Home Archive by category Fresh News (Page 50)

ದೇರಳಕಟ್ಟೆ: “ಮೇಲೋಗರ” ಕೃತಿ ಲೋಕಾರ್ಪಣೆ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಳ್ಳಾಲ ತಾಲೂಕು ವತಿಯಿಂದ ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ನಿವೃತ್ತ ಮುಖ್ಯಶಿಕ್ಷಕ ಕೆ. ರವೀಂದ್ರ ರೈ ಕಲ್ಲಿಮಾರ್ ಅವರ ಚಿಂತನ ಶಾಲೆಯ ಸಂಚಿತ ಬರಹಗಳ ಸಂಕಲನ “ಮೇಲೋಗರ” ಕೃತಿ ಲೋಕಾರ್ಪಣೆ ಕಾರ್ಯಕ್ರಮ ದೇರಳಕಟ್ಟೆ ದಿ ಕಂಫರ್ಟ್ಸ್ ಇನ್ ಹೋಟೆಲ್ ನಲ್ಲಿ ನಡೆಯಿತು. ಉಡುಪಿ ಜಿಲ್ಲಾಧಿಕಾರಿ ಡಾ.

ಮಂಗಳೂರು: ಆತ್ಮಶಕ್ತಿ ಸ್ಥಾಪನಾ ದಿನ: ಸೌರ ವಿದ್ಯುತ್ ಘಟಕದ ಉದ್ಘಾಟನೆ

ಮಂಗಳೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಆತ್ಮಶಕ್ತಿ ಸ್ಥಾಪನಾ ದಿನಾಚರಣೆ ಮತ್ತು ಹವಾ ನಿಯಂತ್ರಿತ ಸಭಾಂಗಣ ಹಾಗೂ ನೂತನ ಸೌರ ವಿದ್ಯುತ್ ಘಟಕದ ಉದ್ಘಾಟನಾ ಕಾರ್ಯಕ್ರಮವು ಪಡೀಲ್‌ನ ಆತ್ಮಶಕ್ತಿ ಸೌಧದಲ್ಲಿ ನಡೆಯಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಆತ್ಮಶಕ್ತಿ ಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಮಾಜಿ ಸಚಿವರಾದ ರಮಾನಾಥ ರೈ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಅವರು ಸೌರ ವಿದ್ಯುತ್ ಘಟಕವನ್ನು ಲೋಕಾರ್ಪಣೆಗೊಳಿಸಿದರು. ಇದೇ ವೇಳೆ

ಮಂಗಳೂರಿನಲ್ಲಿ ಅಂತರರಾಷ್ಟ್ರೀಯ ಕಸ್ಟಮ್ಸ್ ದಿನಾಚರಣೆ

ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್‌ನಲ್ಲಿ ಅಂತರರಾಷ್ಟ್ರೀಯ ಕಸ್ಟಮ್ಸ್ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಚಿನ್ನ ಹಾಗೂ ವನ್ಯಜೀವಿಗಳ ಕಳ್ಳಸಾಗಾಣೆ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅಧಿಕಾರಿಗಳಿಗೆ ಪ್ರಶಂಸಾ ಪತ್ರ ವಿತರಿಸಲಾಯಿತು. ಅಂತರರಾಷ್ಟ್ರೀಯ ಕಸ್ಟಮ್ಸ್ ದಿನಾಚರಣೆಯನ್ನು ಕೋಸ್ಟ್‌ಗಾರ್ಡ್ ಕರ್ನಾಟಕದ ಕಮಾಂಡೆಂಟ್ ಪ್ರವೀಣ್ ಕುಮಾರ್ ಮಿಶ್ರ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು,

ನಿತೀಶ್ ಕುಮಾರ್ ಇಂಡಿಯಾ ಮೈತ್ರಿಕೂಟ ಬಿಡುತ್ತಿರುವ ಬಗ್ಗೆ ಮೊದಲೇ ಸುಳಿವು ಸಿಕ್ಕಿತ್ತು: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಬಿಹಾರ ಮುಖ್ಯಮಂತ್ರಿ ಬಿಜೆಪಿಯೊಂದಿಗೆ ಕೈಜೋಡಿಸುವ ವಿಚಾರದ ಬಗ್ಗೆ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಹಾಗೂ ಅವರ ಮಗ ತೇಜಸ್ವಿ ಯಾದವ್ ಅವರು ಐದು ದಿನಗಳ ಹಿಂದೆಯೇ ನನಗೆ ಮಾಹಿತಿ ನೀಡಿದ್ದರು. ಅದು ಈಗ ನಿಜವಾಗಿದೆ. ಅವರು ಹೋಗುವುದಾದರೆ ಹೋಗಲಿ ಎಂದು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಿತೀಶ್ ಕುಮಾರ್ ಅವರು ಇಂಡಿಯಾ ಮೈತ್ರಿಕೂಟ ಬಿಡುತ್ತಿರುವ ಬಗ್ಗೆ ಮುಂಚೆಯೇ ಸುಳಿವು

