Header Ads
Header Ads
Header Ads
Breaking News

ಸುರತ್ಕಲ್ ಬಂಟರ ಸಂಘದ ವತಿಯಿಂದ ಅಜಾತಶತ್ರು ಕೆ. ಪ್ರಕಾಶ್ ಶೆಟ್ಟಿಯವರಿಗೆ ಪ್ರಕಾಶಾಭಿನಂದನಾ ಕಾರ್ಯಕ್ರಮ

ಸುರತ್ಕಲ್ ಬಂಟರ ಸಂಘದ ವತಿಯಿಂದ ಅಜಾತಶತ್ರು ಕೆ. ಪ್ರಕಾಶ್ ಶೆಟ್ಟಿಯವರಿಗೆ ಪ್ರಕಾಶಾಭಿನಂದನಾ ಕಾರ್ಯಕ್ರಮವನ್ನು ಡಿಸೆಂಬರ್ ೨೫ರಂದು ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಪೂರ್ವಭಾವಿ ಸಭೆಯು ಸುರತ್ಕಲ್‌ನ ಬಂಟರ ಭವನದಲ್ಲಿ ನಡೆಯಿತು.

ಅಜಾತಶತ್ರು-ಸ್ನೇಹಮಯಿ-ದಾನಶೂರ ಕೆ. ಪ್ರಕಾಶ್ ಶೆಟ್ಟಿಯವರನ್ನು ಉಭಯ ಜಿಲ್ಲೆಯ ವತಿಯಿಂದ ಡಿಸೆಂಬರ್ ೨೫ರಂದು ಬಂಟರ ಸಂಘದ ವತಿಯಿಂದ ಅಭಿನಂದಿಸಲಿದ್ದು, ಆ ಪ್ರಯುಕ್ತ ಸುರತ್ಕಲ್‌ನ ಬಂಟರ ಭವನದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಕಾಶಾಭಿನಂದನಾ ಸಮಿತಿಯ ಅಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿಯವರು, ಪ್ರಕಾಶ್ ಶೆಟ್ಟಿಯವರ60ಸಂಭ್ರಮೋತ್ಸವವನ್ನು ಆಚರಿಸಲು ಈಗಾಗಲೇ ತಯಾರಿಯನ್ನು ಮಾಡುತ್ತಾ ಇದ್ದೇವೆ. ವಿನೂತನ ರೀತಿಯಲ್ಲಿ ಕಾರ್ಯಕ್ರಮವನ್ನು ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಈ ಸಂದರ್ಭ ಪೂರ್ವಭಾವಿ ಸಭೆಯಲ್ಲಿ ಪ್ರಧಾನ ಸಂಚಾಲಕರಾದ ಸಂತೋಷ್ ಶೆಟ್ಟಿ ಪುಣೆ, ಜಯಕರ್ ಶೆಟ್ಟಿ ಇಂದ್ರಾಳಿ, ಸುರೇಶ್ಚಂದ್ರ ಶೆಟ್ಟಿ, ಸುಧಾಕರ್ ಮತ್ತಿತರರು ಭಾಗವಹಿಸಿದ್ದರು.

Related posts

Leave a Reply

Your email address will not be published. Required fields are marked *