
ಕರ್ನಾಟಕ ರಾಜ್ಯ ಕುಂಬಾರರ ಕುಲಾಲರ ಯುವ ವೇದಿಕೆಗಳ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಮಂಗಳೂರು ಇದರ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪದಪ್ರಧಾನ ಸಮಾರಂಭ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಬಂಟ್ವಾಳದ ಪೊಸಳ್ಳಿಯ ಕುಲಾಲ ಸಮುದಾಯ ಭವನದಲ್ಲಿ ನಡೆಯಿತು.
ನೂತನ ಅಧ್ಯಕ್ಷ ಸತೀಶ್ ಜಕ್ರಿಬೆಟ್ಟು, ಕಾರ್ಯದರ್ಶಿ ಪುನೀತ್, ಕೋಶಾಧಿಕಾರಿ ಕವಿರಾಜ್ ಚಂದ್ರಿಗೆ, ಜಿಲ್ಲಾ ಪ್ರತಿನಿಧಿಯಾಗಿ ಕಾರ್ತಿಕ್ ಮಯ್ಯರ ಬೈಲು ಹಾಗೂ ಪದಾಧಿಕಾರಿಗಳಿಗೆ ಪದಪ್ರದಾನ ಮಾಡಲಾಯಿತು. ಬಳಿಕ ನಿರ್ಗಮನ ಅಧ್ಯಕ್ಷ ಸುಕುಮಾರ್ ಬಂಟ್ವಾಳ್ ಅವರನ್ನು ಸನ್ಮಾನಿಸಲಾಯಿತು. ಚಿತ್ರನಟ ವಿಶ್ವನಾಥ್ಅಸೈಗೋಳಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ಅನಾರೋಗ್ಯದಿಂದ ಬಳಲುತ್ತಿರುವ ನೀಲಮ್ಮ ಮಡಂತ್ಯಾರು ಅವರಿಗೆ ಆರ್ಥಿಕ ನೆರವು ನೀಡಲಾಯಿತು. ಇದೇ ವೇಳೆ ಕುಂಬಾರ ಕುಲಾಲ ಯುವ ವೇದಿಕೆಯ ಸ್ಥಾಪಕಾಧ್ಯಕ್ಷ ಡಾ. ಅಣ್ಣಯ್ಯ ಕುಲಾಲ್, ಯುವ ವೇದಿಕೆಯ ಸ್ಥಾಪಕಾಧ್ಯಕ್ಷ ತೇಜಸ್ವಿ ರಾಜ್, ಲಯನ್ಸ್ ಕ್ಲಬ್ ಬಂಟ್ವಾಳದ ಅಧ್ಯಕ್ಷ ಕೃಷ್ಣಶ್ಯಾಂ, ಯುವ ವೇದಿಕೆಯ ಜಿಲ್ಲಾಧ್ಯಕ್ಷ ಸುಧಾಕರ ಸಾಲ್ಯಾನ್ ಸುರತ್ಕಲ್, ಮತ್ತಿತರರು ಉಪಸ್ಥಿತರಿದ್ದರು. ಬಳಿಕ ವಿವಿಧ ಸ್ಪರ್ಧಾ ಕೂಟಗಳು ನಡೆದವು.