ಪಾಟ್ನಾ: ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ

ಬಿಹಾರ ರಾಜಕೀಯ ಭಾರಿ ಕುತೂಹಲ ಕೆರಳಿಸಿದ್ದು, ನಿತೀಶ್‌ ಕುಮಾರ್‌ ಬಿಹಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಹಾರ ರಾಜ್ಯಪಾಲರನ್ನು ಭೇಟಿ ಮಾಡಿದ ನಿತೀಶ್‌ ಕುಮಾರ್‌ ಅಧಿಕೃತವಾಗಿ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಆರ್‌ಜೆಡಿ, ಕಾಂಗ್ರೆಸ್‌, ಎಡರಂಗ ಹಾಗೂ ಜೆಡಿಯು ಮೈತ್ರಿ ಸರ್ಕಾರ ಪತನಗೊಂಡಿದೆ. ಇನ್ನೊಂದೆಡೆ, ಬಿಜೆಪಿ ಜತೆಗೆ ಸೇರಿ ಇಂದು ಸಂಜೆ ಮತ್ತೆ ಜೆಡಿಯು – ಬಿಜೆಪಿ ಸರ್ಕಾರ ರಚನೆಯಾಗೋದು ಸಹ ಬಹುತೇಕ ಖಚಿತವಾಗಿದೆ. ಭಾನುವಾರ

ಎಸ್.ಡಿ.ಎಂ. ಗಣರಾಜ್ಯೋತ್ಸವ

ಭಾರತದ ವೈವಿಧ್ಯಮಯ ಗತವೈಭವದ ಮೆಲುಕು, ವರ್ತಮಾನದ ಪ್ರಗತಿಯ ಹೆಜ್ಜೆಗಳ ಬಿಂಬಗಳು, ಸಂವಿಧಾನದ ಶ್ರೇಷ್ಠತೆಯ ಸೊಗಡನ್ನು ಕಟ್ಟಿಕೊಡುವ ಕಲಾತ್ಮಕ ಪ್ರದರ್ಶನದ ಮೂಲಕ ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು 75ನೇ ವರ್ಷದ ಗಣರಾಜ್ಯೋತ್ಸವದ ಸಂಭ್ರಮವನ್ನು ಅರ್ಥಪೂರ್ಣಗೊಳಿಸಿದರು. ಉಜಿರೆಯ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ಎಸ್ ಡಿ ಎಂ ಸಂಸ್ಥೆಯ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು, ಅಧ್ಯಾಪಕೇತರ ಸಿಬ್ಬಂದಿಯ

ಉಜಿರೆ ಕಾಲೇಜು ಎನ್. ಎಸ್. ಎಸ್. ಕ್ಯಾಂಪ್-ಗೆ ಚಾಲನೆ 

ಗುರಿಪಳ್ಳ,  ಜ. 27: ಉಜಿರೆಯ ಶ್ರೀ. ಧ.ಮಂ. ಕಾಲೇಜು (ಸ್ವಾಯತ್ತ) ರಾಷ್ಟೀಯ ಸೇವಾ ಯೋಜನಾ ಘಟಕದ ವತಿಯಿಂದ ಗುರಿಪಳ್ಳದ ದ. ಕ. ಜಿ. ಪಂ. ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಾಕ್ಕಾಗಿ ಯುವಜನತೆ” ಎಂಬ ಧ್ಯೆಯ ವಾಕ್ಯದಡಿಯಲ್ಲಿ ಸುಧೀರ್ಘ ಏಳುದಿನಗಳ ಕಾಲ ಜರುಗುತ್ತಿರುವ ವಾರ್ಷಿಕ ವಿಶೇಷ ಶಿಬಿರವು ಜ.27 ರಂದು ಉದ್ಘಾಟನೆ ಗೊಂಡಿತು.  ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ   ಉಜಿರೆಯ

