Home Posts tagged #bantwala (Page 4)

ಉಡುಪಿ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಭೀಷ್ಮ ಪಿತಾಮಹ ಉಡುಪಿ ಪುರಸಭೆ ಮಾಜಿ ಅಧ್ಯಕ್ಷ ಮಲ್ಪೆ ಎಂ.ಸೋಮಶೇಖರ ಭಟ್ ನಿಧನ

ಎಂ.ಸೋಮಶೇಖರ ಭಟ್ (89) ಇಂದು ಇಹ ಲೋಕ ತ್ಯಜಿಸಿದ್ದಾರೆ. ದಿವಂಗತ ಎಂ.ಸೋಮಶೇಖರ ಭಟ್ ಸಂಘ ಪರಿವಾರದ ಹಿರಿಯ ನಾಯಕರಾದ ಇವರು ಉಡುಪಿ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಕಟ್ಟುವಲ್ಲಿ ಅವಿರತವಾಗಿ ಶ್ರಮವಹಿಸಿದವರು. ಇವರು ವರುಣ್ ಪೈಪಿಂಗ್ ಸಿಸ್ಟಮ್ ನ ಸ್ಥಾಪಕರಾಗಿದ್ದು, ಇವರು ಜನಮಾನಸದಲ್ಲಿ ಸೋಮಣ್ಣ ಎಂದೇ ಪ್ರಖ್ಯಾತರಾದ ಇವರು ಮಾಜಿ ಸಚಿವ ದಿವಂಗತ ಡಾಕ್ಟರ್

ಕೇಂದ್ರ ಬಜೆಟ್ ನಿರಾಶಾದಾಯಕ : ಬಿ.ರಮನಾಥ ರೈ

ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್-2024 ನಿರಾಶಾದಾಯಕವಾಗಿದೆ. ವಿತ್ತ ಸಚಿವರು ಕೇವಲ ಭರವಸೆ ಕೊಡುವ ಚುನಾವಣಾ ಭಾಷಣ ಮಾಡಿದರೋ ಅಥವಾ ಆಯವ್ಯಯ ಪತ್ರ ಮಂಡಿಸಿದರೋ ಎಂಬ ಸಂಶಯ ಬರುತ್ತಿದೆ. ಪ್ರಗತಿ, ಬೆಳವಣಿಗೆ, ಧ್ಯೇಯ, ಆಧ್ಯತೆ, ಗಮನ, ಸಹಾಯ, ಬೆಂಬಲ, ಸಹಕಾರ, ಕ್ರಮ, ಕಾರ್ಯಕ್ರಮ, ಮಂತ್ರ ಎಂಬ ಪದಗಳನ್ನು ಹೇಳಿದ್ದರೆ ಹೊರತು ನಿರ್ದಿಷ್ಟವಾಗಿ ಅನುದಾನ ಹಂಚಿಕೆ ಮಾಡಿಲ್ಲ. ಈ ಬಜೆಟ್ ಪ್ರಾದೇಶಿಕತೆಯನ್ನು ಮರೆತಿದೆ. ವಲಯಗಳನ್ನು ಕಡೆಗಣಿಸಿದೆ. ವರ್ಗಗಳನ್ನು ನಿರ್ಲಕ್ಷ್ಯ

ಕಲ್ಲಡ್ಕ : ವಿದ್ಯಾಗಣಪತಿ ದೇವರ ಪ್ರತಿಷ್ಠೆಯ ಅಂಗವಾಗಿ ಶಿಲಾನ್ಯಾಸ

ಕಲ್ಲಡ್ಕ ಶ್ರೀ ರಾಮ ಮಂದಿರದಲ್ಲಿ ವಿದ್ಯಾಗಣಪತಿ ದೇವರ ಪ್ರತಿಷ್ಠೆಯ ಅಂಗವಾಗಿ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ಅವಧೂತ ವಿನಯ ಗುರೂಜಿ, ಕಲ್ಲಡ್ಕ ಪ್ರಭಾಕರ್ ಭಟ್ ಮತ್ತಿತರರು ಉಪಸ್ಥಿತರಿದ್ದರು.

ಬಂಟ್ವಾಳ : ದರೋಡೆ ಪ್ರಕರಣವನ್ನು ಭೇಧಿಸಿದ ದ.ಕ.ಜಿಲ್ಲಾ ಪೊಲೀಸರು

ದ.ಕ.ಜಿಲ್ಲೆಯ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಮೇನಾಡು ಎಂಬಲ್ಲಿ ದಿನಾಂಕ; 11-01-2024 ರಂದು ಮುಂಜಾನೆ ನಡೆದ ಚಿನ್ನಾಭರಣಗಳನ್ನು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಅ.ಕ್ರ:03/2024 ಕಲಂ: 395, 397, 411 ಭಾ.ದಂ.ಸಂ. ರಂತೆ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗಿ, ಆರೋಪಿಗಳ ಪತ್ತೆಗಾಗಿ ರಚಿಸಲಾಗಿದ್ದ ವಿಶೇಷ ತನಿಖಾ ತಂಡವು, ಕಾರ್ಕಳ ತಾಲೂಕಿನ ಮಾಳ ಗ್ರಾಮದ ಗಣೇಶ ನಾಯ್ಕ (26),

ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮೂಲ್ಕಿ:ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮೂಲ್ಕಿ (ರಿ.)ಇದರ ರಜತ ಮಹೋತ್ಸವವು ಮಾರ್ಚ್ 10ರಂದು ನಡೆಯಲಿದ್ದು, ಇದರ ಅಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಸಭಾಂಗಣದಲ್ಲಿ ನಡೆಯಿತು. ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ.ರಾಜಶೇಖರ ಕೋಟ್ಯಾನ್ ರವರು ಅಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಮಯದಲ್ಲಿ ಉಡುಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ಗೀತಾಂಜಲಿ ಸುವರ್ಣ ಇವರನ್ನು ಬಿಲ್ಲವರ ಮಹಿಳಾ

