Home Posts tagged #v4news karnataka (Page 3)

ಮಂಗಳೂರು: ಸಹೋದರರಿಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಮಂಗಳೂರು : ಕದ್ರಿ ಕಂಬಳದಲ್ಲಿರುವ ತಮ್ಮ ನಿವಾಸದಲ್ಲಿ ಇಬ್ಬರು ವೃದ್ಧೆಯರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಗಳವಾರ ಅಕ್ಟೋಬರ್ 3 ರಂದು ನಡೆದಿದೆ. ಮೃತರನ್ನು 70 ವರ್ಷ ವಯಸ್ಸಿನ ಲತಾ ಭಂಡಾರಿ ಮತ್ತು ಅವರ ಸಹೋದರಿ ಸುಂದರಿ ಶೆಟ್ಟಿ (80) ಎಂದು ಗುರುತಿಸಲಾಗಿದೆ. ಲತಾ ಭಂಡಾರಿಯವರ ಪತಿ ಜಗನಾಥ ಭಂಡಾರಿ ಎಂದಿನಂತೆ ಯಶರಾಜ್ ಬಾರ್‌ಗೆ ಕೆಲಸಕ್ಕೆ ಹೋಗಿದ್ದರು.

ಭಾವನೆಯ ಬಂಧದಿಂದ ಧರ್ಮ ಬೆಳೆಸೋಣ : ಕೊಂಡೆವೂರು ಶ್ರೀಗಳು

ದಿ.28.09.2023 ಗುರುವಾರ ಕೊಂಡೆವೂರು ಮಠದ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ 20 ನೇ ಚಾತುರ್ಮಾಸ್ಯದ ಮಂಗಲೋತ್ಸವ ತದಂಗವಾಗಿ ನಡೆದ 48 ಗಂಟೆಗಳ ಅಖಂಡ ಭಜನೆಯ ಮಂಗಲ ಕಾರ್ಯಕ್ರಮಗಳು ವಿಜೃಂಭಣೆಯಿAದ ನಡೆದವು. ಸಂಜೆ ನಡೆದ ಧಾರ್ಮಿಕ ಸಭೆಯಲ್ಲಿ ಶ್ರೀಗಳವರು ಆಶೀರ್ವಚನಗೈಯುತ್ತಾ “ ಮಠದ ಬೆಳವಣಿಗೆಗೆ ಭಕ್ತಿ,ಜೊತೆಗೆ ಭಾವನೆಗಳ ಹೃದಯ ಬಂಧ ಕಾರಣ. ಹೆತ್ತ ಮಾತೆಯಿಂದ ಅನೇಕ ಸಜ್ಜನ ಬಂಧುಗಳ ಭಾವನಾತ್ಮಕ ಮತ್ತು ಸರ್ವ ರೀತಿಯ ನೆರವಿನಿಂದ ಅನೇಕ ಚಟುವಟಿಕೆಗಳು

ಕಾಂಗ್ರೆಸ್ ಅಭ್ಯರ್ಥಿ  ಬೆಂಬಲಿಗರಿಂದ ಸಭ್ಯತೆ ಮೀರುವ, ಗೌರವ ಕೆಡಿಸುವ ಯತ್ನ:
ಸುನಿಲ್ ಕುಮಾರ್

ಕಾರ್ಕಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರವಿರುವ ಬೆಂಬಲಿಗರು ಸಾರ್ವಜನಿಕ ಸಭೆ,  ವೇದಿಕೆಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ವಯಕ್ತಿಕ ಟೀಕೆಗಳನ್ನು ಮಾಡುವುದು, ಕೀಳು ಮಟ್ಟದ ಪದ ಪ್ರಯೋಗಿಸುತ್ತಿರುವುದನ್ನು ಮಾಡುತ್ತಿದ್ದಾರೆ. ಈ ಎಲ್ಲ ನಡವಳಿಕೆಗಳು ಅನಾಗರಿಕ ಸಂಸ್ಕೃತಿಯಾಗಿದೆ. ಇಂತಹ ಸಭ್ಯತೆ ಮೀರಿದ ವರ್ತನೆ ಕಾರ್ಕಳದ ಗೌರವ ಕೆಡಿಸುವ ಯತ್ನವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ವಿ ಸುನಿಲ್‌ಕುಮಾರ್ ಹೇಳಿದ್ದಾರೆ.  ಕಾರ್ಕಳದ ಜನ ಗೌರವದಿಂದ ಬದುಕಿ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಸುಂದರ ಮೇರ ನಾಮಪತ್ರ ಸಲ್ಲಿಕೆ

