Home Archive by category ಕರಾವಳಿ (Page 3)

ಮೂಡುಬಿದಿರೆ: ಗೋವಿಂದ ಭಟ್ ಅವರಿಗೆ ಬಲಿಪ ಭಾಗವತ ಪ್ರಶಸ್ತಿ ಪ್ರದಾನ

ಮೂಡುಬಿದಿರೆ: ಯಕ್ಷಗಾನ ಲೋಕದ ಮೇರು ಭಾಗವತ ದಿ. ಬಲಿಪ ನಾರಾಯಣ ಭಾಗವತ ಅವರ ಮೊದಲ ವರ್ಷದ ಸಂಸ್ಮರಣೆಯ ಅಂಗವಾಗಿ ಹಿರಿಯ ಕಲಾವಿದ ಗೋವಿಂದ ಭಟ್ ಅವರಿಗೆ ಬಲಿಪ ಭಾಗವತ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಾರೂರಿನ ನೂಯಿಯಲ್ಲಿರುವ ಬಲಿಪರ ನಿವಾಸದ ಆವರಣದಲ್ಲಿ ಜರಗಿದ ಕಟೀಲು ಮೇಳದ ಹರಿಕೆ ಬಯಲಾಟದ ರಂಗಸ್ಥಳದಲ್ಲಿ ಮಾನಪತ್ರ, ನಗದು ಗೌರವದೊಂದಿಗೆ ಈ ಪ್ರಶಸ್ತಿ ಪ್ರದಾನ

ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೊ: ಪೊಲೀಸ್ ಇಲಾಖೆ ಹೈ ಅಲರ್ಟ್

ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಲಿದ್ದು, ಮಂಗಳೂರು ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿದ್ದು, ಏರ್​ಪೋರ್ಟ್​​​ನಿಂದ ರೋಡ್ ಶೋ ಮುಕ್ತಾಯವಾಗುವ ಪ್ರದೇಶದವರೆಗೂ ಬಿಗಿ ಭದ್ರತೆ ಇರಲಿದ್ದು, ಸುಮಾರು 2500 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈ ಕುರಿತಾಗಿ ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್​ ಪ್ರತಿಕ್ರಿಯಿಸಿದ್ದು, ವಿಮಾನ ನಿಲ್ದಾಣದಿಂದ ಲೇಡಿಹಿಲ್​​ವರೆಗೂ ವಿಶೇಷ ಭದ್ರತೆ ಒದಗಿಸಲಾಗಿದ್ದು, ಸುಮಾರು 2500 ಸಾವಿರ ಪೊಲೀಸ್

ಪುತ್ತೂರು: ಅಪಾಯಕಾರಿ ತಿರುವು ತೆರವಿಗೆ ಶಾಸಕರ ಸೂಚನೆ

ಮಾಣಿ – ಮೈಸೂರು ರಾ.ಹೆದ್ದಾರಿ 275 ರ ಆರ್ಯಾಪು ಗ್ರಾಪಂ ವ್ಯಾಪ್ತಿಯ ಕಲ್ಲರ್ಪೆಯಲ್ಲಿ ಅಪಾಯಕಾರಿ ತಿರುವು ಇದ್ದು ಅದನ್ನು ಶಾಸಕರಾದ ಅಶೋಕ್ ರೈ ವೀಕ್ಷಣೆ ಮಾಡಿದರು. ಈ ತಿರುವಿನಲ್ಲಿ ಅನೇಕ ವಾಹನ ಅಫಘಾತಗಳು ನಡೆದಿದ್ದು ಮೂವರು ಮೃತಪಟ್ಟ ಘಟನೆಯೂ ನಡೆದಿತ್ತು. ಇಲ್ಲಿರುವ ಅಪಾಯಕಾರಿ ಧರೆಯನ್ನು ತೆರವು ಮಾಡಿ ವಾಹನ ಸಂಚಾರ ಗೋಚರಿಸುವಂತೆ ಮಾಡಬೇಕು ಎಂಬ ಆಗ್ರಹ ವ್ಯಕ್ತವಾಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಶಾಸಕರಿಗೆ ಅನೇಕ ಮಂದಿ ಮನವಿಯನ್ನು ಮಾಡಿದ್ದರು. ಈ

