Header Ads
Breaking News

ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಬಗ್ಗೆ ವದಂತಿ ವಿಚಾರ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಟ್ವೀಟ್

ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿರುವ ಹೊಸ ಆಯುಷ್ ಕಟ್ಟಡದಲ್ಲಿ ಎರಡು ಕೋವಿಡ್ ಬ್ಲಾಕ್ ನಿರ್ಮಿಸಲಾಗಿದೆ. ಅಲ್ಲಿ ಕೋವಿಡ್ ರೋಗಿಗಳನ್ನು ಮಾತ್ರ ನೋಡಲಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು.ಬಿ.ರೂಪೇಶ್ ಹೇಳಿದ್ದಾರೆ. ತಪಾಸಣೆ ವೇಳೆ ಪಾಸಿಟಿವ್ ಬಂದ್ರೆ ವಿಶೇಷ ವಾರ್ಡ್ ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತದೆ. ನೆಗೆಟಿವ್ ಬಂದ್ರೆ ಹೋಂ ಕ್ವಾರಂಟೈನ್ ಗೆ ಕಳುಹಿಸಲಾಗುತ್ತದೆ ಎಂದ ಅವರು ಯಾರೂ ಪ್ಯಾನಿಕ್ ಆಗ್ಬೇಡಿ ಎಂದು ಮನವಿ ಮಾಡಿದ್ದಾರೆ.. ಇನ್ನೂ ವೆನ್ಲಾಕ್ ಆಡಿಯೋ ವಿಚಾರವಾಗಿ ಟ್ವೀಟ್ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು, ಈ ವಿಚಾರ ಕುರಿತು ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಂಡಿದೆ.. ಅಲ್ಲದೇ ಹಿರಿಯ ಅನುಭವಿ ಆಊಔ ಅವರನ್ನು ನಿಯುಕ್ತಿಗೊಳಿಸಲಾಗಿದೆ.. ಕೊರೊನಾ ಪಾಸಿಟಿವ್ ವ್ಯಕ್ತಿಯನ್ನು ಕಟ್ಟುನಿಟ್ಟಾಗಿ ಚಿಕಿತ್ಸೆಗೊಳಪಡಿಸಲಾಗುತ್ತಿದೆ. ಅಲ್ಲದೇ ಸಂಸದ ನಳಿನ್ ಕುಮಾರ್ ಕಟೀಲು ಸ್ಥಳದಲ್ಲಿ ಇದ್ದು ಎಲ್ಲವನ್ನು ನೋಡಿಕೊಳ್ಳುತ್ತಿದ್ದಾರೆ ಅಂತ ಹೇಳಿದ್ದಾರೆ..

Related posts

Leave a Reply

Your email address will not be published. Required fields are marked *