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಸುಂದರ ಮೇರ ಏ.20ರಂದು ನಾಮಪತ್ರ ಸಲ್ಲಿಸಿದರು. ಮಿನಿ ವಿಧಾನಸೌಧದ ಚುನಾವಣಾ ಕಚೇರಿಯಲ್ಲಿನ ಚುನಾವಣಾಧಿಕಾರಿಕಚೇರಿಯಲ್ಲಿ ಕ್ಷೇತ್ರದ ಚುನಾವಣಾಧಿಕಾರಿ ಅರುಣ್‌ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಸಹಾಯಕ ಚುನಾವಣಾಧಿಕಾರಿಗಳಾದ ಜಿ.ಮಂಜುನಾಥ್, ರಮೇಶ್ ಬಾಬು ಸಹಕರಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಅಶೋಕ್ ಕೊಂಚಾಡಿ, ಜಯಪ್ರಕಾಶ್ ಕನ್ಯಾಡಿ,ಕರುಣಾಕರ ಪಳ್ಳತ್ತಡ್ಕ,

ಏ.14ರಂದುಕರಾವಳಿಯಾದ್ಯಂತ ಗೌಜಿ ಗಮ್ಮತ್ ತುಳು ಸಿನಿಮಾ ಬಿಡುಗಡೆ

ಮೋವಿನ್ ಫಿಲಮ್ಸ್ ಬ್ಯಾನರ್‍ನಡಿ ನಿರ್ಮಾಣವಾದ ತುಳು ಸಿನಿಮಾ `ಗೌಜಿ ಗಮ್ಮತ್’ ಏ.14ರಂದು ಕರಾವಳಿಯಾದ್ಯಂತ ಬಿಡುಗಡೆಗೊಳ್ಳಲಿದೆ. ಕರ್ಣ ಉದ್ಯಾವರ ಮೊದಲ ಬಾರಿಗೆ ನಾಯಕ ನಟನಾಗಿ ನಟಿಸಿದ್ದಾರೆ. ನಾಯಕಿಯಾಗಿ ಉಡುಪಿಯ ಸ್ವಾತಿ ಶೆಟ್ಟಿ ಸಾಥ್ ನೀಡಿದ್ದಾರೆ. ಈ ಚಿತ್ರದಲ್ಲಿ ದೊಡ್ಡ ತಾರಾಬಳಗವಿದ್ದು ಕರಾವಳಿಯ ಹಾಸ್ಯ ದಿಗ್ಗಜರೆಂದೇ ಖ್ಯಾತರಾದ ದೇವದಾಸ್ ಕಾಪಿಕಾಡ್, ನವೀನ್ ಡಿ. ಪಡೀಲ್, ಅರವಿಂದ್ ಬೋಳಾರ್, ಪ್ರಸನ್ನ ಶೆಟ್ಟಿ ಬೈಲೂರು, ಉಮೇಶ್ ಮಿಜಾರು

ಸುಬ್ರಹ್ಮಣ್ಯ: ಕರ್ನಾಟಕ ಜನತೆಯ ಸುಭೀಕ್ಷೆಗಾಗಿ ಧಾರ್ಮಿಕ ಕ್ಷೇತ್ರಕ್ಕೆ ಭೇಟಿ: ಸಿಎಂ ಬೊಮ್ಮಾಯಿ

ದ.ಕ ಜಿಲ್ಲೆಯ ಹಲವು ದೇವಸ್ಥಾನಕ್ಕೆ ಬೇಟಿ ನೀಡಿದ್ದೇನೆ. ಧರ್ಮಸ್ಥಳ, ಕೊಲ್ಲೂರು, ಕಟೀಲು ದೇವಸ್ಥಾನಗಳಿಗೆ ಹೆಚ್ಚಾಗಿ ಭೇಟಿ ನೀಡುತಿದ್ದು ಇಂದು ಕುಕ್ಕೆಶ್ರೀ ಸುಬ್ರಹ್ಮಣ್ಯ ಕ್ಕೆ ಭೇಟಿ ನೀಡಿ ಕರ್ನಾಟಕ ಜನತೆಯ ಸುಭೀಕ್ಷೆಗಾಗಿ ಪ್ರಾರ್ಥಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಅವರು  ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಮಾದ್ಯಮದೊಂದಿಗೆ ಹೇಳಿದರು. ಧರ್ಮಸ್ಥಳ ಕ್ಕೆ ಆಗಮಿಸಿದ ಬಳಿಕ ಹೆಲಿಕಾಪ್ಟರ್ ಮೂಲಕ

