Home Posts tagged #kolluru

ಉಡುಪಿ: ಜಿಲ್ಲೆಯಲ್ಲಿ ಮತ್ತೆ ಆಕ್ಟಿವ್ ಆದ ನಕ್ಸಲ್ ಚಟುವಟಿಕೆ..!!

ಉಡುಪಿಯ ಬೈಂದೂರು ತಾಲೂಕಿನ ಕೊಲ್ಲೂರು ವ್ಯಾಪ್ತಿಯ ಹಲವೆಡೆ ನಕ್ಸಲೀಯರು ಓಡಾಟ ನಡೆಸಿದ ಶಂಕೆ ವ್ಯಕ್ತವಾಗಿದೆ. ಬೈಂದೂರು ತಾಲೂಕಿನ ಮುದೂರು, ಜಡ್ಕಲ್, ಬೆಳ್ಕಲ್ ಪರಿಸರದಲ್ಲಿ ಓಡಾಟ ನಡೆಸಿದ್ದು, ಹಲವು ಮನೆಗಳಿಗೆ ಭೇಟಿ ನೀಡಿ ನಾಲ್ವರ ತಂಡ ತೆರಳುತ್ತಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಹಸಿರು ಬಣ್ಣದ ಡ್ರೆಸ್ ಕೋಡ್, ಇಬ್ಬರಲ್ಲಿ ಶಸ್ತ್ರಾಸ್ತ್ರ ಇರುವ ಬಗ್ಗೆ

ಕೊಲ್ಲೂರು : ನೀರುಪಾಲಾದ ಯುವಕನಿಗಾಗಿ ಮುಂದುವರೆದ ಶೋಧ

ಬೈಂದೂರು ತಾಲ್ಲೂಕಿನ ಕೊಲ್ಲೂರು ಬಳಿಯ ಅರಶಿನಗುಂಡಿ ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಯುವಕನಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ಜಲಪಾತದಲ್ಲಿ ಕೊಚ್ಚಿಹೋದ ಯುವಕ. ಬಂಡೆಯ ತುದಿಯಲ್ಲಿ ನಿಂತು ಹತ್ತಿರದಿಂದ ಜಲಪಾತ ವೀಕ್ಷಣೆ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ. ಯುವಕನ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ

ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ನೀರು ಪಾಲು

ಯುವಕನೊಬ್ಬ ಜಲಪಾತದ ನೀರಿಗೆ ಕಾಲುಜಾರಿ ಬಿದ್ದು ನೀರುಪಾಲಾದ ಘಟನೆ ,ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಜಲಪಾತದಲ್ಲಿ ಸಂಭವಿಸಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ. ಈ ಯುವಕ ಬೀಳುತ್ತಿರುವ ದೃಶ್ಯ ಮತ್ತೋರ್ವ ಯುವಕನ ಮೊಬೈಲ್ ನಲ್ಲಿ ಸೆರೆಯಾಗಿದೆ. ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದ ಯುವಕ, ಜಲಪಾತ ವೀಕ್ಷಣೆಗೆಂದು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬಂಡೆಕಲ್ಲೊಂದರ ಮೇಲೆ ಯುವಕ ನಿಂತಿದ್ದಾಗ ,ಅಕಸ್ಮಾತ್ತಾಗಿ ಕಾಲುಜಾರಿ ಬಿದ್ದಿದ್ದಾನೆ.

ಕೊಲ್ಲೂರು : ಮಾನಸಿಕ ಅಸ್ವಸ್ಥ ಮಹಿಳೆಗೆ ಪುನರ್ವಸತಿ ಕಲ್ಪಿಸಿದ ಪೊಲೀಸರು

ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಕೊಲ್ಲೂರಿನ ಸಲಗೇರಿ ಎಂಬಲ್ಲಿ ತಿರುಗಾಡುತ್ತಿದ್ದು, ಇದನ್ನು ಮನಗಂಡ ಸ್ಥಳೀಯರು ಠಾಣೆಗೆ ದೂರು ನೀಡಿದ್ದಾರೆ. ಬಳಿಕ ಆಕೆಯನ್ನು ಮಂಜೇಶ್ವರದ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಯಿತು. ಮಹಿಳೆ ತಿರುಗಾಡುತ್ತಿದ್ದ ವಿಚಾರವನ್ನು ಸ್ಥಳೀಯರು ಮತ್ತು ರಿಕ್ಷಾ ಚಾಲಕರು ಕೊಲ್ಲೂರು ಟಾಣೆಗೆ ದೂರು ನೀಡಿದ್ದಾರೆ. ಕೂಡಲೇ ಸ್ಪಂದಿಸಿದ ಪಿಎಸ್‍ಐ ಜಯಶ್ರೀ ಹನ್ನೂರ ಹಾಗೂ ಸುಧಾರಾಣಿ ಅವರ ಗಮನಕ್ಕೆ ತಂದರು. ನಂತರ ಮಹಿಳೆಗೆ ಭದ್ರತೆಯನ್ನು

ಕೊಲ್ಲೂರು : ವ್ಯಕ್ತಿಯ ಮೇಲೆ ಚಿರತೆ ದಾಳಿ, ಗಂಭೀರ ಗಾಯ

ಚಿರತೆಯೊಂದು ವ್ಯಕ್ತಿಯೋರ್ವರ ಮೇಲೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಕೊಲ್ಲೂರು ಸಮೀಪದ ನಾಗೋಡಿಯ ಕಂಚಿಕರೆ ಎಂಬಲ್ಲಿ ನಡೆದಿದೆ. ಚಿರತೆ ದಾಳಿಯಿಂದ ಗಣೇಶ್ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ನಿನ್ನೆ ತಡರಾತ್ರಿ ಗಣೇಶ್ ಅವರ ಮನೆಯ ಸಮೀಪವೇ ಚಿರತೆ ಕಂಡುಬಂದಿದ್ದು, ನಾಯಿಯ ಕೂಗಾಟ ಕೇಳಿ ಗಣೇಶ್ ಮನೆಯಿಂದ ಹೊರ ಬಂದಾಗ ಅವರ ಮೇಲೆ ಎರಗಿದೆ. ಗಂಭೀರ ಗಾಯಗೊಂಡಿದ್ದ ಗಣೇಶ್ ಅವರನ್ನು ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಯಿತು.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಬೇಸಿಗೆ ರಜೆಯ ಹಿನ್ನೆಲೆ ಹರಿದು ಬಂದ ಜನಸಾಗರ

ಕುಂದಾಪುರ: ರಜೆಯ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಜನ ಸಾಗರವೆ ಹರಿದು ಬಂದಿದೆ. ಆಡಳಿತ ಮಂಡಳಿ ಸದಸ್ಯರಾದ ಗೋಪಾಲಕೃಷ್ಣ ನಾಡ ಮಾತನಾಡಿ, ನಿರಂತರವಾಗಿ ಸರಕಾರಿ ರಜೆ ಇದಿದ್ದರಿಂದ ಕಳೆದ ಮೂರು ದಿನಗಳಲ್ಲಿ 25,000 ಕ್ಕೂ ಅಧಿಕ ಜನರು ಭೇಟಿ ನೀಡಿದ್ದು ಶ್ರೀ ಕ್ಷೇತ್ರದಲ್ಲಿ ಭಕ್ತ ಸಮೂಹವೆ ಕಂಡು ಬಂದಿದೆ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತುಕೊಂಡು ದೇವಿಯ ದರ್ಶನವನ್ನು ಪಡೆದರು. ಶಾಲಾ ಮಕ್ಕಳಿಗೆ

ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನ : ನೂತನ ಬ್ರಹ್ಮ ರಥ ಲೋಕಾರ್ಪಣೆ ಕಾರ್ಯಕ್ರಮ

ಕುಂದಾಪುರ: ಜಗತ್ಪ್ರಸಿದ್ದ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ನೂತನ ಬ್ರಹ್ಮ ರಥವನ್ನು ಲೋಕಾರ್ಪಣೆ ಮಾಡಲಾಯಿತು. ಕೋಟೇಶ್ವರದಿಂದ ಪುರ ಮೆರವಣಿಗೆಯಲ್ಲಿ ಕೊಲ್ಲೂರಿಗೆ ಬಂದಿದ್ದ ಬ್ರಹ್ಮ ರಥವನ್ನು ದೇವಸ್ಥಾನದ ಮುಂಭಾಗದಲ್ಲಿ ಇರಿಸಲಾಗಿದ್ದು, ಗುರುವಾರ ಬೆಳಿಗ್ಗೆ ಶುದ್ದಾದಿ ಕಾರ್ಯಗಳು ಮುಗಿದ ಬಳಿಕ ಬ್ರಹ್ಮ ರಥದ ಹಸ್ತಾಂತರ ಪ್ರಕ್ರಿಯೆಗೆ ಪೂರ್ವಭಾವಿಯಾಗಿ ಋತ್ವೀಜರ ನೇತೃತ್ವದಲ್ಲಿ ಹೋಮ ನಡೆಸಲಾಯಿತು. ಬಳಿಕ ಹಳೆಯ ರಥದ ವಿಸರ್ಜನೆ ಹಾಗೂ ಕಳೆ ಇಳಿಸುವ ಸಲುವಾಗಿ

ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ನೇತೃತ್ವದಲ್ಲಿ : ಕೊಲ್ಲೂರು ಕ್ಷೇತ್ರದಲ್ಲಿ ನಡೆದ ಶತ ಚಂಡಿ ಮಹಾ ಯಾಗ

ಕುಂದಾಪುರ: ಕೊಲ್ಲೂರಿನಲ್ಲಿ ಕಳೆದ ನಾಲ್ಕು ದಿನಗಳಿಂದ ಲೋಕ ಕಲ್ಯಾಣಾರ್ಥವಾಗಿ ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯುತ್ತಿದ್ದ ಚಂಡಿಕಾ ಪಾರಾಯಣ ಹಾಗೂ ಶತ ಚಂಡಿ ಮಹಾಯಾಗಕ್ಕೆ ಶುಕ್ರವಾರ ಮಧ್ಯಾಹ್ನ ಪೂರ್ಣಾಹುತಿ ನೀಡಲಾಯಿತು.ಕೊಲ್ಲೂರು ದೇವಳದ ಮೂರ್ತಿದಾರಕ ಮೂರ್ತಿ ಕಾಳಿದಾಸ ಭಟ್ ಅವರ ನಿವಾಸದಲ್ಲಿ ನಡೆದ ಶತ ಚಂಡಿ ಯಾಗಕ್ಕೆ ಋತ್ವಿಜರ ಮಂತ್ರ ಪಠಣದೊಂದಿಗೆ ಹೋಮ ಕುಂಡಕ್ಕೆ ವಿವಿಧ ಹವಿಸ್ಸುಗಳನ್ನು ಅರ್ಪಿಸುವ ಮೂಲಕ ಶುಕ್ರವಾರ ಮಧ್ಯಾಹ್ನ