ವಿಟ್ಲ: ಶಾಲಾ ಬಸ್ ಮತ್ತು ಬೈಕ್

ವಿಟ್ಲ: ಶಾಲಾ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದಿದೆ. ವಿಟ್ಲ ಕಡೆಯಿಂದ ಚಂದಳಿಕೆ ಕಡೆಗೆ ಶಾಲಾ ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದ ಬಸ್ ಚಂದಳಿಕೆ ಮಾಡತ್ತಡ್ಕ ತಿರುವಿಗೆ ತಿರುಗುತ್ತಿದ್ದಂತೆ ಹಿಂದಿನಿಂದ ಬಂದ ಬೈಕ್ ಬಸ್ ಗೆ ಡಿಕ್ಕಿ ಹೊಡೆದಿದೆ. ಘಟನೆ ಯಿಂದ ಬೈಕ್ ನಲ್ಲಿದ್ದ ಐಟಿಐ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು

ಬಂಟ್ವಾಳ: ನೆಚ್ಚಿನ ಶಿಕ್ಷಕಿಗೆ ನಿವೃತ್ತಿ ಸಂದರ್ಭ ಬಂಗಾರದ ಮಾಲೆ ನೀಡಿದ ಹಳೆ ವಿದ್ಯಾರ್ಥಿಗಳು

ಬಂಟ್ವಾಳ: ಕಳೆದ 3 ದಶಕಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶಿಕ್ಷಕಿಗೆ ಅವರ ನಿವೃತ್ತಿ ವೇಳೆ ಹಳೆ ವಿದ್ಯಾರ್ಥಿಗಳೆಲ್ಲಾ ಸೇರಿ ಸುಮಾರು 2 ಲಕ್ಷ ಹತ್ತು ಸಾವಿರ ರೂ. ವೌಲ್ಯದ 33 ಗ್ರಾಂನ ಬಂಗಾರದ ಮಾಲೆ ಉಡುಗೊರೆಯಾಗಿ ನೀಡಿದ ಅಪರೂಪದ ಘಟನೆ ಪಾಣೆ ಮಂಗಳೂರಿನ ಅಕ್ಕರಂಗಡಿಯ ದಾರುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಜಯಲಕ್ಷ್ಮೀ ಆರ್. ಭಟ್ ದಾರುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 28 ವರ್ಷಗಳಿಂದ

ಸಂಗಬೆಟ್ಟು: ಸಾರ್ವಜನಿಕ ರಸ್ತೆ ಸಂಚಾರಕ್ಕೆ ತಡೆ

ಬಂಟ್ವಾಳ: ಸಾರ್ವಜನಿಕ ರಸ್ತೆಗೆ ತಡೆವೊಡ್ಡಿದ ಪ್ರಕರಣವೊಂದು ಸಂಗಬೆಟ್ಟು ಗ್ರಾಮದಲ್ಲಿ ನಡೆದಿದ್ದು ಆರೋಪಿತರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪರಿಸರದ ನಿವಾಸಿಗಳು ಆಗ್ರಹಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾಡಿ ಪಲ್ಕೆ ಮುಗೇರು ಎಂಬಲ್ಲಿ ನೂರಾರು ವರ್ಷಗಳ ಕಾಲದಿಂದ ಸಾರ್ವಜನಿಕರು, ಶಾಲಾ ಮಕ್ಕಳು, ನಿತ್ಯ ವ್ಯವಹಾರ ವಹಿವಾಟುಗಳಿಗೆ ಹೋಗುವವರು, ಸ್ಥಳೀಯ ವಿಷ್ಣುಮೂರ್ತಿ ದೇವಸ್ಥಾನಕ್ಕೆ

*ಬಂಟ್ವಾಳ: ತುಂಬೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ: ತುಂಬೆ ನೇತ್ರಾವತಿ ನದಿ ತೀರದಲ್ಲಿ ಸುಮಾರು ೫ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣ ಗೊಂಡಿರುವ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ.೧೩ರಿಂದ ೨೩ರವರೆಗೆ ದೇವರ ಪುನರ್ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ, ಧ್ವಜಸ್ತಂಭ ಪ್ರತಿಷ್ಠೆ ಸಹಿತ ವಾರ್ಷಿಕ ಜಾತ್ರಾ ಮಹೋತ್ಸವವು ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ ಮಾರ್ಗದರ್ಶನದಲ್ಲಿ ನಡೆಯಲಿದೆ ಎಂದು ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಹೇಳಿದರು.

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿ- ಆರು ಮಂದಿಗೆ ಗಾಯ

ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡ ಟಿ.ಟಿ ವಾಹನ ರಸ್ತೆಗೆ ಪಲ್ಟಿ ಹೊಡೆದ ಪರಿಣಾಮ ಆರು ಮಂದಿ ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದಿದೆ. ಶಬರಿಮಲೆಯಿಂದ ವಿಟ್ಲ ರಸ್ತೆ ಮೂಲಕ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಚಂದಳಿಕೆ ಅಪಾಯಕಾರಿ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ. ಟಿ.ಟಿ ವಾಹನದಲ್ಲಿದ್ದ ಆರು ಮಂದಿ ಮಾಲಾಧಾರಿಗಳು ಗಾಯಗೊಂಡಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಉಜಿರೆ ನಿವಾಸಿಗಳೆಂದು ತಿಳಿದುಬಂದಿದೆ. ಶಬರಿಮಲೆ