Home Posts tagged #kallabettu

ಮೂಡುಬಿದಿರೆ: ಶಾರದಾದಾಸ್ ಸಿದ್ಧಾಶ್ರಮದ ಸ್ಥಾಪಕ ಅಧ್ಯಕ್ಷ ಕೆ. ಸುಂದರ ಹೆಗ್ಡೆ ನಿಧನ

ಮೂಡುಬಿದಿರೆ:ಪಡುಕೊಣಾಜೆ ಗ್ರಾಮದ ಕೊಣಾಜೆ ಕಲ್ಲು ಶಾರದಾದಾಸ್ ಸಿದ್ಧಾಶ್ರಮದ ಸ್ಥಾಪಕ ಅಧ್ಯಕ್ಷ ಕಲ್ಲಬೆಟ್ಟು ಗ್ರಾಮದ ಸಾಗಿನಬೆಟ್ಟು ಕೆ. ಸುಂದರ ಹೆಗ್ಡೆ (87) ಕಾರ್ಕಳದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಕೃಷಿಕರಾಗಿದ್ದ ಅವರು ಹೌದಾಲಿನಲ್ಲಿ ಹಲವು ವರ್ಷ ದಿನಸಿ ವ್ಯಾಪಾರ ಮಾಡಿಕೊಂಡು ಬಂದಿದ್ದರು. ಐತಿಹಾಸಿಕ ಹಿನ್ನೆಲೆಯ ಕೊಣಾಜೆಕಲ್ಲು ಸಿದ್ಧಾಶ್ರಮದ ಸ್ಥಾಪಕ

ಕಲ್ಲಬೆಟ್ಟು ಗಣೇಶೋತ್ಸವದಲ್ಲಿ ಧನಸಂಗ್ರಹ ಮಾಡಿ ಅನಾರೋಗ್ಯ ಪೀಡಿತೆಗೆ ನೆರವು ನೀಡಿದ ವಿದ್ಯಾರ್ಥಿನಿಯರು

ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿ ನಡೆದ ಸಾರ್ವಜನಿಕ ಗಣೇಶೋತ್ಸವದಲ್ಲಿ ನಾಲ್ವರು ವಿದ್ಯಾರ್ಥಿನಿಯರು ಸೇರಿ ಆನಾರೋಗ್ಯ ಪೀಡಿತೆಯೋರ್ವರ ಚಿಕಿತ್ಸೆಗಾಗಿ ಧನ ಸಂಗ್ರಹ ಮಾಡಿ ಹಸ್ತಾಂತರ ಮಾಡಿ ಊರವರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ತಾಲೂಕಿನ ಕಲ್ಲಬೆಟ್ಟು ಗ್ರಾಮದ ನಿವಾಸಿಗಳಾದ ಮಹಾವೀರ ಕಾಲೇಜಿನ ವಿದ್ಯಾರ್ಥಿನಿಯರಾದ ತುಷಾರ, ಅನೂಷಾ, ತುಷಿತಾ ಹಾಗೂ ಪ್ರತಿಕ್ಷಾ ಎಂಬ ವಿದ್ಯಾರ್ಥಿಯರು ಅನಾರೋಗ್ಯ ಪೀಡಿತೆಯ ಚಿಕಿತ್ಸೆಯ ನೆರವಿಗೆ ಸ್ಪಂದಿಸಿದವರು. ಕಲ್ಲಬೆಟ್ಟುವಿನಲ್ಲಿ

ಕಲ್ಲಬೆಟ್ಟುವಿನಲ್ಲಿ ಶಾಲಾ ಔಷಧಿ ವನದ ಉದ್ಘಾಟನೆ

ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ಹಾಗೂ ಕರ್ನಾಟಕ ರಾಜ್ಯ ಔಷಧೀಯ ಸಸ್ಯಗಳ ಪ್ರಾಧಿಕಾರ ಸಹಯೋಗದಲ್ಲಿ ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ವಸತಿ ಪ್ರೌಢಶಾಲೆ ಆವರಣದಲ್ಲಿ ಗುರುವಾರ ‘ಶಾಲಾ ಔಷಧಿ ವನ’ವನ್ನು ಸಸ್ಯಗಳ ನಾಟಿ ಮೂಲಕ ಉದ್ಘಾಟಿಸಲಾಯಿತು. ಪುರಸಭಾ ಸದಸ್ಯ ಜೊಸ್ಸಿ ಮಿನೇಜಸ್ ಹಾಗೂ ಸುರೇಶ್ ಕೋಟ್ಯಾನ್ ಸಸಿ ನೆಡುವ ಮೂಲಕ ಉದ್ಘಾಟಿಸಿದರು. ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ದ್ರವ್ಯಗುಣ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ಸುಬ್ರಹ್ಮಣ್ಯ

ಮೂಡುಬಿದಿರೆ : ಗಾಯಗೊಂಡ ನಾಗರಹಾವಿಗೆ ಶಸ್ತ್ರ ಚಿಕಿತ್ಸೆಯಿಂದ ಮರುಜೀವ

ಮೂಡುಬಿದಿರೆ: ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟು ರಸ್ತೆಯ ಬಳಿ ನಾಗರ ಹಾವೊಂದು ದ್ವಿಚಕ್ರ ವಾಹನದ ಚಕ್ರಕ್ಕೆ ಸಿಲುಕಿ ಗಾಯಗೊಂಡು ಜೀವನ್ಮರಣ ಸ್ಥಿತಿಯಲ್ಲಿತ್ತು. ಇದನ್ನು ಕಂಡ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಿದ್ದರು. ತಕ್ಷಣ ಸ್ಪಂದಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಹಾವನ್ನು ಚಿಕಿತ್ಸೆಗಾಗಿ ಉಡುಪಿಯ ವನ್ಯಜೀವಿ ಪಶುವೈದ್ಯ ಡಾ. ಯಶಸ್ವಿಯವರ ಖಾಸಗೀ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ನೀಡಿರುತ್ತಾರೆ. ಶಸ್ತ್ರ

ಕಲ್ಲಬೆಟ್ಟುವಿನಲ್ಲಿ ಮದ್ಯದಂಗಡಿ ತೆರೆಯದಂತೆ ಜನಜಾಗೃತಿ ವೇದಿಕೆ ಮನವಿ

ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಕಲ್ಲಬೆಟ್ಟುವಿನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಮದ್ಯದಂಗಡಿ ವಿರುದ್ಧ ಸ್ಥಳೀಯ ದಲಿತ ಸಂಘರ್ಷ ಸಮಿತಿ ಮತ್ತು ಸಾರ್ವಜನಿಕರ ದೂರಿನ ಮೇರೆಗೆ ಬುಧವಾರ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಮತ್ತು ಯೋಜನೆಯ ಪದಾಧಿಕಾರಿಗಳ ಸಭೆಯನ್ನು ವಲಯ ಕಚೇರಿಯಲ್ಲಿ ನಡೆಸಿದರು. ಕಲ್ಲಬೆಟ್ಟುವಿನಲ್ಲಿ ಈಗಾಗಲೇ ಅನಧಿಕೃತ ಮದ್ಯ ಮಾರಾಟ ವ್ಯಾಪಕವಾಗಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಬಕಾರಿ ಇಲಾಖೆಗೆ ಸೂಚಿಸುವುದು ಮತ್ತು ಅನಧಿಕೃತ ಮದ್ಯ