ಆಳ್ವಾಸ್ ಕಾಲೇಜಿನಲ್ಲಿ ತುಳು ರಂಗ್- 2024:ತುಳು ಭಾಷೆಯ ಆಸ್ತಿಯಾಗೋಣ: ಅರವಿಂದ್ ಕೆ. ಪಿ

ಮೂಡುಬಿದಿರೆ:  ನಾವು ಎಷ್ಟೇ ದೂರವಿದ್ದರೂ ಭಾಷೆ ಎಲ್ಲರನ್ನೂ, ಎಲ್ಲತನವನ್ನೂ ಒಗ್ಗೂಡಿಸುತ್ತದೆ. ಒಬ್ಬ ಜವಾಬ್ದಾರಿಯುತ ಪ್ರಜೆಯಾಗಿ ಎಲ್ಲವನ್ನೂ ಒಗ್ಗೂಡಿಸುವ ಕಾರ್ಯವನ್ನು ನಾವು ಮಾಡುವುದರ ಜೊತೆಗೆ  ತುಳು ಭಾಷೆಯ ಆಸ್ತಿಯಾಗುವ ಕೆಲಸ ಮಾಡಬೇಕಾಗಿದೆ  ಎಂದು ಅಂತರಾಷ್ಟ್ರೀಯ ಮೋಟಾರ್  ರೇಸರ್ ಮತ್ತು ಚಲನಚಿತ್ರ ನಟ ಅರವಿಂದ್ ಕೆ. ಪಿ ಹೇಳಿದರು. ಅವರು ಆಳ್ವಾಸ್ ಪದವಿ ಕಾಲೇಜಿನ ತುಳು ಸಂಸ್ಕೃತಿ ಅಧ್ಯಯನ ಕೇಂದ್ರ ಶನಿವಾರ ಆಯೋಜಿಸಿದ್ದ ಅಂತರ್ ಕಾಲೇಜು “ತುಳು

ಮಂಗಳೂರು: ಕಾಂಕ್ರೀಟು ಕಡಿದು ತೋಡಿದ ಗುಂಡಿ : ಅವೈಜ್ಞಾನಿಕತೆಗೆ ಬೇಕಿದೆ ಒಂದು ಕೊನೆ

ನಗರ ನಿವಾಸಿಗಳ ನಿರೀಕ್ಷೆಗಳು ಹುಸಿಯಾಗಿವೆ. ನಗರ ಸಂಪರ್ಕದ ಕಾಂಕ್ರೀಟ್ ರಸ್ತೆಗಳು ಮಾನ್ಸೂನ್‌ನಲ್ಲಿ ಬಾಳಿಕೆ ಬರುವಲ್ಲಿ ವಿಫಲವಾಗಿವೆ. ವಾಹನ ಮಾಲೀಕರಿಗೆ ಮತ್ತು ಪಾದಚಾರಿಗಳಿಗೆ ದುಃಸ್ವಪ್ನವಾಗಿ ಪರಿಣಮಿಸಿದ್ದು, ಮಂಗಳೂರು ಮಹಾನಗರಪಾಲಿಕೆ ವಿರುದ್ದ ವಾಹನ ಸವಾರರು ಹಿಡಿಶಾಪ ಹಾಕುತ್ತಿದ್ದಾರೆ. ಕಾಂಕ್ರೀಟ್ ರಸ್ತೆ ಯೋಜನೆಗಳು ಅವೈಜ್ಞಾನಿಕವಾಗಿದ್ದು ವಿವಿಧ ಸಿವಿಲ್ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ನೆಪದಲ್ಲಿ ವಿವಿಧೆಡೆ ರಸ್ತೆ ಅಗೆಯುತ್ತಿರುವುದು ಮಾತ್ರ

