Home Posts tagged #hejamadi toll

ಹೆಜಮಾಡಿ ಟೋಲ್ ಬಳಿ ಕುಡುಕ ಲಾರಿ ಚಾಲಕನ ಅವಾಂತರ

ವಿಪರೀತ ಮದ್ಯಪಾನ ಮಾಡಿ ಕಂಟೇನರ್ ಚಲಾಯಿಸಿಕೊಂಡು ಬಂದು ಹೆಜಮಾಡಿ ಟೋಲ್ ಬಳಿಯ ಬೃಹತ್ ವಿದ್ಯುತ್ ಕಂಬಕ್ಕೆ ಡಿಕ್ಕಿಯೊಡೆದ ಘಟನೆ ನಡೆದಿದೆ.ಯು.ಪಿ. ಮೂಲದ ವ್ಯಕ್ತಿ ಮಹಾರಾಷ್ಟ್ರ ನೋಂದಾಯಿತ ಕಂಟೇನರ್ ಚಲಾಯಿಸಿಕೊಂಡು ಬಂದಿದ್ದು, ಅದೃಷ್ಟವಶಾತ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಬಳಿಕ ಸ್ಥಗಿತಗೊಂಡ ಕಂಟೇನರ್ ನಲ್ಲಿದ್ದ ಚಾಲಕನನ್ನು ಸ್ಥಳೀಯರು ವಿಚಾರಿಸಲು ಮುಂದಾದಾಗ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ನಿಲುವು ಅವೈಜ್ಞಾನಿಕ, ಖಂಡನೀಯ : ಹೋರಾಟ ಸಮಿತಿ

ಇದೀಗ ಮುಚ್ಚಲಾಗಿರುವ ಸುರತ್ಕಲ್ ಅಕ್ರಮ ಟೋಲ್ ಗೇಟ್ ಸುಂಕವನ್ನು ಹೆಜಮಾಡಿ ನವಯುಗ್ ಟೋಲ್ ಪ್ಲಾಜಾದಲ್ಲಿ ಸಂಗ್ರಹಿಸುವ ಹೆದ್ದಾರಿ ಪ್ರಾಧಿಕಾರದ ಆದೇಶದ ಕುರಿತು ಉಡುಪಿ ಜಿಲ್ಲಾಡಳಿತ ನಡೆಸಿದ ಸಭೆಯ ತೀರ್ಮಾನದ ಕುರಿತಂತೆ ದಕ್ಷಿಣ ಕನ್ನಡ ಉಸ್ತುವಾರಿ ಸಚಿವರು ನೀಡಿರುವ ಮಾಹಿತಿ ಕುರಿತು ಹೋರಾಟ ಸಮಿತಿ ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸುತ್ತದೆ. ಹೆಜಮಾಡಿ ಟೋಲ್ ಗೇಟ್ ನಲ್ಲಿ ಉಡುಪಿ ನೊಂದಾವಣೆಯ ಕೆ ಎ 20 ವಾಹನಗಳಿಗೆ ಮಾತ್ರ ಸುರತ್ಕಲ್ ಟೋಲ್ ಸುಂಕದಿಂದ ಪೂರ್ಣ

ಸುರತ್ಕಲ್ ಟೋಲ್ ಪ್ಲಾಜಾ ಯುಗಾಂತ್ಯ : ವಾಹನ ಸವಾರರಿಗೆ ಸಿಹಿ ನೀಡಿ ಸಂಭ್ರಮ

ಕಳೆದ ದಿನಗಳ ಹಿಂದೆ ಸುರತ್ಕಲ್ ಟೋಲ್ ಗೇಟ್ ರದ್ದಾಗ ಬೇಕು ಎಂಬುದಾಗಿ ಸಾಕಷ್ಟು ಸಂಘ-ಸಂಸ್ಥೆ ಸಂಘಟನೆಗಳ ಸಹಕಾರದೊಂದಿಗೆ ಹೋರಾಟದ ಮುಖಂಡತ್ವ ವಹಿಸಿ ಪರಿಣಾಮಕಾರಿ ಹೋರಾಟ ನಡೆಸಿದ ಆಪತ್ತ್ ಭಾಂದವ ಆಸೀಫ್ ಅವರನ್ನು ಮುಚ್ಚಿದ ಟೋಲ್ ಗೇಟ್ ಮುಂಭಾಗ ಸನ್ಮಾನಿಸಿ ಗೌರವಿಸಿದ್ದಲ್ಲದೆ, ವಾಹನ ಸವಾರರಿಗೆ ಸಿಹಿ ನೀಡಿ ಸಂತೋಷ ಸಂಭ್ರಮ ಹಂಚಿಕೊಂಡರು. ಈ ಸಂದರ್ಭ ಮಾತನಾಡಿದ ಆಸೀಫ್ ಆಪತ್ತ್ ಬಾಂಧವ, ನಾನು ಹೋರಾಟ ನಡೆಸಿದ ಆ ದಿನಗಳಲ್ಲಿ ಟೋಲ್ ವಿರುದ್ಧ ಹೋರಾಟಕ್ಕೆ ನನಗೆ ಬೆಂಬಲ

