Header Ads
Header Ads
Breaking News

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ : ಅಭ್ಯರ್ಥಿಗಳ ಪರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಚಾರ

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಚುನಾವಣಾ ಅಭ್ಯರ್ಥಿಗಳ ಮತ ಪ್ರಚಾರವು ಬಿರುಸಿನಿಂದ ಸಾಗಿದೆ. ಇತ್ತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಭ್ಯರ್ಥಿಗಳ ಪರ ಫೀಲ್ಡ್‌ಗೆ ಇಳಿದಿದ್ದಾರೆ. ನಗರದ ಕೋಡಿಕಲ್ ಪರಿಸರದ ವ್ಯಾಪ್ತಿಯಲ್ಲಿ ಬಂಗ್ರ ಕೂಳೂರು ವಾರ್ಡ್‌ನ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಹಾಗೂ ದೇರೆಬೈಲ್ ಉತ್ತರ ವಾರ್ಡಿನ ಅಭ್ಯರ್ಥಿ ಮನೋಜ್ ಕುಮಾರ್ ಪರ ನಳಿನ್ ಕುಮಾರ್ ಬಿರುಸಿನ ಪ್ರಚಾರ ನಡೆಸಿದ್ರು.  ಮನೆ ಮನೆಗೆ ತೆರಳಿ ಮತದಾರರ ಮನವೊಲಿಸುವ ಪ್ರಯತ್ನ ನಡೆಸಿದ್ರು. ನಳಿನ್‌ಗೆ ಶಾಸಕ ಡಾ|ವೈ.ಭರತ್ ಶೆಟ್ಟಿ ಸೇರಿದಂತೆ ಕಾರ್ಯಕರ್ತರು ಸಾಥ್ ನೀಡಿದ್ರು. ಈ ಸಂದರ್ಭದಲ್ಲಿ ವಿ೪ನ್ಯೂಸ್‌ನೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕಾಂಗ್ರೆಸ್ ಪಕ್ಷದೊಳಗಿನ ಒಳಜಗಳವೇ ಈ ಬಾರಿ ಬಿಜೆಪಿ ಅಭ್ಯರ್ಥಿಗಳಿಗೆ ವರದಾನವಾಗಲಿದೆ. ಮಾತ್ರವಲ್ಲ ಕಾಂಗ್ರೆಸ್ ಪಕ್ಷವನ್ನ ತಿರಸ್ಕಾರ ಮಾಡಿ ಬಿಜೆಪಿಗೆ ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರವನ್ನು ಜನತೆ ನೀಡಲಿದ್ದಾರೆ ಅಂತಾ ವಿಶ್ವಾಸ ವ್ಯಕ್ತಪಡಿಸಿದ್ರು.

Related posts

Leave a Reply

Your email address will not be published. Required fields are marked *