Home Archive by category ಕ್ರೀಡೆ

ಖೇಲೋ ಇಂಡಿಯಾ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ಉಡುಪಿಯ ಅಭಿನ್ ಬಿ. ದೇವಾಡಿಗ

ಅಸ್ಸಾಮಿನ ಗುವಾಹಟಿಯಲ್ಲಿ ನಡೆದ ಖೇಲೋ ಇಂಡಿಯಾ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಉಡುಪಿಯ ಅಭಿನ್ ಬಿ. ದೇವಾಡಿಗ ಚಿನ್ನ ಗೆದ್ದಿದ್ದಾರೆ. 200 ಮೀಟರ್ ಓಟದ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಅಭಿನ್, 21 ಸೆಕೆಂಡ್ ನಲ್ಲಿ ಗುರಿ ಮುಟ್ಟಿದ್ದಾರೆ. ಜೈನ್ ಯುನಿವರ್ಸಿಟಿ ಬೆಂಗಳೂರಿನಲ್ಲಿ ಓದುತ್ತಿರುವ ಅವರು, ಉಡುಪಿ ಅಜ್ಜರಕಾರು ಕ್ರೀಡಾಂಗಣದ ಟ್ರ್ಯಾಕ್ ಆಂಡ್

ಭಾರತದ ಡಬಲ್ಸ್ ಟೆನ್ನಿಸಿಗರು

ಆಸ್ಟ್ರೇಲಿಯಾ ಓಪನ್ ಟೆನ್ನಿಸ್‍ನಲ್ಲಿ 43ರ ಪ್ರಾಯದಲ್ಲಿ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್ ಜೊತೆಗೆ ಪುರುಷರ ಡಬಲ್ಸ್ ಗೆದ್ದು ರೋಹನ್ ಬೋಪಣ್ಣ ಸಾಧನೆ ಮಾಡಿದರು. ಅತಿ ಹಿರಿಯ ಗ್ರಾನ್‍ಸ್ಲಾಮ್ ವಿನ್ನರ್, ಅತಿ ಹಿರಿಯ ಟೆನ್ನಿಸ್ ಡಬಲ್ಸ್ ಒನ್ ಇತ್ಯಾದಿ ಸಾಧನೆ ಕರ್ನಾಟಕದ ಕೊಡವ ರೋಹನ್ ಬೋಪಣ್ಣ ಅವರದಾಯಿತು. ಭಾರತದ ಜಾಗತಿಕ ಗ್ರಾನ್‍ಸ್ಲಾಮ್ ಸಾಧಕರಾದ ಸಾನಿಯಾ ಮಿರ್ಜಾ, ಲಿಯಾಂಡರ್ ಪಯಸ್, ಮಹೇಶ್ ಭೂಪತಿ ಮೊದಲಾದವರ ಸಾಲಿಗೆ ಬೋಪಣ್ಣ

ಕುಸ್ತಿ ಆಟಕ್ಕೆ ವಿದಾಯ ಹೇಳಿದ ಒಲಿಂಪಿಕ್ಸ್ ಪದಕ ವಿಜೇತೆ ಸಾಕ್ಸಿ ಮಲಿಕ್

ಆರೋಪಿಯ ಆಪ್ತನೇ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಿಗೇ ಸುದ್ದಿಗೊಷ್ಟಿ ನಡೆಸಿದ ಒಲಿಂಪಿಕ್ಸ್ ಪದಕ ವಿಜೇತೆ ಸಾಕ್ಸಿ ಮಲಿಕ್ ಅವರು ಇನ್ನೆಂದೂ ಕುಸ್ತಿ ಆಡುವುದಿಲ್ಲ ಎಂದು ಘೋಷಣೆ ಮಾಡಿದರು. ಭಾರತೀಯ ಕುಸ್ತಿ ಫೆಡರೇಶನ್‍ನಲ್ಲಿ ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ಇನ್ನೂ ನಿಲ್ಲುವ ಲಕ್ಷಣ ಇಲ್ಲ. ಮನಸಾಕ್ಸಿಯೊಡನೆ ಕುಸ್ತಿಯಲ್ಲಿ ಮುಂದುವರಿಯುವುದು ಸಾಧ್ಯವಿಲ್ಲ ಎಂದು ಸಾಕ್ಸಿ ಮಲಿಕ್ ಹೇಳಿದರು. ಸಾಕ್ಸಿಯವರ ಜೊತೆಗೆ ಬಜರಂಗ್

