Home Archive by category Fresh News (Page 13)

ಮಾ.30ರಂದು ಕರಿಯರ್ ಎಕ್ಸ್‌ಪ್ಲೋರೇಷನ್ ಕಾರ್ಯಾಗಾರ

ಯೆನೆಪೋಯ ಡೀಮ್ಡ್ ಟು ಬಿ ಯುನಿವರ್ಸಿಟಿಯ ಡಿಸೈನ್ ವಿಭಾಗದ ವತಿಯಿಂದ ಕರಿಯರ್ ಎಕ್ಸ್‌ಪ್ಲೋರೇಷನ್ ಮಾರ್ಚ್ 30ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಅರುಣ್ ಎ ಭಾಗವತ್ ತಿಳಿಸಿದ್ದಾರೆ.ಅವರು ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ದ್ವಿತೀಯ ಪಿಯುಸಿ ಆದ ನಂತರ ಮುಂದೇನು ಎಂಬ ಬಗ್ಗೆ ಕಾರ್ಯಾಗಾರ ನಡೆಯಲಿದೆ.

ಮೂಡುಬಿದಿರೆ: ಹಿರೇ ಅಮ್ಮನವರ ಬಸದಿಯ ಪ್ರತಿಷ್ಠಾ ಪುರೋಹಿತ ಎಂ. ಧರ್ಮರಾಜ ಇಂದ್ರ ನಿಧನ

ಮೂಡುಬಿದಿರೆ: ಇಲ್ಲಿನ ಹಿರೇ ಅಮ್ಮನವರ ಬಸದಿಯ ಪ್ರತಿಷ್ಠಾ ಪುರೋಹಿತ ಎಂ. ಧರ್ಮರಾಜ ಇಂದ್ರ (94) ಪೇಪರ್ ಮಿಲ್ ಬಳಿ ತಮ್ಮ ನಿವಾಸದಲ್ಲಿ ಬುಧವಾರ ನಿಧನ ಹೊಂದಿದರು.ರಾಷ್ಟ್ರಭಾಷಾ ವಿಶಾರದರಾಗಿದ್ದ ಅವರು ಐದು ದಶಕಗಳಿಂದ ಬಸದಿಯ ಪುರೋಹಿತರಾಗಿ, ಬಸದಿಯಲ್ಲಿ ನಿಂತು ಹೋಗಿದ್ದ ರಥೋತ್ಸವವನ್ನುಮತ್ತೆ ಆರಂಭಿಸಿದ್ದರು. ನವರಾತ್ರಿ ಪೂಜೆ, ಲಕ್ಷಕುಂಕುಮಾರ್ಚನ ಸಪ್ತಾಹ ಸಹಿತ ವಿವಿಧ ಜೈನ ಧಾರ್ಮಿಕ ಆರಾಧನೆಗಳಲ್ಲಿ ಪುರೋಹಿತರಾಗಿ ಪಾಲ್ಗೊಂಡಿದ್ದರು.ಜೈನ ಧಾರ್ಮಿಕ ಆರಾಧನಾ

ಉಡುಪಿ: ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ 8.81 ಲಕ್ಷ ರೂ. ವಶಕ್ಕೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಅಕ್ರಮಗಳನ್ನು ತಡೆಯಲು ಕಟ್ಟೆಚ್ಚರ ವಹಿಸಲಾಗಿದ್ದು, ಕಳೆದ ಒಂದು ವಾರದಲ್ಲಿ ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ ಒಟ್ಟು 8.81ಲಕ್ಷ ರೂ. ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ತಿಳಿಸಿದ್ದಾರೆ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 3.50ಲಕ್ಷ ರೂ., ಕಾಪು ವಿಧಾನಸಭಾ ಕ್ಷೇಕತ್ರದ ಉದ್ಯಾವರ ಚೆಕ್‌ಪೋಸ್ಟ್‌ನಲ್ಲಿ 4.51ಲಕ್ಷ ರೂ. ಹಾಗೂ ಮಾ.23ರಂದು ಉಡುಪಿ