HEJAMADI TOLL ಹೆಜಮಾಡಿ ಟೋಲ್‍ನೊಂದಿಗೆ ಸುರತ್ಕಲ್ ಟೋಲ್ ವಿಲೀನಕ್ಕೆ ವಿರೋಧ

ನಾನು ಆಢಳಿತ ಪಕ್ಷದ ಪ್ರತಿನಿಧಿಯಾಗಿದ್ದರೂ..ಜನರಿಗೆ ಸಮಸ್ಯೆಯೊಡ್ಡುವ ಸುರತ್ಕಲ್ ಟೋಲನ್ನು ಹೆಜಮಾಡಿ ಟೋಲ್ ನೊಂದಿಗೆ ವಿಲಿನಗೊಳ್ಳಿಸುವ ಪ್ರಕ್ರಿಯೆಗೆ ನನ್ನ ವಿರೋಧವಿದೆ ಎಂಬುದಾಗಿ ಕಾಪು ಶಾಸಕ ಲಾಲಾಜಿ ಮೆಂಡನ್ ಹೇಳಿದ್ದಾರೆ.ಕಾಪುವಿನಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಸಂದರ್ಭ ಈ ಟೋಲ್ ಗೇಟ್ ಗಳು ಅಸ್ತಿತ್ವಕ್ಕೆ ಬಂದಿದ್ದವುಗಳು, ಒಂದು ಟೋಲ್ ಗೇಟ್ ನಿಂದ ಮತ್ತೊಂದು ಟೋಲ್ ಗೇಟ್ ಗೆ 60 ಕೀ.ಮೀ. ಅಂತರ ಇರ

ಮಸಣ ಸೇರಿದ್ದು ಅಭಿನಂದನೆಯ ಫ್ಲೆಕ್ಸಲ್ಲ ಬಿಜೆಪಿಯ ರಾಜಕಾರಣ. ಮುನೀರ್ ಕಾಟಿಪಳ್ಳ

ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರುದ್ಧದ ಹೋರಾಟ ಯಶಸ್ವಿಯ ಹಂತಕ್ಕೆ ತಲುಪಿದೆ. ದ.ಕ ಜಿಲ್ಲಾಧಿಕಾರಿ ಡಿಸೆಂಬರ್ ಒಂದರಿಂದ ಟೋಲ್ ಸಂಗ್ರಹ ಸ್ಥಗಿತಕ್ಕೆ ಲಿಖಿತ ಆದೇಶ ಹೊರಡಿಸಿದ್ದಾರೆ. ಬಿಜೆಪಿ ಪಕ್ಷ ಮಾತ್ರ ತನ್ನದೇ ಸಾಧನೆಯಂತೆ ಬಿಂಬಿಸಲು ಹೊರಟು ಮುಜುಗರಗೊಳಗಾಗಿ ಇನ್ನು ಈಗಾಗಲೇ ತಯಾರಿಸಿದ ಅಭಿನಂದನೆಯ ಬ್ಯಾನರ್, ಫ್ಲೆಕ್ಸ್ ಗಳನ್ನು ಅಳವಡಿಸಲು ಸಾಧ್ಯವಾಗದೆ ಅವುಗಳೆಲ್ಲಾ ಸುರತ್ಕಲ್ ಸ್ಮಶಾನದ ಮೂಲೆ ಸೇರಿದೆ. ನಿಜವಾಗಿ ಸ್ಮಶಾನ ಸೇರಿದ್ದು ಅಭಿನಂದನೆಯ ಪ್ಲೆಕ್ಸ್