ಮಂಗಳೂರಿಗೆ ಮೋದಿ: ತರಾತುರಿಯಲ್ಲಿ ರಸ್ತೆಗೆ ತೇಪೆ ಕಾರ್ಯ

2024 ಲೋಕಸಭಾ ಚುನಾವಣೆ ನಿಮ್ಮಿತ್ತ ಬಿ.ಜೆ.ಪಿ ಪಕ್ಷದ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ಮತಯಾಚನೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ ೧೪ರಂದು ಮಂಗಳೂರಿಗೆ ಆಗಮಿಸಲ್ಲಿದ್ದು, ಮಂಗಳೂರು ನಗರವನ್ನು ಸ್ವಚ್ಚ ಹಾಗೂ ಸುಂದರಗೊಳಿಸುವ ಕೆಲಸಗಳು ತರಾತುರಿಯಲ್ಲಿ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರಕ್ಕೆ ಏಪ್ರಿಲ್ 14ರಂದು ನಗರಕ್ಕೆ ಆಗಮಿಸಲಿದ್ದು ಮಂಗಳೂರು ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ರೋಡ್ ಶೋ

ಭಾರತೀಯ ಮೂಲನಿವಾಸಿಗಳ ಹೊಸ ವರುಷ ಹರುಷ

ಭಾರತದ ಮೂಲ ನಿವಾಸಿಗಳ ಹೊಸ ವರುಷ ಬಂದಿದೆ. ಇದನ್ನು ಕೆಲವರು ಯುಗಾದಿ ಎಂದು ಹೇಳಿದರೂ ಅದನ್ನು ಆಚರಿಸುವವರು ಯಾರೂ ಹಾಗೆ ಹೇಳುವುದಿಲ್ಲ. ತುಳುವರು ಬಿಸು, ಅಸ್ಸಾಮಿಯರು ಬಿಹು, ತಮಿಳರು ಪುತ್ತಾಂಡು, ಮಲಯಾಳಿಗಳು ವಿಶು, ಪಂಜಾಬಿಗಳು ಬೈಶಾಕಿ ಹೀಗೆ ಈ ಭಾರತೀಯ ಮೂಲ ನಿವಾಸಿಗಳ ಯುಗಾದಿಯನ್ನು ಆಯಾ ಜನಾಂಗದವರು ನಾನಾ ನಾಮದಿಂ ಕರೆದು ಆಚರಿಸುತ್ತಾರೆ.ತುಳುವರಲ್ಲಿ ಈ ಹಬ್ಬಕ್ಕೆ ವಿಶೇಷ ಮಹತ್ವ ಇಲ್ಲವಾದರೂ ಪಾಯಸದೂಟ ಮಾಡುತ್ತಾರೆ. ಪಾಯಸಕ್ಕೆ ಹೊಸ ಗೋಡಂಬಿ ಬೀಜ

ಕರುಳು ಕಿರಿಕಿರಿ ಖಾಯಿಲೆ

ಕರುಳು ಕಿರಿಕಿರಿ ಖಾಯಿಲೆ ದೊಡ್ಡ ಕರುಳನ್ನು ಭಾಧಿಸುವ ಬಹಳ ಕಿರಿಕಿರಿ ಉಂಟುಮಾಡುವ ಮತ್ತು ಮಾನಸಿಕವಾಗಿ ವ್ಯಕ್ತಿಗೆ ಹೆಚ್ಚು ಕಿರುಕುಳ ನೀಡುವ ಖಾಯಿಲೆಯಾಗಿದ್ದು, ಆಂಗ್ಲಭಾಷೆಯಲ್ಲಿ ‘ಇರಿಟೇಬಲ್ ಬೋವೆಲ್ ಸಿಂಡ್ರೋಮ್’ ಎಂದು ಕರೆಯುತ್ತಾರೆ. ಕ್ರಿಯಾತ್ಮಕವಾಗಿ ಕರುಳಿನ ಒಳಭಾಗದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲದಿದ್ದರೂ ಈ ರೋಗದಿಂದ ಬಳಲುತ್ತಿರುವವರು ಸಾಮಾನ್ಯವಾಗಿ ಮಾನಸಿಕವಾಗಿ ಕುಗ್ಗಿರುತ್ತಾರೆ. ಆತಂಕ, ಒತ್ತಡ, ಖಿನ್ನತೆ, ಮುಂತಾದ ಮಾನಸಿಕ ಲಕ್ಷಣಗಳು ಈ