ಮಂಜೇಶ್ವರ: ಎಟಿಎಂಗೆ ಹಣ ತುಂಬಿಸಲು ಬಂದ ವಾಹನದಿಂದ ದರೋಡೆ

ಮಂಜೇಶ್ವರ : ಎಟಿಎಂಗೆ ಹಣ ತುಂಬಿಸಲು ಬಂದ ವಾಹನದ ಗಾಜು ಪುಡಿಗೈದು ೫೦ಲಕ್ಷ ರೂ. ದರೋಡೆಗೈದು ತಂಡ ಪರಾರಿಯಾದ ಘಟನೆ ಉಪ್ಪಳದಲ್ಲಿ ನಡೆದಿದೆ. ವಾಹನದ ಗಾಜು ಒಡೆದು ಹಣವಿದ್ದ ಪೆಟ್ಟಿಗೆಯನ್ನು ತೆಗೆದುಕೊಂಡು ತಂಡ ಪರಾರಿಯಾಗಿದೆ ಎಂದು ತಿಳಿದು ಬಂದಿದೆ. ಬುಧವಾರ ಮಧ್ಯಾಹ್ನ 2 ಗಂಟೆಗೆ ಉಪ್ಪಳದಲ್ಲಿ ಈ ಘಟನೆ ನಡೆದಿದೆ. ಎಟಿಎಂನಲ್ಲಿ ಹಣ ತುಂಬುತ್ತಿದ್ದಾಗ ಖಾಸಗಿ ಕಂಪನಿಯ ವಾಹನದಲ್ಲಿ ಕಳ್ಳತನ ನಡೆದಿದೆ. ಸ್ಥಳಕ್ಕಾಗಮಿಸಿದ ಉಪ್ಪಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ

ಕಡಬ ತಾ.ಪಂ.ಗೆ ಲೋಕಾಯುಕ್ತ ಪೊಲೀಸ್ ದಾಳಿ

ಕಡಬ ತಾಲೂಕು ಪಂಚಾಯತ್‌ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಕಡಬ ತಾಲೂಕು ಪಂಚಾಯತ್ ನ ನೂತನ ಕಾರ್ಯ ನಿರ್ವಾಹಕ ಅಧಿಕಾರಿ ಬಿ. ವಿ. ಜಯಣ್ಣ ಅವರು ಈ ಹಿಂದೆ ಸೋಮವಾರಪೇಟೆ ತಾಲೂಕು ಪಂಚಾಯತ್‌ನಲ್ಲಿ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದು, ಅಲ್ಲಿಗೆ ಸಂಬಂಧಿಸಿದ ಅಕ್ರಮ ಅಸ್ತಿ ಪ್ರಕರಣದ ಹಿನ್ನೆಲೆ ಲೋಕಾಯುಕ್ತ ಪೊಲೀಸರು ತನಿಖೆಗಾಗಿ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ. ಸೋಮವಾರಪೇಟೆಯಲ್ಲಿ ಜಯಣ್ಣ ಅವರಿಗೆ ಸೇರಿದ ಮನೆಯ ಮೇಲೆಯೂ ದಾಳಿ ನಡೆದಿದೆ. ಜಯಣ್ಣ

“ಬಾಲ ನ್ಯಾಯ ಸೋನು ನ್ಯಾಯ”

ಬಿಗ್ ಬಾಸ್ ಮತ್ತು ರೀಲ್ಸ್ ಮೂಲಕ ಸಾಮಾಜಿಕ ಜಾಲ ತಾಣಗಳಲ್ಲಿ ಸದ್ದು ಮಾಡಿದ್ದ ಸೋನು ಶ್ರೀನಿವಾಸ ಗೌಡ ಅವರನ್ನು ಕಾನೂನು ಬಾಹಿರ ದತ್ತು ಸ್ವೀಕಾರದ ಸಂಬಂಧ ಬಂಧಿಸಲಾಗಿತ್ತು. ಈಗ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಸರಳ ಹಿಂದೆ ಇಡಲಾಗಿದೆ. ಕಾನೂನು ಮತ್ತು ಅದು ಎತ್ತುವ ಪ್ರಶ್ನೆಗಳು ಇಲ್ಲಿ ಮಗುವಿನ ಸ್ಥಿತಿಗತಿಗೆ ಉತ್ತರವನ್ನು ನೀಡುವುದಿಲ್ಲ. ಒಟ್ಟಿನಲ್ಲಿ ಏನೂ ಅರಿಯದ ವಯಸ್ಸಿನಲ್ಲಿ ಇಂತಾ ಮಕ್ಕಳು ತ್ರಿಶಂಕು ಮನೋ ತುಮುಲಕ್ಕೆ ಒಳಗಾಗುತ್ತಾರೆ.