ಮಂಗಳೂರು : ಪದವಿನಂಗಡಿ ಕೊರಗಜ್ಜ ದೈವಸ್ಥಾನದ ಪ್ರಧಾನ ಅರ್ಚಕ ನಿಧನ

ಮೂಲ್ಕಿಯ ಹಳೆಯಂಗಡಿಯ ಬಳಿ ರಕ್ತೇಶ್ವರ ಕೋಲ ಕಟ್ಟುವ ಸಂದರ್ಭದಲ್ಲಿ ಎದೆನೋವು ಕಾಣಿಸಿಕೊಂಡು ದೈವನರ್ತಕ ಸಾವನ್ನಪ್ಪಿದ ಘಟನೆ ನಡೆದಿದೆ. ದೈವನರ್ತಕ ಪದವಿನಂಗಡಿಯ ನಿವಾಸಿಯಾಗಿದ್ದು, ಅಶೋಕ್ ಬಂಗೇರಾ ಎಂದು ತಿಳಿದುಬಂದಿದೆ. ಪದವಿನಂಗಡಿಯ ಕೊರಗಜ್ಜ ದೈವಸ್ಥಾನದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಾತ್ರವಲ್ಲದೆ ದೈವಾರಾಧನೆಯಲ್ಲಿ ಅದ್ಭುತ ಸೇವೆಯನ್ನು ಮಾಡುತ್ತಾ, ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಇದ್ದು ಅನೇಕ ಯುವ ಸಮೂಹಕ್ಕೆ ಮಾದರಿಯಾಗಿದ್ದರು.

ಮಂಗಳೂರು: ಆರ್‌ ಸಿಬಿ ತಂಡಕ್ಕೆ ಕರಾವಳಿಯ  ಹ್ಯಾಂಗ್ಯೋ ಐಸ್‌ ಕ್ರೀಂ ಸ್ವಾದ..!

ಮಂಗಳೂರು: ಇನ್ನೇನು ಐಪಿಎಲ್ 2024ನೇ ಆವೃತ್ತಿ ಪ್ರಾರಂಭಗೊಳ್ಳುತ್ತಿದೆ. ಈ ನಡುವೆ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಅಧಿಕೃತ ಐಸ್ಕ್ರೀಂ ಪಾಲುದಾರನಾಗಿ ಕರಾವಳಿಯ ಹಾಂಗ್ಯೊ ಐಸ್ಕ್ರೀಂ ಸೇರ್ಪಡೆಗೊಂಡಿದೆ. ಕ್ರಿಕೆಟ್ ಪ್ರೇಮಿಗಳ ಐಪಿಎಲ್ ಕ್ರಿಕೆಟ್ ಹಬ್ಬ ಇನ್ನೇನು ಆರಂಭವಾಗಲಿದೆ. ಈ ಭಾರಿ ಆರ್‌ಸಿಬಿ ತಂಡಕ್ಕೆ ಹಾಂಗ್ಯೊ ಐಸ್ಕ್ರೀಂ ಸಾಥ್ ನೀಡಲಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಎರಡೂ ಸಂಸ್ಥೆಗಳ ಮುಖ್ಯಸ್ಥರು ಒಡಂಬಡಿಕೆಗೆ ಸಹಿ ಹಾಕಿದ್ದು, ಈ ಮೂಲಕ ಕರಾವಳಿಯ

ಕೋಲಿಗೆ ಕಟ್ಟಿದ ಗಜ್ಜರಿ ನಿಗಮ ಮಂಡಳಿ

ಕರ್ನಾಟಕದಲ್ಲಿ 34 ಶಾಸಕರನ್ನು ನಿಗಮ ಮಂಡಳಿಗಳಿಗೆ ನೇಮಿಸಿ ಆದೇಶ ಹೊರಡಿಸಲಾಗಿದೆ. ಅವರಿಗೆಲ್ಲ ಮಂತ್ರಿ ಸ್ಥಾನಮಾನ ನೀಡಲಾಗಿದೆ. ಮಂತ್ರಿ ಮಂಡಲದಲ್ಲಿ 34 ಮಂದಿ ಇದ್ದಾರೆ. ಕಾರ್ಯದರ್ಶಿಗಳನ್ನೂ ಸೇರಿ ರಾಜ್ಯದಲ್ಲಿ ಮಂತ್ರಿ ಸ್ಥಾನಮಾನ ಪಡೆದವರ ಸಂಖ್ಯೆ 74ಕ್ಕೆ ಏರಿತು. ಎಲ್ಲ 4ರ ಮಹಿಮೆ. 4ನೇ ತಿಂಗಳಿನಲ್ಲಿ ಲೋಕ ಸಭೆ ಚುನಾವಣೆಯ ಬಿರುಸು. ಅದಕ್ಕೆ ಮೊದಲು ಅಸಮಾಧಾನ ಮರೆಸಿ ತಯಾರಾಗುವುದು ಗುರಿ. ಅದೇ ರಾಜಕೀಯದ ಕಿರಿಕಿರಿ. ರಾಜನಾದವನ ಕುತ್ತಿಗೆಯ ಮೇಲೆ ಸದಾ