ಏ.16 : ಅಣಿಲೆ ವೆಂಕಪ್ಪ ರೈ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಪುತ್ತೂರು: ಡಾ.ಪಿ.ಬಿ.ರೈ ಪ್ರತಿಷ್ಠಾನದ ನೂಜಿ ತರವಾಡು ಮನೆ ಮಾಡಾವು ಇದರ ವತಿಯಿಂದ ದಿ.ಅಣಿಲೆ ವೆಂಕಪ್ಪ ರೈಗಳ ಹೆಸರಿನಲ್ಲಿ ಕಳೆದ 25 ವರ್ಷಗಳಿಂದ ಪ್ರದಾನ ಮಾಡಲಾಗುತ್ತಿರುವ `ಅಣಿಲೆ ವೆಂಕಪ್ಪ ರೈ’ ಪ್ರಶಸ್ತಿಯನ್ನು ಈ ಬಾರಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡ ನಾಲ್ವರಿಗೆ ಪ್ರದಾನ ಮಾಡಲಾಗುವುದು ಎಂದು ಡಾ.ಪಿ.ಬಿ.ರೈ ಪ್ರತಿಷ್ಠಾನದ ಗೌರವಾಧ್ಯಕ್ಷ ಕಾವು ಹೇಮನಾಥ ಶೆಟ್ಟಿಯವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿ ಪ್ರದಾನ

ಬಿಸಿಸಿಐ ವತಿಯಿಂದ `ಹೊಟೇಲ್ ತಾಜ್ ವಿವಾಂತದಲ್ಲಿ ಇಫ್ತಾರ್ ಕೂಟ

ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ (ಬಿಸಿಸಿಐ) ಮಂಗಳೂರು ಇದರ ವತಿಯಿಂದ ಇಫ್ತಾರ್ ಕೂಟವು ನಗರದ ಹೊಟೇಲ್ ತಾಜ್ ವಿವಾಂತ' ಹೊಟೇಲ್ ನಲ್ಲಿ ನಡೆಯಿತು. ಈ ಸಂದರ್ಭ ರಮಝಾನ್ ತಿಂಗಳು ಮತ್ತು ಝಕಾತ್ ವಿಚಾರವಾಗಿ ಕಚ್ಚಿ ಮೆಮನ್ ಮಸ್ಜಿದ್‍ನ ಖತೀಬ್ ವೌಲಾನ ಶುಹೈಬ್ ನದ್ವಿ ವಿಶೇಷ ಉಪನ್ಯಾಸ ನೀಡಿದರು.ರಮಝಾನ್ ಅಲ್ಲಾಹನ ಉಡುಗೊರೆಯಾಗಿದೆ. ಸೀಮಿತ ಅವಧಿಯಲ್ಲಿ ನೂರಾರು ಪಟ್ಟು ಪುಣ್ಯ ಸಂಪಾದಿಸುವ ಈ ತಿಂಗಳ ಮಹತ್ವವನ್ನು ಪ್ರತಿಯೊಬ್ಬ ಮುಸಲ್ಮಾನ

ರಾಜ್ಯದಲ್ಲಿ ರಂಗೇರಿದ ರಾಜಕೀಯ ಚಟುವಟಿಕೆ

ರಾಜ್ಯ ವಿಧಾನಸಭೆ ಚುನಾವಣೆಗೆ ನಾಳೆ ಅಧಿಸೂಚನೆ ಪ್ರಕಟವಾಗಲಿದ್ದು, ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಏ 20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಏಪ್ರಿಲ್ 21ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ.ಏಪ್ರಿಲ್ 24ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ಮೇ 10 ರಂದು ಮತದಾನ, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದಲ್ಲಿ ಒಂದೇ ಹಂತದಲ್ಲಿ ಮೇ 10 ರಂದು ಮತದಾನ ನಡೆಯಲಿದ್ದು, ನಾಳೆ ಅಧಿಸೂಚನೆ ಪ್ರಕಟಿಸುವುದರೊಂದಿಗೆ

ಎಲಾನ್ ಮಸ್ಕ್ ಈಗ ಪ್ರಧಾನಿ ಮೋದಿ ಯ ಫಾಲೋವರ್

ಟ್ವಿಟರ್‌ ಹಾಗೂ ಟೆಸ್ಲಾ ಸಂಸ್ಥೆಯ ಮುಖ್ಯಸ್ಥ ಎಲಾನ್‌ ಮಸ್ಕ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಫಾಲೋ ಮಾಡುತ್ತಿದ್ದು, ಈ ವಿಚಾರ “ಈಗ ಭಾರತಕ್ಕೆ ಟೆಸ್ಲಾ ಕಾಲಿಡುವ ಮುನ್ಸೂಚನೆಯೇ’ ಎಂದು ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಟ್ವಿಟರ್‌ನಲ್ಲಿ ಅತ್ಯಧಿಕ ಫಾಲೋವರ್ಸ್‌ ಹೊಂದಿರುವ ಮಸ್ಕ್ 195 ಮಂದಿಯನ್ನು ಮಾತ್ರ ಫಾಲೋ ಮಾಡುತ್ತಿದ್ದು, ಈ ಪೈಕಿ ಇತ್ತೀಚೆಗಷ್ಟೇ ಮೋದಿ ಕೂಡ ಸೇರ್ಪಡೆಗೊಂಡಿದ್ದಾರೆ. ಮೋದಿ ಅವರನ್ನು ಫಾಲೋ ಮಾಡುತ್ತಿರುವ