Home Posts tagged #vitla (Page 2)

ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ

ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ಸರಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಶಾಂತ್ ಮೇಗಿನಪೇಟೆ ( 30) ಮೃತರು. ಕೌಟುಂಬಿಕ ಕಿರಿಕಿರಿ ಹಿನ್ನೆಲೆ ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಮೃತರು ಪತ್ನಿ, ಮಗು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಮಾಣಿಲ : ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತ್ಯು

ರಿಕ್ಷಾ ಪಲ್ಟಿಯಾಗಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಮಾಣಿಲ ತಿರುವಿನಲ್ಲಿ ನಡೆದಿದೆ. ಮೃತ ಆಟೋ ಚಾಲಕನನ್ನು ಸುಬ್ರಹ್ಮಣ್ಯ ಪಂಜ ನಿವಾಸಿ ಸುದರ್ಶನ್ (35) ಎಂದು ಗುರುತಿಸಲಾಗಿದೆ.ಸುದರ್ಶನ್ ಹಾಗೂ ಮತ್ತೋರ್ವ ನಿನ್ನೆ ರಾತ್ರಿ ಮಾಣಿಲ ಬಾವಲಿಮೂಲೆಗೆ ಬರುತ್ತಿದ್ದ ವೇಳೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಗಂಭೀರ ಗಾಯಗೊಂಡ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆನ್ನಲಾಗಿದೆ. ಆಟೋ ರಿಕ್ಷಾದಲ್ಲಿದ್ದ ಇನ್ನೋರ್ವ ವ್ಯಕ್ತಿಗೆ ಅಲ್ಪಸ್ವಲ್ಪ

ವಿಟ್ಲ: ಬಸ್‌ ಡ್ರೈವರ್‌ ಹೃದಯಾಘಾತದಿಂದ ನಿಧನ

ವಿಟ್ಲ: ಖಾಸಗಿ ಬಸ್‌ನ ಡ್ರೈವರ್‌ ಹೃದಯಾಘಾತದಿಂದ ನಿಧನರಾದ ಘಟನೆ ಕನ್ಯಾನ ಬಂಡಿತ್ತಡ್ಕ ಸಮೀಪ ನಡೆದಿದೆ. ಕನ್ಯಾನ ಬಂಡಿತ್ತಡ್ಕ ನಿವಾಸಿ ರಮೇಶ್ (42) ಮೃತರು. ರಮೇಶ್ ರವರು ಖಾಸಗಿ ಬಸ್‌ನ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಸೌಮ್ಯ ಸ್ವಭಾವದವರಾದ ರಮೇಶ್ ಎಲ್ಲರಿಗೂ ಪ್ರೀತಿ ಪಾತ್ರರಾಗಿದ್ದ ರು. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು

ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಮಾಣಿ ಸುರಿಕುಮೇರು ಬಳಿ ನಡೆದಿದೆ. ಇರ್ಷಾದ್ ಉಮರ್( 33)ಮೃತ ಯುವಕ.ಇವರು ವಿದೇಶದಲ್ಲಿ ಉದ್ಯೋಗದಲ್ಲಿದ್ದು ಇತ್ತೀಚೆಗೆ ಅನಾರೋಗ್ಯದ ಹಿನ್ನೆಲೆ ಊರಿಗೆ ಬಂದಿದ್ದರು. ಅವರಿಗೆ ಆಸ್ಪತ್ರಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.ಅವರಿಗೆ ರಕ್ತದ ಅವಶ್ಯಕತೆ ಇದ್ದಾಗ ಸಾಮಾಜಿಕ ಜಾಲತಾಣಗಳ ಮೂಲಕ‌ ಸಂಗ್ರಹಿಸಲಾಗಿತ್ತು. ಆದರೆ ನಿನ್ನೆ ಚಿಕಿತ್ಸೆ ಫಲಿಸದೆ