ಡಿ. 1ರಿಂದ ಸುರತ್ಕಲ್‌ನಲ್ಲಿ ಟೋಲ್ ಸಂಗ್ರಹ ಇಲ್ಲ : ದ.ಕ. ಜಿಲ್ಲಾಧಿಕಾರಿ ಆದೇಶ

ಮಂಗಳೂರು : ವಿವಾದದ ಕೇಂದ್ರ ಬಿಂದು ಸುರತ್ಕಲ್ ಟೋಲ್ ರದ್ದುಗೊಳಿಸಿ ಈಗಾಗಲೇ  ಹೆದ್ದಾರಿ ಸಚಿವಾಲಯ ಆದೇಶಿಸಿದ ಬೆನ್ನಲೇ ಡಿಸೆಂಬರ್  1 ರಿಂದ ಸುರತ್ಕಲ್‌ನಲ್ಲಿ ವಾಹನಗಳಿಂದ ಟೋಲ್ ಸಂಗ್ರಹಿಸಲಾಗುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಎಂ.ಆರ್. ರವಿ ಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದಾರೆ. ಸುರತ್ಕಲ್ ಟೋಲನ್ನು ಹೆಜಮಾಡಿಯಲ್ಲಿ ಹೆಚ್ಚುವರಿ ಶುಲ್ಕದೊಂದಿಗೆ ವಿಲೀನಗೊಳಿಸಿರುವುದನ್ನು ಮುಂದಿಟ್ಟು ಜಿಲ್ಲಾಧಿಕಾರಿಯವರು ಈ ಆದೇಶ ಮಾಡಿದ್ದಾರೆ. ಈ ಆದೇಶದನ್ವಯ ಡಿಸೆಂಬರ್

ಅಕ್ರಮ ಟೋಲ್ : ಅಭಿನಂದನೆಯ ಫ್ಲೆಕ್ಸ್ ಸ್ಮಶಾನ ಪಾಲು ..

ಸುರತ್ಕಲ್‌, ನ.28: ಸುರತ್ಕಲ್‌ ಟೋಲ್‌ಗೇಟ್‌ ನ.30ರಿಂದ ಹೆಜಮಾಡಿ ಟೋಲ್‌ಗೇಟ್‌ನೊಂದಿಗೆ ವಿಲೀನವಾಗು ತ್ತಿದ್ದು, ಈ ಹಿನ್ನೆಲೆಯಲ್ಲಿ ಸಂಸದರು ಹಾಗೂ ಶಾಸಕರಿಗೆ ಅಭಿನಂದನೆ ತಿಳಿಸುವ ಬೃಹತ್‌ ಬ್ಯಾನರ್‌ಗಳು ಸುರತ್ಕಲ್ ನ ಸ್ಮಶಾನ ಸೇರಿವೆ. ಸುರತ್ಕಲ್‌ ಹೃದಯಭಾಗದಲ್ಲಿರುವ ಸ್ಮಶಾನದ ಒಳಭಾಗದಲ್ಲಿ ಹಲವು ಬ್ಯಾನರ್‌ಗಳು ಪತ್ತೆಯಾಗಿದ್ದು, “ಸುರತ್ಕಲ್‌ ಟೋಲ್‌ಗೇಟ್‌ ರದ್ದು ಮಾಡುವ ಭರವಸೆಯನ್ನು ಈಡೇರಿಸಿದ ಮಾನ್ಯ ಮಂಗಳೂರು ಲೋಕಸಭಾ ಸದಸ್ಯರಾದ ಶ್ರೀ ನಳಿನ್‌

ಹೆಜಮಾಡಿಯಲ್ಲಿ ಟೋಲ್ ಹೆಚ್ಚಿಸುವ ದುಸ್ಸಾಹಸ ಮಾಡಬೇಡಿ : ವಿನಯ ಕುಮಾರ್ ಸೊರಕೆ

ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುಚ್ಚುವುದು ಸರಿಯಾದ ಕ್ರಮ. ಇದು ಜನತೆ ನಡೆಸಿದ ಅವಿರತ ಹೋರಾಟದ ಫಲ. ಆದರೆ ವಿಲೀನದ ಹೆಸರಿನಲ್ಲಿ ಹೆಜಮಾಡಿಯಲ್ಲಿ ಸುಂಕ ಹೆಚ್ಚಿಸುವ ದುಸ್ಸಾಹಸ ಮಾಡಿದರೆ ಹೋರಾಟ ಹೊಸ ತಿರುವು ಪಡೆದುಕೊಳ್ಳಲಿದೆ. ಎರಡೂ ಜಿಲ್ಲೆಯ ಜನರನ್ನು ಸಂಘಟಿಸಿ ಬಿಜೆಪಿಯ ದುರಾಡಳಿತವನ್ನು ಕೊನೆಗೊಳಿಸಲಾಗುವುದು ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು. ಅವರು ಟೋಲ್ ತೆರವಿಗೆ ಒತ್ತಾಯಿಸಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿಯ ಇಪ್ಪತ್ತ ಮೂರನೇ ದಿನದ