Home Archive by category Fresh News (Page 30)

ಉಳ್ಳಾಲ: ಕೊಂಡಾಣ ದೈವಸ್ಥಾನದ ಭಂಡಾರ ಮನೆ ಧ್ವಂಸ: ಸ್ಥಳಕ್ಕೆ ತಹಶೀಲ್ದಾರ್, ಮುಖ್ಯಾಧಿಕಾರಿ, ಎಸಿಪಿ ಭೇಟಿ ಪರಿಶೀಲನೆ

ಉಳ್ಳಾಲ ತಾಲೂಕಿನ ಕೊಂಡಾಣ ಕ್ಷೇತ್ರದ ಪಿಲಿಚಾಮುಂಡಿ ದೈವಸ್ಥಾನಕ್ಕೆ ಸೇರಿದ ನಿರ್ಮಾಣ ಹಂತದ ಭಂಡಾರ ಮನೆಯನ್ನು ಕಿಡಿಗೇಡಿಗಳು ಜೆಸಿಬಿ ಮೂಲಕ ಧ್ವಂಸಗೊಳಿಸಿದ ಘಟನೆ ನಡೆದಿದೆ. ಭಾರಿ ಸಂಖ್ಯೆಯಲ್ಲಿ ಭಕ್ತರು ಜಮಾವಣೆಗೊಂಡ ಹಿನ್ನೆಲೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಸ್ಥಳಕ್ಕೆ ಕೋಟೆಕಾರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಆನಂದ್, ತಹಶೀಲ್ದಾರ್ ಪುಟ್ಟರಾಜು, ಎಸಿಪಿ

ಹಳೆಯಂಗಡಿ : ಗಾಳಿಗೆ ರಸ್ತೆಗುರಳಿದ ತೆಂಗಿನ ಮರ, ವಿದ್ಯುತ್ ಕಂಬಗಳು

ಮೂಲ್ಕಿ ತಾಲ್ಲೂಕಿನ ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳುವೈಲು ಪ್ರದೇಶದಲ್ಲಿ ಮಧ್ಯಾಹ್ನ ಬೀಸಿದ ಭಾರೀ ಗಾಳಿಗೆ ರಸ್ತೆ ಪಕ್ಕದಲ್ಲಿದ್ದ ತೆಂಗಿನ ಮರಗಳ ಸಹಿತ, ವಿದ್ಯುತ್ ಕಂಬಗಳು ಧರೆಶಾಹಿಯಾದ ಘಟನೆ ನಡೆದಿದ್ದು ಯಾವುದೇ ರೀತಿಯಲ್ಲಿ ಪ್ರಾಣಹಾನಿ ಸಂಭವಿಸಿಲ್ಲ. ದಕ್ಷಿಣದಿಂದ ಬೀಸಿದ ಬಲವಾದ ಗಾಳಿಗೆ ಮಾರುತಿ ರೈಸ್ ಮಿಲ್ಲಿನ ರಸ್ತೆ ಬದಿಯ ಖಾಸಗಿ ತೋಟದಲ್ಲಿದ್ದ ತೆಂಗಿನ ಮರಗಳು ಏಕಾಏಕಿ ಪಕ್ಕದ ವಿದ್ಯುತ್ ತಂತಗಳ ಮೇಲೆ ಬಿದ್ದುದರಿಂದ ಸುಮಾರು ಐದು ವಿದ್ಯುತ್

ಅನರ್ಕಲಿ ತುಳು ಸಿನಿಮಾದ “ನಾಲ್ ಪದಕುಲು” ಹಾಡು ಬಿಡುಗಡೆ

ಲಕುಮಿ ಸಿನಿ ಕ್ರಿಯೇಷನ್ಸ್‌ನ ಅನರ್ಕಲಿ ತುಳು ಸಿನಿಮಾದ ನಾಲ್ ಪದಕುಲು ಶೀರ್ಷಿಕೆಯ ಹಾಡು ಜಾಂಕರ್ ಮ್ಯೂಸಿಕ್ ಕರಾವಳಿ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಗೊಂಡಿತು. ಅನರ್ಕಲಿ ತುಳು ಸಿನಿಮಾ ತುಳುನಾಡಿನ ವೇಷ, ಸಂಸ್ಕೃತಿಯನ್ನು ಆಧರಿಸಿ ಹೆಣೆದ ಕಥೆಯಾಗಿದೆ. ಕಟೀಲು ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ನಡೆದಿದ್ದು, ಇದರಲ್ಲಿ ನಾಲ್ಕು ಹಾಡುಗಳಿವೆ. ಅದರಲ್ಲಿ ನಾಲ್ ಪದಕುಲು ಹಾಡು ಅದ್ಭುತವಾಗಿ ಮೂಡಿಬಂದಿದೆ. ಶೋಭರಾಜ್ ಪಾವೂರು ನಾಯಕ ನಟನಾಗಿ ನಟಿಸಿದ್ದಾರೆ. ಎಲ್ ಎನ್