ಮಧ್ಯವಯಸ್ಕ ಮಹಿಳೆಯರನ್ನು ಕಾಡುವ ಫೈಬ್ರಾಯ್ಡ್

ಗರ್ಭಕೋಶದ ಬಳಭಾಗದ ಪದರಗಳಲ್ಲಿ ಸ್ಥಾನೀಯವಾಗಿ ಬೆಳೆಯುವ ಗಡ್ಡೆಗಳಿಗೆ ಫೈಬ್ರಾಯ್ಡ್ ಎಂದು ಕರೆಯುತ್ತಾರೆ. ಬಹಳ ನಿಧಾನವಾಗಿ ಬೆಳೆಯುವ ಕ್ಯಾನ್ಸರ್ ಅಲ್ಲದ ಗಡ್ಡೆ ಇದಾಗಿರುತ್ತದೆ. ಇದನ್ನು ಲಿಯೋಮಯೋಮಾ ಅಥವಾ ಮಯೋಮಾ ಎಂದೂ ಕರೆಯುತ್ತಾರೆ. ಹೆಚ್ಚಾಗಿ ಗರ್ಭಾಶಯದ ಮಾಂಸಖಂಡದ ಪದರಗಳಲ್ಲಿ ಇದು ಕಂಡುಬರುತ್ತದೆ. ಫೈಬ್ರಾಯ್ಡ್‍ಗಳ ಗಾತ್ರದಲ್ಲಿ ಬಹಳ ಅಂತರವಿರುತ್ತದೆ. ಸಣ್ಣ ಬಟಾಣಿ ಗಾತ್ರದಿಂದ ಹಿಡಿದು ದೊಡ್ಡ ಕುಂಬಳಕಾಯಿ ಗಾತ್ರದವರೆಗೂ ಬೆಳೆಯಬಹುದು. ಕೆಲವೊಮ್ಮೆ ಗರ್ಭಿಣಿ

ಪಾರ್ಕಿನ್‍ಸನ್ಸ್ ಎಂಬ ನಡುಕದ ಖಾಯಿಲೆ

ಪಾರ್ಕಿನ್‍ಸನ್ಸ್ ಎಂಬುದು ಒಂದು ಮೆದುಳಿನ ನರಮಂಡಲಗಳಿಗೆ ಸಂಬಂಧಿಸಿದ ಸಂಕೀರ್ಣ ಖಾಯಿಲೆಯಾಗಿದ್ದು, ಸಾಮಾನ್ಯವಾಗಿ ಇಳಿ ವಯಸ್ಸಿನಲ್ಲಿ ಕಂಡು ಬರುತ್ತದೆ. “ಪಾರ್ಕಿನ್‍ಸನ್ಸ್” ಖಾಯಿಲೆ ಇರುವ ರೋಗಿಗಳಲ್ಲಿ ದೇಹದ ಚಲನವಲನೆಗಳಲ್ಲಿ ವ್ಯತ್ಯಾಸವಾಗುವ ದೇಹ ಸ್ಥಿತಿ ಕಂಡುಬರುತ್ತದೆ. ಮೆದುಳಿನ ಅಸಹಜತೆಯ ಈ ಖಾಯಿಲೆಯಲ್ಲಿ ನಡುಕ, ಕಂಪಿಸುವುದು, ನಡೆದಾಡಲು ಕಷ್ಟವಾಗುವುದು, ಚಲನವಲನೆಗೆ ತೊಂದರೆ ಮತ್ತು ಸಂವಹನದ ತೊಂದರೆ ಉಂಟಾಗಬಹುದು. ಪುರುಷರಲ್ಲಿ ಜಾಸಿಕಂಡು ಬರುವ ಈ ರೋಗ,