ಸಾತ್ವಿಕ್ ರೆಡ್ಡಿ – ಚಿರಾಗ್ ಶೆಟ್ಟಿ ಜೋಡಿಗೆ ಖೇಲ್ ರತ್ನ

ಈ ಬಾರಿಯ ಧ್ಯಾನ್‍ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ಬ್ಯಾಡ್ಮಿಂಟನ್ ಜೋಡಿ ಸಾತ್ವಿಕ್ ಸಾಯಿರಾಜ್ ಕಿರಣ್ ರೆಡ್ಡಿ ಮತ್ತು ಚಿರಾಗ್ ಶೆಟ್ಟಿಯವರಿಗೆ ನೀಡಲಾಗಿದೆ. ಇದೇ ವೇಳೆ 26 ಮಂದಿ ಕ್ರೀಡಾಳುಗಳಿಗೆ ಅರ್ಜುನ ಪ್ರಶಸ್ತಿ ನೀಡಲಾಗಿದೆ. ಜಮ್ಮು ಕಾಶ್ಮೀರದ ಶೀತಲ್ ದೇವಿ ಕಾಲಿನಿಂದಲೇ ಬಿಲ್ಲೆಳೆದು ಬಾಣ ಬಿಟ್ಟು ಅಂತರರಾಷ್ಟ್ರೀಯ ಸಾಧನೆ ಮಾಡಿದವರು. ಅವರ ಜೊತೆಗೆ ಮೊಹಮದ್ ಶಮಿ, ಪಾರುಲ್ ಚೌಧರಿ, ನಸ್ರೀನ್, ಪ್ರಾಚಿ ಯಾದವ್, ವೈಶಾಲಿ, ಅದಿತಿ ಎಂದು 26 ಜನ ಅರ್ಜುನ

33 ವರುಷಗಳ ಬಳಿಕ ಮಂಗಳೂರು ವಿವಿಗೆ ಕಬಡ್ಡಿ ಕಿರೀಟ

ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ, ಪೂರ್ಣ ಪ್ರಜ್ಞ ಕಾಲೇಜು ಮತ್ತು ಮಂಗಳೂರು ವಿವಿ ಸ್ನಾತಕೋತ್ತರ ಕೇಂದ್ರಗಳು ಜಂಟಿಯಾಗಿ ನಡೆಸಿದ ಅಂತರ ವಿಶ್ವವಿದ್ಯಾನಿಲಯ ಕಬಡ್ಡಿ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ತಂಡವು 33 ವರುಷಗಳ ಬಳಿಕ ಮತ್ತೆ ಚಾಂಪಿಯನ್ ಅಯಿತು. ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಪುರುಷರ ಕಬಡ್ಡಿಯ ಫೈನಲಿನಲ್ಲಿ 45- 15 ಅಂಕಗಳಿಂದ ಮಂಗಳೂರು ವಿವಿಗೆ ಸೋತ ಚೆನ್ನೈನ ವೇಲ್ ಸಯನ್ಸ್ ಆಂಡ್

ಮಂಗಳೂರು – ಡಿ.10ರಂದು ಅಂತರ್ ಧರ್ಮೀಯ ಸೌಹಾರ್ದ ಕ್ರೀಡಾ ಕೂಟ

ಕಥೋಲಿಕ್ ಸಭಾ ಮಂಗಳೂರು ಪ್ರದೇಶ, ಆಂಜೆಲೊರ್ ಘಟಕ ಮತ್ತು ಅಂತರ್ ಧರ್ಮೀಯ ಸಂವಾದ ಆಯೋಗ, ಆಂಜೆಲೊರ್ ಚರ್ಚ್ ವತಿಯಿಂದ ಪುರುಷರಿಗೆ ವಾಲಿಬಾಲ್ ಹಾಗೂ ಮಹಿಳೆಯರಿಗೆ ತ್ರೋಬಾಲ್ ಪಂದ್ಯಾವಳಿಯನ್ನು ಡಿ.10 ನಗರದ ಕಪಿತಾನಿಯೊ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಆಂಜೆಲೊರ್ ಚರ್ಚ್‍ನ ಅಂತರ್ ಧರ್ಮೀಯ ಆಯೋಗದ ಸಂಚಾಲಕರಾಧ ಫೆಲಿಕ್ಸ್ ಮೊರಾಸ್ ತಿಳಿಸಿದರು. ನಗರದ ಪ್ರೆಸ್ ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾಹಿತಿ ನೀಡಿದರು.