ದೇರಳಕಟ್ಟೆ: ನಿಟ್ಟೆ ಇಮೇಜಿಂಗ್ ಟೆಕ್ನಾಲಜಿಯ 3ನೇ ರಾಷ್ಟ್ರೀಯ ಸಮ್ಮೇಳನ: ಎನ್‌ಸಿಎನ್‌ಐಟಿ-2024

ದೇರಳಕಟ್ಟೆ: ನಿಟ್ಟೆ ಕೆ.ಎಸ್ ಹೆಗ್ಡೆ ವೈದ್ಯಕೀಯ ಅಕಾಡೆಮಿಯ ಮೆಡಿಕಲ್ ಇಮೇಜಿಂಗ್ ಟೆಕ್ನಾಲಜಿ ಆಂಡ್ ರೇಡಿಯಾಲಜಿ ವಿಭಾಗದ ಆಶ್ರಯದಲ್ಲಿ ಎನ್‌ಸಿಎನ್ ಐಟಿ-2024 ನಿಟ್ಟೆ ಇಮೇಜಿಂಗ್ ಟೆಕ್ನಾಲಜಿ ಇದರ ಮೂರನೇ ರಾಷ್ಟ್ರೀಯ ಸಮ್ಮೇಳನ ಕ್ಷೇಮ ಆಡಿಟೋರಿಯಂನಲ್ಲಿ ನಡೆಯಿತು. ದೇರಳಕಟ್ಟೆಯ ನಿಟ್ಟೆ ಪರಿಗಣಿತ ವಿ.ವಿ.ಯ ಉಪಕುಲಾಧಿಪತಿ  ವಿಶಾಲ್ ಹೆಗ್ಡೆ ಎನ್ ಸಿ ಎನ್ ಐಟಿ 2024  ನಿಟ್ಟೆ ಇಮೇಜಿಂಗ್ ಟೆಕ್ನಾಲಜಿ ಇದರ ಮೂರನೇ ರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ ನೀಡಿದರು.ಬಳಿಕ

ಪುತ್ತೂರು: ಮಾ.7ರಂದು ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ

ಪುತ್ತೂರು: ರೈತರ ಫಲವತ್ತಾದ ಭೂಮಿಯನ್ನು ಹಾಳು ಮಾಡುವ ಕಾರ್ಯವನ್ನು ಮಾಡಲಾಗುತ್ತಿದೆ. ಅಧಿಕಾರಿಗಳಿಗೆ ರೈತರ ಬಗ್ಗೆ ಕಳಕಳಿ ಇರುತ್ತಿದ್ದರೆ, ಇಂತಹ ದುಸ್ಥಿತಿ ಬರುತ್ತಿರಲಿಲ್ಲ. ಹೊಸ ಸರ್ಕಾರ ಅಸ್ಥಿತ್ವಕ್ಕೆ ಬಂದು 6 ತಿಂಗಳು ಕಳೆದರೂ, ಜಿಲ್ಲಾಧಿಕಾರಿಯವರು ರೈತರ ಸಭೆ ನಡೆಸಿಲ್ಲ. ವಿವಿಧ ಬೇಡಿಕೆಯನ್ನು ಇಟ್ಟುಕೊಂಡು ಮಾ.7ರಂದು ಮಧ್ಯಾಹ್ನ 2ರಿಂದ ಬಿಸಿರೋಡಿನಿಂದ ಟ್ರ್ಯಾಕ್ಟರ್ ಹಾಗೂ ವಾಹನ ಜಾಥಾ ಮೂಲಕ ಜಿಲ್ಲಾಧಿಕಾರಿಗಳ ಕಛೇರಿ ಎದುರು ಸಾಯಂಕಾಲ 4ಕ್ಕೆ ಬೃಹತ್

      ಪುತ್ತೂರು: ಉತ್ಕೃಷ್ಟ ಸಂಸ್ಕೃತಿಯ ಪ್ರತೀಕ ತುಳು ಭಾಷೆ: ವಾಮನ ಪೈ

ಪುತ್ತೂರು: ಭಾಷೆ ಮಾತ್ರವಾಗಿರದೆ ಉತ್ಕೃಷ್ಟ ಸಂಸ್ಕೃತಿಯ ಪ್ರತೀಕವಾಗಿರುವ ತುಳುವಿಗೆ ಅಪಾರ ಶಕ್ತಿಯಿದೆ. ಪ್ರಪಂಚದಲ್ಲೇ ಅತ್ಯಂತ ಹಳೆಯ ಭಾಷೆಯಾಗಿರುವ ತುಳುವಿಗೆ ಹಾಗೂ ತುಳು ಭಾಷಿಗರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಗ್ಗಳಿಕೆಯೊಂದಿಗೆ ವಿಶೇಷ ಗೌರವವಿದೆ ಎಂದು ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ವಾಮನ ಪೈ ಹೇಳಿದರು. ತುಳುಕೂಟೊ ಪುತ್ತೂರು ತಾಲೂಕು ಸಮಿತಿ ಆಶ್ರಯದಲ್ಲಿ ಮಂಜಲ್ಪಡ್ಪು ಸುದಾನ ವಸತಿಯುತ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿರುವ ಎರಡು