ರಸ್ತೆಯಲ್ಲಿ ದನ ಅಡ್ಡ ಬಂದ ಹಿನ್ನಲೆ : ರಿಕ್ಷಾ ಮಗುಚಿ ಬಿದ್ದು ಜಖಂ

ವಿಟ್ಲ: ಸಾರಡ್ಕ – ಪುಣಚ ರಸ್ತೆಯ ತೋರಣಕಟ್ಟೆಯ ಸೊಸೈಟಿಯ ಸಮೀಪ ಮಂಗಳವಾರ ದನ ರಸ್ತೆಯಲ್ಲಿ ಅಡ್ಡ ಬಂದ ಹಿನ್ನಲೆಯಲ್ಲಿ ರಿಕ್ಷಾವೊಂದು ಮಗುಚಿ ಬಿದ್ದು ಜಖಂಗೊಂಡಿದೆ. ಆಜೇರು ನಿವಾಸಿ ಶಾಂತಾರಾಮ ರಾವ್ ಅವರು ರಿಕ್ಷಾದಲ್ಲಿ ಮಂಗಳವಾರ ಬೆಳಗ್ಗೆ ತೋರಣಕಟ್ಟೆಯಿಂದ ಪರಿಯಲ್ತಡ್ಕಕ್ಕೆ ಹಾಲು ಸಾಗಾಟ ಮಾಡುತ್ತಿದ್ದ ಸಂದರ್ಭ ಘಟನೆ ನಡೆದಿದೆ. ಘಟನೆಯಿಂದ ರಿಕ್ಷಾದಲ್ಲಿ ಇದ್ದ ಸುಮಾರು ೫೦ಲೀಟರ್ ಹಾಲು ರಸ್ತೆಗೆ ಚೆಲ್ಲಲ್ಪಟ್ಟಿದೆ. ರಿಕ್ಷಾ ಚಾಲನೆ ಮಾಡುತ್ತಿದ್ದ ಶಾಂತಾರಾಮ

ವಿಟ್ಲ: ದಾರಿ ಕೇಳುವ ನೆಪದಲ್ಲಿ ಮಹಿಳೆಯ ಜೊತೆ ಅಸಭ್ಯ ವರ್ತನೆ

ವಿಟ್ಲ: ದಾರಿ ಕೇಳುವ ನೆಪದಲ್ಲಿ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಅಬೂಬಕ್ಕರ್ ಕೆ (46) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ದೂರಿನಲ್ಲೇನಿದೆ?: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ:13-05-2023 ರಂದು ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮದ ಬನ ಎಂಬಲ್ಲಿ ಮೋಟಾರ್ ಸೈಕಲ್ ನಲ್ಲಿ ಬಂದ ಅಪರಿಚಿತ

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ

ವಿಟ್ಲ: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ವಿಟ್ಲದ ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ವಿಟ್ಲ ಮಹಾತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಬಳಿಕ ವಿಟ್ಲ ಕೇಂದ್ರ ಜುಮ್ಮಾ ಮಸೀದಿ, ವಿಟ್ಲ ಶೋಕಮಾತೆ ಇಗರ್ಜಿಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಹೇಮನಾಥ ಶೆಟ್ಟಿ ಕಾವು, ಎಂ ಎಸ್ ಮಹಮ್ಮದ್, ರಾಜಾರಾಮ್ ಕೆ.ಬಿ, ರಮಾನಾಥ ವಿಟ್ಲ, ಶ್ರೀನಿವಾಸ ಶೆಟ್ಟಿ ಕೊಲ್ಯ, ವಿಕೆಎಂ ಅಶ್ರಪ್,