ಬಂಟ್ವಾಳ : ಇಂಡೋನೇಷ್ಯಾ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ಬಂಟ್ವಾಳದ ಯುವಕ

ಬಂಟ್ವಾಳ: ಮೂಲತಃ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕನೋರ್ವ ಇಂಡೋನೇಷಿಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾನೆ. ತಾಲೂಕಿನ ಕುಕ್ಕಿಪ್ಪಾಡಿ ಹುಣಸೆ ಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಎಂಬವರ ಪುತ್ರ ಧನೇಶ್ ಶೆಟ್ಟಿ ಇಂಡೋನೇಷಿಯಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದವರು. ವಿವಾಹಿತರಾಗಿರುವ ಧನೇಶ್ ಅವರು ತನ್ನ ಪತ್ನಿಯೊಂದಿಗೆ ಇಂಡೋನೇಷಿಯದ್ದಲ್ಲಿದ್ದು ಆರೋಗ್ಯ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಉತ್ತಮ ಕ್ರೀಡಾಪಟು ಆಗಿರುವ ಅವರಿಗೆ

ಬಹರೈನ್: ದ್ವೀಪದ ಕ್ರಿಕೆಟ್ ಪ್ರೇಮಿಗಳ ಮನಸೂರೆಗೊಂಡ “ವೈ.ಎಂ.ಸಿ ಟ್ರೋಫಿ-2023”

ಬಹರೈನ್ ದ್ವೀಪದ ವೈ.ಎಂ.ಸಿ ಸಂಘಟನೆಯು ‘ನಿಸರ್ಗ ಬಹರೈನ್”ನ ಆಶ್ರಯದಲ್ಲಿ ಜುಫೇರ್ ಪರಿಸರದಲ್ಲಿರುವ ಅಲ್ ನಜ್ಮಾ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾಟವೊಂದನ್ನು ಆಯೋಜಿಸಿದ್ದು, ಆಟಗಾರರೂ ವೀಕ್ಷಕರೂ ಸೇರಿದಂತೆ ದ್ವೀಪದ ನೂರಾರು ಕ್ರಿಕೆಟ್ ಪ್ರೇಮಿಗಳು ಈ ಪಂದ್ಯಾಟವನ್ನು ವೀಕ್ಷಿಸಿ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ದ್ವೀಪದ ಪ್ರಸಿದ್ಧ ಸಂಸ್ಥೆಯಾದ ಆರ್ & ಆರ್ ಸಂಸ್ಥೆಯು ಈ ಪಂದ್ಯಾಟದ ಮುಖ್ಯ ಪ್ರಾಯೋಜಕರಾಗಿ ಸಹಕರಿಸಿದ್ದರು.30 ಗಜಗಳ

ಬೈಂದೂರು: ರಾಷ್ಟ್ರೀಯ ದಾಖಲೆ ಗೈದ ಮಣಿಕಂಠ ಹೋಬಳಿದಾರ್ ಅವರಿಗೆ ಹುಟ್ಟೂರ ಸನ್ಮಾನ ಕಾರ್ಯಕ್ರಮ

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾ ನೇತೃತ್ವದಲ್ಲಿ 62ನೇ ರಾಷ್ಟ್ರೀಯ ಮುಕ್ತ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‍ನಲ್ಲಿ ಸರ್ವಿಸಸ್ ತಂಡವನ್ನು ಪ್ರತಿನಿಧಿಸಿ 100ಮೀ ಓಟದಲ್ಲಿ ಭಾರತದ ಅತ್ಯಂತ ವೇಗದ ಓಟಗಾರರಾಗಿ ದಾಖಲೆ ಮಾಡಿ ಚಿನ್ನದ ಪದಕ ಪಡೆದ ಮಣಿಕಂಠ ಹೋಬಳಿದಾರ್ ಇವರಿಗೆ ಹುಟ್ಟೂರ ಸನ್ಮಾನ ಕಾರ್ಯಕ್ರಮ ಬೈಂದೂರು ಶಾರದಾ ವೇದಿಕೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಬೈಂದೂರು ಬಿಜೆಪಿ

ಮೂಡುಬಿದಿರೆ : ವಿಶೇಷ ಚೇತನರ ದ.ಕ.ಜಿಲ್ಲಾ ಮಟ್ಟದ ಕ್ರೀಡಾಕೂಟ ಸಮಾರೋಪ: ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ : ದ.ಕ. ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರ ಕಛೇರಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ರೋಟರಿ ಆಂಗ್ಲ ಮಾಧ್ಯಮ ಶಾಲೆ, ಮೂಡುಬಿದಿರೆ ಇವರ ಸಹಯೋಗದೊಂದಿಗೆ ನಡೆದ ದ.ಕ. ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ವಿಶೇಷ ಸಾಮರ್ಥ್ಯದ ಮಕ್ಕಳ ಕ್ರೀಡಾಕೂಟದಲ್ಲಿ 14 ವರ್ಷ ವಯೋಮಿತಿಯ ವಿಭಾಗದಲ್ಲಿ ಬೆಳ್ತಂಗಡಿ ತಾಲೂಕು ಹಾಗೂ‌ 17ರ ವಯೋಮಿತಿಯ ವಿಭಾಗದಲ್ಲಿ ಬಂಟ್ವಾಳ ತಾಲೂಕು ಸಮಗ್ರ ಪ್ರಶಸ್ತಿಯನ್ನು