ಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು ಇಂದಿನ ಕಾಲಘಟ್ಟದಲ್ಲಿ ನಮ್ಮ ಆರೋಗ್ಯ ದ

ಗುಡ್ಡೆ ಹೋಟೆಲಿನ ಅಯ್ಯಪ್ಪ ಸ್ವಾಮಿ ಭಕ್ತವೃಂದದವರಿಂದ ಹೆಮ್ಮುಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿಗಾಗಿ ನೆರವು

ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ,ಎಸ್.ಎಮ್. ಡಿ .ಸಿ.ಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಊರಿನ ಜನತೆ ತಮ್ಮ

ಬಿಪಿಎಲ್ ಕುಟುಂಬಗಳಿಗೆ ಡಿಸೆಂಬರ್‌ನಲ್ಲಿ 17.68 ಕೋಟಿ ರೂ. ನಗದು ಜಮಾ

ಸಾರ್ವಜನಿಕ ವಿತರಣಾ ಪದ್ಧತಿಯಡಿ ಸರಕಾರದಿಂದ ಆಹಾರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಪ್ರತೀ ತಿಂಗಳು ವಿತರಿಸಲಾಗುತ್ತಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಹಸಿವು ಮುಕ್ತ ಕರ್ನಾಟಕದ ಪರಿಕಲ್ಪನೆಯೊಂದಿಗೆ ಅನ್ನಭಾಗ್ಯ ಯೋಜನೆಯಡಿ ಪ್ರತೀ ತಿಂಗಳು ಅರ್ಹ ಫಲಾನುಭವಿಗಳಿಗೆ ಪಡಿತರ ನೀಡಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 460 ನ್ಯಾಯಬೆಲೆ ಅಂಗಡಿಗಳಿದ್ದು ಒಟ್ಟು 451593 ಪಡಿತರ ಚೀಟಿಗಳಿವೆ.ಅಂತ್ಯೋದಯ ಅನ್ನಯೋಜನೆಯಡಿ ಜಿಲ್ಲೆಯಲ್ಲಿ ಬಡತನ

ಮಂಗಳೂರು: ಕುಳಾಯಿ ಕಿರುಜೆಟ್ಟಿ ಕಾಮಗಾರಿ ಪ್ರದೇಶಕ್ಕೆ ಸಂಸದ ನಳಿನ್ ಭೇಟಿ, ಪರಿಶೀಲನೆ

ಕುಳಾಯಿಯಲ್ಲಿ ನಿರ್ಮಾಣವಾಗುತ್ತಿರುವ ಕಿರು ಜೆಟ್ಟಿಯು ನಾಡದೋಣಿ ಮೀನುಗಾರರಿಗೆ ಅನುಕೂಲವಾಗುತ್ತಿಲ್ಲ. ಈಗಿನ ಬ್ರೇಕ್ ವಾಟರ್ ನಿರ್ಮಾಣ ಅವೈಜ್ನಾನಿಕವಾಗಿದ್ದು, ನಾಡದೋಣಿಕೆ ಪೂರಕವಾಗಿ ನಿರ್ಮಿಸಲಾಗುತ್ತಿಲ್ಲ. ಮೀನುಗಾರರು ಪ್ರಾಣ ಭೀತಿಯಲ್ಲಿದ್ದಾರೆ ಎಂದು ನಾಡದೋಣಿ ಮೀನುಗಾರರು ಹಾಗೂ ಸಾಂಪ್ರದಾಯಿಕ ಮೂಲ ಮೀನುಗಾರರ ಸಂಘಟನೆಗಳು ಸಂಸದ ನಳಿನ್ ಕುಮಾರ್ ಕಟೀಲ್ ಮುಂದೆ ಅಸಮಾಧಾನ ತೋಡಿಕೊಂಡರು. ಕುಳಾಯಿಯ ಕಿರು ಜೆಟ್ಟಿ ಕಾಮಗಾರಿ ಪ್ರದೇಶಕ್ಕೆ ಸಂಸದ ನಳಿನ್ ಕುಮಾರ್

ಸುರತ್ಕಲ್ ಠಾಣೆಗೆ ಹಾಜರಾಗಿ ಆಯಿಷಾ ಅಲ್ಲ ಅಕ್ಷತಾ ಎಂದು ಹೇಳಿಕೆ

ವಾರದ ಹಿಂದೆ ಓಡಿ ಹೋಗಿದ್ದ, ಆಮೇಲೆ ಮದುವೆಯ ಸುದ್ದಿಯನ್ನು ಹಂಚಿಕೊಂಡ ಆಯಿಷಾ ಮತ್ತು ಅಕ್ಷತಾ ದಂಪತಿ ಇಂದು ಸುರತ್ಕಲ್ ಪೋಲೀಸು ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದರು. ಆಯಿಷಾಳ ಹೆತ್ತವರು ಆಕೆ ಡಿಸೆಂಬರ್ 1ರಿಂದ ನಾಪತ್ತೆಯಾಗಿದ್ದುದರ ಬಗೆಗೆ ಸುರತ್ಕಲ್ ಪೋಲೀಸು ಠಾಣೆಯಲ್ಲಿ ದೂರು ನೀಡಿದ್ದರು. ಆದ್ದರಿಂದ ಅವರು ಸದರಿ ಠಾಣೆಗೆ ಭೇಟಿ ನೀಡುವುದು ಅನಿವಾರ್ಯವಾಗಿತ್ತು. ಮೂರು ವರುಷದಿಂದ ಪ್ರೀತಿಸುತ್ತಿದ್ದೆವು. ಅನ್ಯ ಧರ್ಮೀಯರಾದ್ದರಿಂದ ಮದುವೆಗೆ ಒಪ್ಪಿಗೆ ಸಿಗುವ ಸಂಭವ