ಪುತ್ತೂರಿನಲ್ಲಿ ಆಯೋಜನೆಗೊಳ್ಳಲಿದೆ ಬೃಹತ್ ಚುನಾವಣಾ ಪ್ರಚಾರ ಸಭೆ : ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ ಎಂದು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಈಗಾಗಲೇ ಕುದ್ರೋಳಿ ದೇವಸ್ಥಾನದ ಮುಂಭಾಗ ಚಾಲನೆ ನೀಡಲಾಗಿದೆ. ಚುನಾವಣಾ ಕಚೇರಿಯೂ ಉದ್ಘಾಟನೆಗೊಂಡಿದೆ. ಮುಂದೆ ಲೋಕಸಭಾ ಕ್ಷೇತ್ರದ

ಉಳ್ಳಾಲ: ಕಿಂಗ್ಸ್ ಕಲ್ಲಾಪು ವತಿಯಿಂದ ಭಂದುತ್ವ ಸೌಹಾರ್ದ ಇಫ್ತಾರ್ ಕೂಟ

ಉಳ್ಳಾಲ: ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ ಕಿಂಗ್ಸ್ ಕಲ್ಲಾಪು ಅಯೋಜಿಸಿದ ಬಂಧುತ್ವ ಸೌಹಾರ್ದ ಇಫ್ತಾರ್ ಕೂಟ ತೊಕ್ಕೋಟ್ಟು ಯುನಿಟಿ‌ ಹಾಲ್‌ ಮೈದಾನದಲ್ಲಿ ನಡೆಯಿತು. ಸಭಾಧ್ಯಕ್ಷ ಯು.ಟಿ ಖಾದರ್ ಫರೀದ್ ಮುಖ್ಯ ಅತಿಥಿಯಾಗಿ ‌ಭಾಗವಹಿಸಿ‌ ಮಾತನಾಡಿ, ಪವಿತ್ರವಾದ ತಿಂಗಳ ಪವಿತ್ರವಾದ ದಿನದಲ್ಲಿ ಶ್ರದ್ಧಾಪೂರ್ವಕ ಉಪವಾಸ ವೃತ ‌ಮಾಡಿಕೊಂಡು ಇಫ್ತಾರ್ ಸಂದರ್ಭದಲ್ಲಿ ಎಲ್ಲಾ ಜಾತಿ ಎಲ್ಲಾ ಧರ್ಮದ ಸಮಾಜಿಕ ಧಾರ್ಮಿಕ ಮುಖಂಡರನ್ನು ಸೇರಿಸಿಕೊಂಡು ಭಂದುತ್ವ

ಲೋಕಸಭಾ ಚುನಾವಣೆ: ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಜನಾರ್ದನ ಪೂಜಾರಿ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರ ಚುನಾವಣಾ ಕಚೇರಿ ಮಂಗಳೂರು ಲಾಲ್’ಭಾಗ್’ನಲ್ಲಿ ಉದ್ಘಾಟನೆಗೊಂಡಿತು.ಮಂಗಳೂರು ಮಹಾನಗರ ಪಾಲಿಕೆ ಬಳಿಯಲ್ಲಿರುವ ಕಚೇರಿಯನ್ನು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ,

ಮೂಡುಬಿದಿರೆ: ಮೊದಲ ಮತ ಚಲಾಯಿಸಲಿರುವ ನೂತನ ಮತದಾರರಿಗೆ ಮತದಾನದ ಜಾಗೃತಿ ಕಾರ್ಯಕ್ರಮ

ಮೂಡುಬಿದಿರೆ: ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್‌ಸಮಿತಿ ಹಾಗೂ ಸಾರ್ವತ್ರಿಕ ಲೋಕಸಭಾ ಚುನಾವಣೆ -2024 ಮೂಡುಬಿದಿರೆ ಸ್ವೀಪ್ ಸಮಿತಿ ವತಿಯಿಂದ ಮೂಡುಬಿದಿರೆ ತಾಲೂಕಿನ ಮಹಾವೀರ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವ ಹಾಗೂ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮವು ಸೋಮವಾರ ಕಾಲೇಜು ಸಭಾಂಗಣದಲ್ಲಿ ನಡೆಯಿತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟಚಲಪತಿ ಅವರು ಯುವ ವಿದ್ಯಾರ್ಥಿಗಳಿಗೆ ಮತದಾನ ತಮ್ಮ‌ಜೀವನದಲ್ಲಿ ಎಷ್ಟು