ಖೇಲೋ ಇಂಡಿಯಾ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ಉಡುಪಿಯ ಅಭಿನ್ ಬಿ. ದೇವಾಡಿಗ

ಅಸ್ಸಾಮಿನ ಗುವಾಹಟಿಯಲ್ಲಿ ನಡೆದ ಖೇಲೋ ಇಂಡಿಯಾ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಉಡುಪಿಯ ಅಭಿನ್ ಬಿ. ದೇವಾಡಿಗ ಚಿನ್ನ ಗೆದ್ದಿದ್ದಾರೆ. 200 ಮೀಟರ್ ಓಟದ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಅಭಿನ್, 21 ಸೆಕೆಂಡ್ ನಲ್ಲಿ ಗುರಿ ಮುಟ್ಟಿದ್ದಾರೆ. ಜೈನ್ ಯುನಿವರ್ಸಿಟಿ ಬೆಂಗಳೂರಿನಲ್ಲಿ ಓದುತ್ತಿರುವ ಅವರು, ಉಡುಪಿ ಅಜ್ಜರಕಾರು ಕ್ರೀಡಾಂಗಣದ ಟ್ರ್ಯಾಕ್ ಆಂಡ್ ಫೀಲ್ಡ್ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಉಡುಪಿಯ ಜಹೀರ್ ಅಬ್ಬಾಸ್ ಗರಡಿಯಲ್ಲಿ 2017

ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಕೇಂದ್ರ ಕಚೇರಿಯಲ್ಲಿ ವಿನೋದ್ ತಾವ್ಡೆ ಸುದ್ದಿಗೋಷ್ಠಿ ನಡೆಸಿದ್ದು, ಈ ಬಾರಿ 400ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ. ಮೊದಲ ಪಟ್ಟಿಯಲ್ಲಿ  ಹಲವು ಪ್ರಮುಖರಿಗೆ ಟಿಕೆಟ್ ನೀಡಲಾಗಿದೆ. ಕಳೆದ 1 ದಶಕದಿಂದ ಪ್ರಧಾನಿ ಮೋದಿ ನೇತೃತ್ವದಲ್ಲಿ ಯಶಸ್ವಿ ಆಡಳಿತ ನಡೆಸಿದ್ದೇವೆ. ಈ ಬಾರಿ 400 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ

ಬಂಟ್ವಾಳ: ರಾಜ್ಯ ಸರ್ಕಾದ ವಿರುದ್ಧ ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿಯ ವತಿಯಿಂದ ಪ್ರತಿಭಟನೆ

ಬಂಟ್ವಾಳ: ವಿಧಾನಸೌಧದಲ್ಲಿ ಪಾಕಿಸ್ಥಾನಕ್ಕೆ ಜಿಂದಾಬಾದ್ ಹೇಳಿದ ಭಯೋತ್ಪಾದಕ ಪ್ರೇಮಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿಯ ವತಿಯಿಂದ ಪ್ರತಿಭಟನೆ ಶನಿವಾರ ಬಿ.ಸಿ.ರೋಡಿನಲ್ಲಿ ನಡೆಯಿತು.ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ, ಎಂಟು ತಿಂಗಳ ಅವಧಿಯಲ್ಲಿ

ಬಂಟ್ವಾಳ: 13ನೇ ವರ್ಷದ ಮೂಡೂರು ಪಡೂರು ಜೋಡುಕರೆ ಬಯಲು ಕಂಬಳಕ್ಕೆ ಅದ್ಧೂರಿ ಚಾಲನೆ

ಬಂಟ್ವಾಳ: ಮೂಡೂರು ಪಡೂರು ಜೋಡುಕರೆ ಕಂಬಳ ಸಮಿತಿ ಬಂಟ್ವಾಳ ಇದರ ಆಶ್ರಯದಲ್ಲಿ ಬಂಟ್ವಾಳ ಕಂಬಳ ಎಂದೇ ಪಸಿದ್ದಿ ಪಡೆದಿರುವ 13ನೇ ವರ್ಷದ ಹೊನಲು ಬೆಳಕಿನ ಮೂಡೂರು ಪಡೂರು ಜೋಡುಕರೆ ಬಯಲು ಕಂಬಳಕ್ಕೆ ನಾವೂರು ಗ್ರಾಮದ ಕೂಡಿಬೈಲಿನಲ್ಲಿ ಶನಿವಾರ ಬೆಳಿಗ್ಗೆ ಚಾಲನೆ ನೀಡಲಾಯಿತು.ಅಲ್ಲಿಪಾದೆ ಸಂತ ಅಂತೋನಿ ಧರ್ಮಕೇಂದ್ರದ ಧರ್ಮಗರುಗಳಾದ ವಂದನೀಯ ಫೆಡ್ರಿಕ್ ಮೊಂತೆರೋ ಕಂಬಳ ಉದ್ಘಾಟಿಸಿದರು.ಕಂಬಳ ಸಮಿತಿಯ ಗೌರವಾಧ್ಯಕ್ಷ, ಮಾಜಿ ಸಚಿವ ಬಿ. ರಮಾನಾಥ ರೈ ಕರೆ ಉದ್ಘಾಟಿಸಿ