ವಿಟ್ಲದಲ್ಲಿ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ರೋಡ್ ಶೋ

ಭಾರತದಲ್ಲಿ ಕಾಂಗ್ರೆಸ್ ಬೇಡ ಎಂಬ ನಿರ್ಧಾರಕ್ಕೆ ಜನ ಬಂದಿದ್ದಾರೆ. ಕರ್ನಾಟಕದಲ್ಲಿ ಮಾಡಿದ ಕೆಲಸ ಕಾರ್ಯದ ಹಿನ್ನಲೆಯಲ್ಲಿ ಅದರ ಪ್ರಚಾರಕ್ಕೆ ರಾಷ್ಟ್ರ ನಾಯಕರು ರಾಜ್ಯಕ್ಕೆ ಆಗಮಿಸಿದ್ದಾರೆ. ಕಾಂಗ್ರೆಸ್ ರಿವರ್ಸ್ ಗೇರ್ ನಲ್ಲಿ ಹೋಗುತ್ತಿದ್ದು, ಬಿಜೆಪಿ ಡಬ್ಬಲ್ ಇಂಜಿನ್ ನಲ್ಲಿ ಹೋಗುತ್ತಿದೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದರು. ಅವರು ವಿಟ್ಲ ಮುಖ್ಯ ರಸ್ತೆಯಲ್ಲಿ ರೋಡ್ ಶೋ ನಡೆಸಿ, ಜೈನ ಬಸದಿ ಸಮೀಪದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ : ವಿಟ್ಲ ವ್ಯಾಪ್ತಿಯಲ್ಲಿ ತಪಾಸಣಾ ಕೇಂದ್ರಗಳ ಸ್ಥಾಪನೆ

ವಿಟ್ಲ: ಚುನಾವಣಾ ನೀತಿ ಜಾರಿಯಾಗುತ್ತಿದ್ದಂತೆ ತಪಾಸಣಾ ಕೇಂದ್ರಗಳನ್ನು ಅಳವಡಿಸಲಾಗಿದೆ. ಶಾಶ್ವತವಾದ ಚೆಕ್ ಪೆÇೀಸ್ಟ್ ಹೊರತಾಗಿ ಬಿಟ್ಟಿರುವ ರಸ್ತೆಗಳನ್ನು ಸೇರಿಸಿ ಒಳ ಮಾರ್ಗಗಳಿಗೆ ಹೆಚ್ಚುವರಿ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಮುಂದಿನ ಎರಡು ದಿನದಲ್ಲಿ ಪ್ಯಾರಾ ಮಿಲಿಟರಿಯನ್ನು ಕರೆಸಿಕೊಳ್ಳಲಾಗುತ್ತಿದ್ದು, ಅವರಿಂದಲೂ ತಪಸಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಪಶ್ಚಿಮ ವಲಯ ಐ.ಜಿ. ಡಾ. ಚಂದ್ರಗುಪ್ತ ಹೇಳಿದರು. ಚುನಾವಣಾ ಹಿನ್ನಲೆಯಲ್ಲಿ

ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ : 11ನೇ ಸಾಲೆತ್ತೂರು ಶಾಖೆಯ ಶುಭಾರಂಭ

ಬಂಟ್ವಾಳ: ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ 11ನೇ ಸಾಲೆತ್ತೂರು ಶಾಖೆ ಸಾಲೆತ್ತೂರಿನ ರಥನ್ ಕಾಂಪ್ಲೆಕ್ಸ್‍ನಲ್ಲಿ ಶುಭಾರಂಭಗೊಂಡಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ನೂತನ ಶಾಖೆಯನ್ನು ಉದ್ಘಾಟಿಸಿದರು. ಅವರು ಮಾತನಾಡಿ ಮೂರ್ತೆದಾರಿಕೆ ಕಡಿಮೆಯಾಗುತ್ತ ಬರುತ್ತಿದ್ದಂತೆಯೇ ಮೂರ್ತೆದಾರರ ಸಹಕಾರಿ ಸಂಘವನ್ನು ಸ್ಥಾಪನೆ ಮಾಡುವ ಮೂಲಕ ಬ್ಯಾಂಕಿಂಗ್ ಕ್ಷೇತ್ರಕ್ಕೆ ಕಾಲಿಟ್ಟ ಪರಿಣಾಮ ಇಂದು