Header Ads
Header Ads
Breaking News

ಜುಲೈ 28ರಂದು ಡ್ರೈವ್ ಡೇ ಆಚರಿಸಲು ನಿರ್ಧಾರ : ದ.ಕ. ಡಿಸಿ ಸಸಿಕಾಂತ್ ಸೆಂಥಿಲ್ ಮಾಹಿತಿ

ದ.ಕ. ಜಿಲ್ಲೆಯಲ್ಲಿ ಬಹುಮುಖ್ಯವಾಗಿ ಮಂಗಳೂರು ನಗರವನ್ನು ಕಾಡುತ್ತಿರುವ ಸಾಂಕ್ರಾಮಿಕ ರೋಗವಾದ ಡೆಂಗ್ ಸಂಪೂರ್ಣ ನಿಯಂತ್ರಣಕ್ಕೆ ಸಂಬಂಧಿಸಿ ಸೊಳ್ಳೆಗಳ ಲಾರ್ವಾ ನಾಶಕ್ಕೆ ವಿಶೇಷ ಒತ್ತು ನೀಡಿರುವ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಜು.28ರಂದು ‘ಡ್ರೈವ್ ಡೇ’ ಆಚರಿಸಲು ನಿರ್ಧರಿಸಿದ್ದಾರೆ. ಈ ದಿನ ಬೆಳಗ್ಗೆ 10 ಗಂಟೆಯಿಂದ 11ರವರೆಗೆ ಸಾರ್ವಜನಿಕರೆಲ್ಲರೂ ತಮ್ಮ ಮನೆ ಹಾಗೂ ಸುತ್ತಮುತ್ತಲಿನಲ್ಲಿ ತೆರೆದ ಪ್ರದೇಶ ಹಾಗೂ ವಸ್ತುಗಳಲ್ಲಿ ಸಂಗ್ರಹವಾಗಿರುವ ಎಲ್ಲಾ ನೀರನ್ನು ಬರಿದು ಮಾಡಿ ಸ್ವಚ್ಛಗೊಳಿಸುವ ಜತೆಗೆ ಆ ಸ್ಥಳಗಳಲ್ಲಿರುವ ಲಾರ್ವಾವನ್ನು ಪತ್ತೆ ಹಚ್ಚಿ ನಾಶ ಮಾಡುವಂತೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಮಾಧ್ಯಮ ಸಂವಾದದ ಮೂಲಕ ಮನವಿ ಮಾಡಿದ್ದಾರೆ.

ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆದ ಸಂವಾದ ಕಾರ್ಯಕ್ರಮದಲ್ಲಿ ಈ ಘೋಷಣೆ ಮಾಡಿದ ಅವರು, ಜಿಲ್ಲಾಡಳಿತದ ವತಿಯಿಂದ ಈ ಕಾರ್ಯದಲ್ಲಿ ಸಾರ್ವಜನಿಕರೆಲ್ಲರೂ ಪಾಲ್ಗೊಂಡು ಮನೆಗಳಿಂದ ಸೊಳ್ಳೆಯನ್ನು ಮುಕ್ತಗೊಳಿಸಿ ಡೆಂಗ್ ರೋಗದಿಂದ ರಕ್ಷಿಸಿಕೊಳ್ಳಲು ತಮ್ಮ ಸಹಕಾರವನ್ನು ನೀಡಬೇಕು ಎಂದು ಕೋರಿದರು.

ಸದ್ಯ ನಗರದಲ್ಲಿ ಡೆಂಗ್ ಹಾವಳಿ ಹೆಚ್ಚಿರುವುದರಿಂದ ನಗರದಲ್ಲಿ ರವಿವಾರ ‘ಡ್ರೈವ್ ಡೇ’ ಆಚರಿಸಲಾಗುವುದು, ಮುಂದೆ ತಾಲೂಕುಗಳಲ್ಲಿಯೂ ಅಭಿಯಾನವನ್ನು ಮುಂದುವರಿಸಲಾಗುವುದು. ಡೆಂಗ್ನಂತಹ ಸಾಂಕ್ರಾಮಿಕ ರೋಗವನ್ನು ಹರಡುವ ಸೊಳ್ಳೆಗಳ ನಾಶಕ್ಕೆ ಫಾಗಿಂಗ್ ಯಾವುದೇ ರೀತಿಯಲ್ಲಿ ಪರಿಹಾರವಲ್ಲ ಎಂಬುದು ಸ್ಪಷ್ಟಗೊಂಡಿದೆ. ಡೆಂಗ್ ನಿಯಂತ್ರಣಕ್ಕೆ ಮುಖ್ಯವಾಗಿ ಸೊಳ್ಳೆಗಳ ಲಾರ್ವಾ ನಾಶವೊಂದೇ ಸದ್ಯದ ಪರಿಹಾರ. ಅದಕ್ಕಾಗಿ ಆ ನಿಟ್ಟಿನಲ್ಲಿ ಹೆಚ್ಚಿನ ಆದ್ಯತೆ ಹಾಗೂ ಗಮನಹರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.

ಆನಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಕೃಷ್ಣ ರಾವ್ ಮಾತನಾಡಿ, ಡೆಂಗ್ಗೆ ಕಾರಣವಾದ ಈಡಿಸ್ ಇಜಿಪ್ಟೈ ಸೊಳ್ಳೆ ಮನೆಯೊಳಗಿದ್ದೇ ಮಾನವರನ್ನು, ಪ್ರಾಣಿಗಳನ್ನು ಕಚ್ಚಿ ರೋಗವನ್ನು ಹರಡುತ್ತವೆ. ಅತೀ ಸಣ್ಣ ಪ್ರಮಾಣದ ಸ್ವಚ್ಛ ನೀರಿನಲ್ಲಿ ಮೊಟ್ಟೆ ಇಟ್ಟು ಮರಿ ಹಾಕಿ ಸೋಂಕು ಹರಡುವ ಈ ಸೊಳ್ಳೆಗಳು ಹಗಲು ಹೊತ್ತಿನಲ್ಲೇ ಮನುಷ್ಯರನ್ನು ಕಚ್ಚುತ್ತವೆ ಎಂದರು.

ಸಾಂಕ್ರಾಮಿಕ ರೋಗಗಳಿಂದ ಸಾವನ್ನಪ್ಪಿದವರಿಗೆ ಸರಕಾರದಿಂದ ಈವರೆಗೆ ಯಾವುದೇ ರೀತಿಯ ಪರಿಹಾರವಿಲ್ಲ. ಇತ್ತೀಚೆಗೆ ಜಿಲ್ಲೆಯಲ್ಲಿ ಡೆಂಗ್ನಿಂದ ಸಾವನ್ನಪ್ಪಿದ್ದವರಿಗೆ ಪರಿಹಾರ ಒದಗಿಸುವಂತೆ ಸರಕಾರಕ್ಕೆ ಮನವಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಸಂವಾದದಲ್ಲಿ ಎ.ಜೆ. ಆಸ್ಪತ್ರೆಯ ಡೀನ್ ಡಾ. ಅಶೋಕ್ ಹೆಗ್ಡೆ, ಡಾ.ಸಚ್ಚಿದಾನಂದ, ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹೀಂ ಅಡ್ಕಸ್ಥಳ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *